ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಹೊರವಲಯದಲ್ಲಿ ಯುವಕನೋರ್ವ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ಭೀಮಪ್ಪ ಮಸೂತಿ(21) ಎಂಬಾತ ಮೃತ ದುರ್ದೈವಿ. ಈತ ನರೇಂದ್ರ ಗ್ರಾಮದ ನಿವಾಸಿಯಾಗಿದ್ದು, ಅಲ್ಪಮಟ್ಟಿಗೆ ಮದ್ಯ ಸೇವಿಸುತ್ತಿದ್ದ ಎಂದು ತಿಳಿದುಬಂದಿದೆ.
“ಕುಡಿದು ಮನೆಯಲ್ಲಿ ಜಗಳ ಮಾಡಿಕೊಂಡಿದ್ದಾನೆ. ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಸದ್ಯಕ್ಕೆ ತಿಳಿದುಬಂದಿದೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ತನಿಖೆ ಬಳಿಕ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ” ಎಂದು ಪೊಲೀಸರು ಈ ದಿನ.ಕಾಮ್‌ಗೆ ತಿಳಿಸಿದ್ದಾರೆ.
