ಗ್ಯಾರಂಟಿಗಳ ಟೀಕಿಸುವ ಮುನ್ನ ಬಿಜೆಪಿ ಕೊಟ್ಟ ಮಾತು ಉಳಿಸಿಕೊಳ್ಳಲಿ: ಡಿಕೆಶಿ ತಿರುಗೇಟು

Date:

Advertisements
  • ಬೆಲೆ ಏರಿಕೆ ಹೊರೆ ತಗ್ಗಿಸಲು ಗ್ಯಾರಂಟಿ ಯೋಜನೆ ನೀಡಲಾಗಿದೆ
  • ಪ್ರಧಾನಮಂತ್ರಿಗಳು ಹಿಂದೆ ಹೇಳಿದ ಭರವಸೆಗಳನ್ನು ಈಡೇರಿಸಲಿ

ವಿರೋಧ ಪಕ್ಷದವರು ಕಾಂಗ್ರೆಸ್‌ ಗ್ಯಾರಂಟಿಗಳನ್ನು ಟೀಕೆ ಮಾಡುವ ಮೊದಲು ತಾವು ನೀಡಿದ್ದ ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತು ಉಳಿಸಿಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿರುಗೇಟು ನೀಡಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿರೋಧ ಪಕ್ಷದವರು ಇರುವುದೇ ಟೀಕೆ ಮಾಡಲು, ಅವರು ಟೀಕೆ ಮಾಡಲಿ, ಅವರು ಟೀಕೆ ಮಾಡುವ ಮೊದಲು ಪ್ರಧಾನಮಂತ್ರಿಗಳು ಈ ಹಿಂದೆ ಹೇಳಿದಂತೆ ವಿದೇಶದಿಂದ ಕಪ್ಪು ಹಣ ತರಲಿ, ಎಲ್ಲರ ಖಾತೆಗೆ 15 ಲಕ್ಷ ಹಾಕಲಿ, ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡಲಿ, ರೈತರ ಆದಾಯ ಡಬಲ್ ಮಾಡಲಿ, ಸದ್ಯದಲ್ಲೇ ಕೇಂದ್ರ ಸರ್ಕಾರಕ್ಕೆ ಪರೀಕ್ಷೆ ಎದುರಾಗುತ್ತಿದ್ದು, ಅದರಲ್ಲಿ ಅವರು ಪಾಸ್ ಆಗಲು ಕೊಟ್ಟಿರುವ ಮಾತು ಉಳಿಸಿಕೊಳ್ಳಲಿ ಎಂದು ಸವಾಲ್‌ ಹಾಕಿದರು.

ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆ ತಗ್ಗಿಸಲು ಕಾಂಗ್ರೆಸ್ ಸರ್ಕಾರ ಈ ಗ್ಯಾರಂಟಿ ಯೋಜನೆಗಳನ್ನು ನೀಡಿದೆ ಎಂದು ತಿಳಿಸಿದರು.

Advertisements

ಬಾಡಿಗೆ ಮನೆಯಲ್ಲಿರುವವರಿಗೆ ಗೃಹಜ್ಯೋತಿ ಯೋಜನೆ ಫಲಾನುಭವದ ಬಗ್ಗೆ ಕೇಳಿದ ಪ್ರಶ್ನೆಗೆ, “ಬಾಡಿಗೆ ಮನೆಯಲ್ಲಿರುವವರು ಬಡವರಲ್ಲವೇ. ಅವರಿಗೂ ಈ ಯೋಜನೆಯ ಫಲ ಸಿಗಬೇಕು. ಜನರು ಬಾಡಿಗೆ ಅಥವಾ ಸ್ವಂತ ಮನೆಯಲ್ಲಾದರೂ ಇರಲಿ ಈ ಯೋಜನೆಯ ಫಲ ಅವರಿಗೆ ಸಿಗಲಿದೆ. ನಮ್ಮ ಮಾತು 200 ಯೂನಿಟ್ ವರೆಗೂ ಉಚಿತ ಎಂದು ಹೇಳಿದ್ದೆವು ಅದರಂತೆ ನೀಡಿದ್ದೇವೆ. ಇಷ್ಟು ದಿನಗಳ ಕಾಲ ನೂರು ಯೂನಿಟ್ ಬಳಸುತ್ತಿದ್ದವರು ಏಕಾಏಕಿ 200 ಯುನಿಟ್ ಬಳಸಿದರೆ ಅದಕ್ಕೆ ಅವಕಾಶವಿಲ್ಲ” ಎಂದು ತಿಳಿದರು.

ಯೋಜನೆಯ ಫಲ ತ್ಯಜಿಸಲು ಅವಕಾಶ ಕಲ್ಪಿಸುವಿರಾ ಎಂದು ಕೇಳಿದಾಗ, “ಖಂಡಿತವಾಗಿಯೂ ಇದಕ್ಕೆ ಅವಕಾಶ ಕಲ್ಪಿಸುತ್ತೇವೆ. ಒಂದು ವೇಳೆ ಯಾರಿಗಾದರೂ ಈ ಯೋಜನೆ ಫಲ ಬೇಡವಾದರೆ ಅದನ್ನು ಅವರು ತ್ಯಜಿಸಿ ವಿದ್ಯುತ್‌ ಬಿಲ್ ಕಟ್ಟಬಹುದು. ಅನೇಕ ಅಧಿಕಾರಿಗಳು, ಮಾಧ್ಯಮ ಮುಖ್ಯಸ್ಥರು, ಸರ್ಕಾರಿ ನೌಕರರು ಈ ಗೃಹಜ್ಯೋತಿ ಯೋಜನೆಯ ಫಲ ಬೇಡ ಎಂದು ಪತ್ರ ಬರೆದಿದ್ದು, ಮತ್ತೆ ಕೆಲವರು ಖುದ್ದಾಗಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಜನರಿಗೆ ಮಕ್ಮಲ್ ಟೋಪಿ ಹಾಕಿದ ‘ಷರತ್ತು ಸರ್ಕಾರ’: ಕುಮಾರಸ್ವಾಮಿ ಕಿಡಿ

“ಯಾರಿಗೆಲ್ಲ ಈ ಯೋಜನೆಯ ಲಾಭ ಬೇಡವೋ ಅವರಿಗೆ ಇದನ್ನು ತ್ಯಜಿಸಲು ಅವಕಾಶ ನೀಡಲಾಗುವುದು. ಅದಕ್ಕಾಗಿ ಈ ಯೋಜನೆಗಳ ಫಲ ಪಡೆಯಲು ಅರ್ಜಿಯನ್ನು ಕರೆಯಲಾಗಿದೆ. ಕೇಂದ್ರ ಸರ್ಕಾರ ಅಡುಗೆ ಅನಿಲ ಸಬ್ಸಿಡಿ ತ್ಯಜಿಸಲು ಕರೆ ಕೊಟ್ಟಾಗ ಅನೇಕರು ಅದಕ್ಕೆ ಸ್ಪಂದಿಸಿ ಸಬ್ಸಿಡಿಯನ್ನು ಕೈಬಿಟ್ಟಿದ್ದರು. ಅದೇ ರೀತಿ ಇಲ್ಲಿಯೂ ಯೋಜನೆ ಲಾಭ ತ್ಯಜಿಸಬಹುದು” ಎಂದು ತಿಳಿಸಿದರು.

ಕಾಂಗ್ರೆಸ್ ನವರು ಹಣೆಗೆ ತುಪ್ಪ ಸವರುತ್ತಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಟೀಕೆ ಕುರಿತು ಕೇಳಿದಾಗ, “ಕುಮಾರಣ್ಣ ದೊಡ್ಡವರು ಅವರಿಗೆ ಬಹಳ ಅನುಭವವಿದೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ನನ್ನ ಕರ್ತವ್ಯ ಮಾಡುತ್ತೇನೆ ಅವರು ಅವರ ಕೆಲಸ ಮಾಡಲಿ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X