ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಕ್ಯಾಂಟಿನ್‌ಗೆ ನುಗ್ಗಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಗುಳಗಳಲೆ ಸಮೀಪ ಮಂಗಳವಾರ ನಡೆದಿದೆ.
ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಗಳು ವೀರೇಶ್ ಮತ್ತು ಮತ್ತೋರ್ವ ಲಾರಿ ಸಿಬ್ಬಂದಿ ಎಂದು ತಿಳಿದುಬಂದಿದೆ.
ವೀರೇಶ್ ಎಂಬುವವರು ಚಿತ್ರದುರ್ಗ ಮೂಲದವರು, ಇವರು ಗಾರೆ ಕೆಲಸಕ್ಕಾಗಿ ಬಂದಿದ್ದರು ಎಂದು ತಿಳಿದುಬಂದಿದೆ. ಇನ್ನೋರ್ವ ಮೃತ ವ್ಯಕ್ತಿ ಲಾರಿಯ ಸಿಬ್ಬಂದಿ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಸಕಲೇಶಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿದ್ದೀರಾ?ಹಾಸನ l ಅಭಿವೃದ್ಧಿ ಕುಂಠಿತ, ಕೆ ಎನ್ ರಾಜಣ್ಣ ಜಿಲ್ಲಾ ಉಸ್ತುವಾರಿ ಬದಲಿಸಿ; ಬನವಾಸೆ ರಂಗಸ್ವಾಮಿ
ಕ್ಯಾಂಟಿನ್ ಮುಂದೆ ನಿಲ್ಲಿಸಿದ್ದ ಬೈಕ್‌ಗಳು ಲಾರಿ ಕೆಳಗೆ ಸೇರಿಕೊಂಡಿವೆ. ಕ್ಯಾಂಟಿನ್‌ಗೆ ಡಿಕ್ಕಿ ಹೊಡೆದ ಬಳಿಕ ಲಾರಿ ಪಲ್ಟಿಯಾಗಿದೆ. ಲಾರಿ ಮೊದಲು ಕ್ಯಾಂಟಿನ್‌ಗೆ ಡಿಕ್ಕಿ ಹೊಡೆದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಕ್ಯಾಂಟಿನ್ ಸುತ್ತಮುತ್ತಲೂ ಮನೆಗಳಿವೆ. ಅದೃಷ್ಟವಶಾತ್ ಹೋಟೆಲ್‌ಗೆ ಡಿಕ್ಕಿ ಹೊಡೆದ ಲಾರಿ ಪಲ್ಟಿಯಾಗಿದ್ದರಿಂದ ಮನೆಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಸ್ಥಳೀಯರು ಮಾಹಿತಿ ತಿಳಿಸಿದ್ದಾರೆ.
