ಮತ್ತೆ ಮಹಿಳಾ ವಿರೋಧಿ ಹೇಳಿಕೆ ನೀಡಿದ ನ್ಯಾ. ಶ್ರೀಶಾನಂದ: ”ಸುರಪುರದಲ್ಲಿ ಇಂದಿಗೂ ‘ಫಸ್ಟ್‌ ನೈಟ್‌’ ನಾಯಕನ ಜೊತೆ” ಹೇಳಿಕೆಗೆ ಆಕ್ರೋಶ

Date:

Advertisements

ಬೆಂಗಳೂರಿನ ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದ, ಮಹಿಳಾ ವಕೀಲೆಯನ್ನು ಅಸಭ್ಯವಾಗಿ ನಿಂದಿಸಿದ್ದ ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶ ವಿ ಶ್ರೀಶಾನಂದ ಮತ್ತೆ ಮಹಿಳಾ ವಿರೋಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಸಿ ಮಾತನಾಡಿದ್ದ ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ನ್ಯಾಯಾಧೀಶರು ಘಟನೆ ಮತ್ತು ಎಚ್ಚರಿಕೆಯಿಂದ ಮಾತನಾಡಬೇಕೆಂದು ಸುಪ್ರೀಂ ಕೋರ್ಟ್ ಬುದ್ದಿ ಹೇಳಿತ್ತು. ಆದರೂ, ನ್ಯಾಯಾಧೀಶ ಶ್ರೀಶಾನಂದ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳನ್ನು ಮುಂದುವರೆಸಿದ್ದಾರೆ. ”ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಹೆಣ್ಣು ಮಕ್ಕಳ ಮೊದಲ ರಾತ್ರಿ ಆ ಊರಿನ ನಾಯಕನ ಜೊತೆಗೇ ನಡೆಯುತ್ತದೆ” ಎಂದು ಮಹಿಳಾ ವಿರೋಧಿ ಹೇಳಿಕೆ ನೀಡಿದ್ದಾರೆ.

ಪ್ರಕರಣವೊಂದರ ವಿಚಾರಣೆ ನಡೆಸಿದ್ದ ಶ್ರೀಶಾನಂದ ಅವರು, ”ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಯಾರನ್ನು ಬೇಕಾದರೂ ಮದುವೆ ಮಾಡಿಕೊಳ್ಳಬಹುದು. ಆದರೆ, ಮೊದಲ ರಾತ್ರಿ ಮಾತ್ರ ನಾಯಕನ ಜೊತೆ ಎಂಬ ಆಚರಣೆ ಇಂದಿಗೂ ಆಸ್ತಿತ್ವದಲ್ಲಿದೆ” ಎಂದು ಹೇಳಿದ್ದಾರೆ. ಅವರ ಮಹಿಳಾ ವಿರೋಧಿ ಹೇಳಿಕೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisements

“ಹಳೆಯ ಶಿಲಾಯುಗದ ಕಾಲದಲ್ಲಿ ಹೆಣ್ಣು ಮಕ್ಕಳಿಗೋಸ್ಕರ ಕಾದಾಟಗಳು ನಡೆದಿದ್ದವು. ಯಾರಿಗೆ ಶಕ್ತಿ ಇತ್ತೋ (ಮೈಟಿ ಇಸ್‌ ದಿ ರೈಟ್‌) ಅವನು ನಾಯಕನಾಗುತ್ತಿದ್ದ. ಆ ನಾಯಕನಿಗೆ ಆ ಹೆಣ್ಣು ಮಗಳನ್ನು ಒಪ್ಪಿಸಿ, ಉಳಿದವರು ಎರಡು ಅಥವಾ ಮೂರನೆಯವರಾಗಿ ಆ ಹೆಣ್ಣು ಮಗಳನ್ನು ಉಪಯೋಗಿಸಿಕೊಳ್ಳಬೇಕಿತ್ತು. ಈ ದುಷ್ಟ ಆಚರಣೆ ಈಗಲೂ ಸುರಪುರದಲ್ಲಿದೆ ಎಂಬುದು ನಿಮಗೆ ಗೊತ್ತಿರಲಿ” ಎಂದು ನ್ಯಾಯಾಧೀಶ ಶ್ರೀಶಾನಂದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

”ಮೊದಲ ರಾತ್ರಿಯನ್ನು ನಾಯಕನ ಜೊತೆ ಕಳೆದ ಬಳಿಕ, ಅವರು ಅಲ್ಲೇ ಇರಬಹುದು ಅಥವಾ ಬೇರೆ ಕಡೆ ಹೋಗಿ ಮದುವೆ ಮಾಡಿಕೊಳ್ಳಬಹುದು. ಏನ್‌ ಸಾರ್‌ ಅದೆಲ್ಲವೂ ಸಾಧ್ಯವಾ? ಎಂದರೆ ಆ ಥರ ಈಗಲೂ ನಡೆಯುತ್ತಿದೆ. ಅದರ ಮೇಲೆ ಬೇಕಾದಷ್ಟು ಚಲನಚಿತ್ರಗಳು ಬಂದಿವೆ. ಬೆತ್ತಲೆ ಸೇವೆ ಅಂಥ ಸಿನಿಮಾ ಬಂದಿದೆ. ಇನ್ನೊಂದು, ಮತ್ತೊಂದು ಬಂತು ಎಲ್ಲವೂ ಆಯ್ತು. ಸರಿಹೋಯ್ತ ಎಂದು ನೋಡಿದರೆ ಇನ್ನೂ ಸರಿ ಹೋಗಲಿಲ್ಲ. ದೇವದಾಸಿಯರು ಎಂದರೆ ಏನು? ಅವರೂ ಅದೇನೇ… ಎಲ್ಲ ಬೇಕಾದಷ್ಟು ಮಾಡಿಕೊಂಡರು.. ಅದು ಇರಲಿ.. ನಾವು ಆ ವಿಚಾರದ ಮೇಲಿಲ್ಲ” ಎಂದು ಹೇಳಿದ್ದಾರೆ. ನ್ಯಾಯಾಧೀಶರ ವಿರುದ್ದ ಯಾದಗಿರಿ ಜಿಲ್ಲೆಯಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಯಾದಗಿರಿ ಮತ್ತು ಶಹಾಪುರದಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಮತ್ತು ಸಾಮೂಹಿಕ ಸಂಘಟನೆಗಳ ಒಕ್ಕೂಟಗಳ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ನ್ಯಾಯಮೂರ್ತಿ ಶ್ರೀಶಾನಂದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿ, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹಾಗೂ ರಾಜ್ಯಪಾಲರಿಗೆ ಪ್ರತಿಭಟನಾಕಾರರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

”ಶ್ರೀಶಾನಂದ ಅವರು ನ್ಯಾಯಮೂರ್ತಿಯಾಗಿರಲು ಅರ್ಹರೇ? ಅಶ್ಲೀಲ ಮತ್ತು ಜಾತ್ಯತೀತ ವಿರೋಧಿ ಹೇಳಿಕೆ ನೀಡಿ, ಸುಪ್ರೀಂ ಕೋರ್ಟ್‌ ಕ್ಷಮೆ ಕೋರಿದ್ದವರು ಈಗ ಮತ್ತೆ ಅಶ್ಲೀಲ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X