ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಾವಿರ ರೂ. ಸ್ಕಾಲರ್ ಶಿಪ್ ಘೋಷಿಸಿದ ಶಾಸಕ ಪ್ರದೀಪ್‌ ಈಶ್ವರ್‌

Date:

Advertisements
  • ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿ ಘೋಷಣೆ ಬೆನ್ನಲ್ಲೇ ಶಾಸಕರಿಂದ ಭರವಸೆ
  • ಚಿಕ್ಕಬಳ್ಳಾಪುರ ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುವ ವಾಗ್ದಾನ

ಕಾಂಗ್ರೆಸ್‌ ಸರ್ಕಾರ ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕ್ಷೇತ್ರದ ನೂತನ ಶಾಸಕ ಪ್ರದೀಪ್‌ ಈಶ್ವರ್‌ ಅವರು ತಮ್ಮ ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡಲು ಮುಂದಾಗಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಅವರು, “ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳನ್ನ ನಾನು ಪ್ರತಿಯೊಂದು ಮನೆಗೂ ತಲುಪಿಸುತ್ತೇನೆ. ಜೊತೆಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಸ್ಕಾಲರ್ ಶಿಪ್ ಕೊಡಲಿದ್ದೇನೆ” ಎಂದು ತಿಳಿಸಿದ್ದಾರೆ.

“ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 1,800 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮುಂದಿನ ವಾರದಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ 1,000 ರೂಪಾಯಿ ವೈಯಕ್ತಿಕವಾಗಿ ಸ್ಕಾಲರ್ ಶಿಪ್ ನೀಡುವೆ. ಅಷ್ಟೇ ಅಲ್ಲದೇ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವಂತಹ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವೆ” ಎಂದು ಹೊಸ ಭರವಸೆ ಘೋಷಿಸಿದ್ದಾರೆ.

Advertisements

“ಪ್ರತಿಯೊಂದು ಮನೆಗೂ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳನ್ನು ತಲುಪಿಸುತ್ತೇನೆ. ಕ್ಷೇತ್ರದ ಜನತೆಗೆ ಯಾವುದೇ ತೊಂದರೆ ಇದ್ದರೂ ಚಿಕ್ಕಬಳ್ಳಾಪುರ ನಗರದಲ್ಲಿ ಕಚೇರಿ ತೆರೆಯಲಾಗುತ್ತದೆ. ಅಲ್ಲಿಗೆ ಬಂದು ಮನವಿ ಸಲ್ಲಿಸಬಹುದು” ಎಂದು ಶಾಸಕರು ಹೇಳಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣುಮಕ್ಕಳ ಮೇಲಿನ ಕಾಳಜಿ ಮೋದಿಯವರಿಗೆ ಕೇವಲ ಭಾಷಣದ ವಸ್ತು ಅಷ್ಟೇ…

ಬಸ್‌ ಕಾಣದ ಗ್ರಾಮಗಳಿಗೆ ಸಂಚಾರ ಸೇವೆ ಆರಂಭ

ಚುನಾವಣೆ ಪ್ರಚಾರದ ವೇಳೆ ಹಲವು ಗ್ರಾಮಗಳ ಗ್ರಾಮಸ್ಥರು ಬಸ್‌ ಸೇವೆಗಾಗಿ ಮನವಿ ಸಲ್ಲಿಸಿದ್ದರು. ಹೀಗಾಗಿ ಆದ್ಯತೆ ಮೇರೆಗೆ ಶಾಲಾ ಕಾಲೇಜು ಸಮಯಕ್ಕೆ ಸರಿಯಾಗಿ, ಕಾದ ದಿಬ್ಬೂರು, ದಂಡಿಗಾನಹಳ್ಳಿ, ಹಿರಣ್ಣಯ್ಯ ಹಳ್ಳಿ, ಬುಡಗನೂರು, ಪಿಡಚಲಹಳ್ಳಿ, ಮಮಾಕಲಹಳ್ಳಿ ಮಾರ್ಗದಲ್ಲಿ ಬಸ್‌ ಸೇವೆಗೆ ಚಾಲನೆ ನೀಡಲಾಯಿತು. ಕೊಟ್ಟ ಭರವಸೆಯಂತೆ ಸ್ವತಃ ಶಾಸಕ ಪ್ರದೀಪ್‌ ಈಶ್ವರ್‌ ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ಬಸ್‌ ಸೇವೆಗೆ ಚಾಲನೆ ನೀಡಿದ್ದಾರೆ.

“ಚುನಾವಣಾ ಪ್ರಚಾರ ಸಮುಯದಲ್ಲಿ ಹೇಳಿದಂತೆ ಪ್ರತಿ ವರಲಕ್ಷ್ಮಿ ಮಹಾಲಕ್ಷ್ಮಿ ಹಬ್ಬಕ್ಕೆ ಮನೆಗೊಂದು ಸೀರೆ, ಅರಿಶಿಣ, ಕುಂಕುಮ ನೀಡುತ್ತೇನೆ. ಮನೆಯವರಿಗೆಲ್ಲ ಅಲ್ಲ, ಮನೆಗೊಂದು ಮಾತ್ರ. ಐದೂ ವರ್ಷವೂ ಈ ಕಾರ್ಯ ನಡೆಯಲಿದೆ. ಗ್ರಾಮಗಳಲ್ಲಿ ಇರುವ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸುವ ಕಾರ್ಯ ಮಾಡುತ್ತೇನೆ. ಓಂ ಶಕ್ತಿ ಪ್ರವಾಸಕ್ಕೆ ಬಸ್‌ ವ್ಯವಸ್ಥೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಪ್ಲಾಸ್ಟಿಕ್‌ ಕವರ್‌ ಬಳಸುವಂತಿಲ್ಲ

“ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಇನ್ಮುಂದೆ ಯಾರು ಸಹ ಪ್ಲಾಸ್ಟಿಕ್‌ ಕವರ್‌ ಬಳಸುವಂತಿಲ್ಲ. ಶೇ.90ರಷ್ಟು ವರ್ತಕರು ಪ್ಲಾಸ್ಟಿಕ್‌ ಕವರ್‌ ಬಳಸುತ್ತಿಲ್ಲ. ಕೇವಲ ಶೇ.10ರಷ್ಟು ಮಂದಿ ಮಾತ್ರ ಪ್ಲಾಸ್ಟಿಕ್‌ ಕವರ್‌ ಬಳಸುತ್ತಿದ್ದಾರೆ. ಅವರಿಂದಾಗಿ ಎಲ್ಲರಿಗೂ ಕೆಟ್ಟ ಹೆಸರು. ಈಗಾಗಲೇ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಕವರ್‌ ಬಳಸಬಾರದು. ಬಳಸಿದರೆ ಕೇಸ್‌ ಹಾಕಿ ಭಾರಿ ದಂಡ ವಿಧಿಸಲಾಗುವುದು” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X