ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆಸಿ 14 ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಭಾನುವಾರ ರಾತ್ರಿ ಬಾಲಕಿ ಹುಟ್ಟುಹಬ್ಬ ಆಚರಣೆಗಾಗಿ ತನ್ನ ಸ್ನೇಹಿತರೊಂದಿಗೆ ಗೆಸ್ಟ್ ಹೌಸ್ ಒಂದಕ್ಕೆ ಹೋಗಿದ್ದಳು. ಆದರೆ ನಿಖರ ಸ್ಥಳದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿರಲಿಲ್ಲ. ಮರುದಿನ ಬೆಳಿಗ್ಗೆ ಬಂದು ತನ್ನ ಮೇಲೆ ಅತ್ಯಾಚಾರ ಆಗಿರುವ ಬಗ್ಗೆ ಪೋಷಕರಿಗೆ ತಿಳಿಸಿದ್ದು, ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಬಳ್ಳಾರಿ| 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ದಾಖಲು
8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತನ್ನ ಮಗಳು ತನ್ನ ಸ್ನೇಹಿತ ಅಂಶು ಜೊತೆ ಮತ್ತೊಬ್ಬ ಯುವಕನ (ಅವಿನಾಶ್) ಹುಟ್ಟುಹಬ್ಬ ಆಚರಿಸಲು ಬೈಕ್‌ನಲ್ಲಿ ಹೋಗಿದ್ದಳು ಎಂದು ಸಂತ್ರಸ್ತೆಯ ತಾಯಿ ತಮ್ಮ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಅವಿನಾಶ್ ಹುಟ್ಟುಹಬ್ಬದ ಕೇಕ್ ಕತ್ತರಿಸಿದ ಬಳಿಕ ವಾಪಸ್ ಬರುವುದಾಗಿ ಅಂಶು ಹೇಳಿದ್ದ. ಆದರೆ ಅವಿನಾಶ್ ಗೆಸ್ಟ್ ಹೌಸ್‌ನಿಂದ ಹೊರ ಹೋಗಿದ್ದು, ಅಂಶು ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
“ಅವಿನಾಶ್ ಈ ಹಿಂದೆ ಎರಡು ಬಾರಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾಗಿ ತನ್ನ ಮಗಳು ಬಹಿರಂಗಪಡಿಸಿದ್ದಾಳೆ” ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಕಾಮುಕ
ತಾಯಿಯ ದೂರಿನ ಆಧಾರದಲ್ಲಿ ಸೋಮವಾರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆ ಮತ್ತು ಸಮಾಲೋಚನೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ, “ಆರೋಪಿಗಳನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ. ಇಬ್ಬರೂ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು” ಎಂದು ಹೇಳಿದ್ದಾರೆ.
