ವಿಜಯಪುರ | ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಕೊಳ್ಳಬೇಕು: ಡಾ. ಆರೋಕ ಎಮ್ ದಳವಾಯಿ

Date:

Advertisements

ಕೃಷಿಮೇಳಗಳು ರೈತರ ಪಾಲಿಗೆ ಮಾಹಿತಿ ನೀಡುವ ಒಂದು ವ್ಯವಸ್ಥಿತ ಮಾರ್ಗವಾಗಿದೆ. ಕೃಷಿಯಲ್ಲಿ ಬದಲಾವಣೆ ಸಂದರ್ಭಕ್ಕೆ ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಬೇಕು” ಎಂದು ಕರ್ನಾಟಕ ರಾಜ್ಯ ಬೆಲೆ ಆಯೋಗದ ಅಧ್ಯಕ್ಷ ಡಾ. ಆರೋಕ ಎಮ್. ದಳವಾಯಿ ಹೇಳಿದರು.

ವಿಜಯಪುರ ಪಟ್ಟಣದ ಹೊರವಲಯದ ಹಿಟ್ನಳ್ಳಿ ಫಾರ್ಮದಲ್ಲಿ ನಡೆದ ಕೃಷಿಮೇಳದ ಸಮಾರೋಪ ಉದ್ದೇಶಿಸಿ ಮಾತನಾಡಿದರು.

“ರೈತರು ಪ್ರಸಕ್ತ ಸಂದರ್ಭದಲ್ಲಿ ಸಾವಯವ, ಸಿರಿಧಾನ್ಯ ಬೆಳೆಗಳನ್ನ ಬೆಳೆಯಬೇಕು. ನೈಸರ್ಗಿಕ ಕೃಷಿ ವಿಧಾನಗಳನ್ನು ಅನುಸರಿಸಬೇಕು. ರೈತರಿಗೆ ತಾವು ಬೆಳೆದ ಬೆಳೆಗೆ ಯೋಗ್ಯ ಬೆಲೆ ದೊರಕುವಂತೆ, ಮುಂದಿನ ದಿನಗಳಲ್ಲಿ ಪ್ರಯತ್ನಿಸಲಾಗುವುದು” ಎಂದರು.

Advertisements

ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ  ಮಾತನಾಡಿ, “ರೈತರು ಸಮಗ್ರ ಕೃಷಿ ಪದ್ಧತಿ ಅನುಸರಿಸಬೇಕು. ಕಬ್ಬು ಹಾಗೂ ಸಿರಿಧಾನ್ಯ ಬೆಳೆಯುವ ರೈತರಿಗೆ ಉತ್ತಮ ಮಾರ್ಗದರ್ಶನ ಈ ಕೃಷಿಮೇಳದಲ್ಲಿ ಸಿಕ್ಕಿದೆ ಎಂದುಕೊಂಡಿರುವೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕಾಲುವೆಯಲ್ಲಿ ಈಜಲು ಹೋದ ಯುವಕ ನೀರುಪಾಲು

ಕೃಷಿ ಮಹಾವಿದ್ಯಾಲಯದ ಡೀನ್ ಡಾ. ಅಶೋಕ ಸಜ್ಜನ ಸ್ವಾಗತಿಸಿ, ಕೃಷಿಮೇಳ ಕುರಿತು ವರದಿ ಮಂಡಿಸಿದರು. ಸಮಾರಂಭದಲ್ಲಿ  ಕೃಷಿ ಸಹಾ ವಿಸ್ತರಣಾ ನಿರ್ದೇಶಕ ಡಾ. ರವಿ ಬೆಳ್ಳಿ, ಪಾರ್ವತಿ ಕುರ್ಲೆ,ಉಪ ಕೃಷಿ ನಿರ್ದೇಶಕ ಡಾ. ಪ್ರಕಾಶ ಚವ್ಹಾಣ ಡಾ.ಎಸ್.ವೈ. ನಾಡಗೌಡ, ಸರದೇಶಪಾಂಡೆ, ಡಾ. ಶೋಭಾ ನಾಗನೂರ, ಡಾ. ಎಮ್. ವಾಯ್. ತೆಗಿ, ಡಾ. ಎಸ್. ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ ರೈತಭಾಂದವರು, ಆಗಮಿಸಿದ ರೈತಭಾಂದವರು, ಕೃಷಿ ವಿದ್ಯಾರ್ಥಿಗಳು ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಪಾಟೀಲ, ಎಮ್. ಎಸ್. ರುದ್ರ ಗೌಡದ’, ಪ್ರಗತಿಪರ ರೈತ ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X