ಕಿಯೋನಿಕ್ಸ್ ಸರಬರಾಜುದಾರರು ದಯಾಮರಣ ಕೋರಲು ಬಿಜೆಪಿಯೇ ಕಾರಣ: ಸಚಿವ ಪ್ರಿಯಾಂಕ್‌ ಖರ್ಗೆ, ಶರತ್‌ ಬಚ್ಚೇಗೌಡ ತಿರುಗೇಟು

Date:

Advertisements

ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ದಯೆಯಿಂದ ಕಿಯೋನಿಕ್ಸ್ ಸರಬರಾಜುದಾರರು ದಯಾಮರಣ ಕೋರುವಂತಾಗಿದೆಯೇ ಹೊರತು ನಮ್ಮಿಂದಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಕಿಯೊನಿಕ್ಸ್‌ ಸಂಸ್ಥೆಯ ಅಧ್ಯಕ್ಷ ಶರತ್‌ ಬಚ್ಚೇಗೌಡ ತಿಳಿಸಿದ್ದಾರೆ.

“ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಆತ್ಮಹತ್ಯೆಯ ದಾರಿ ಹಿಡಿಯಬೇಕಾಗುತ್ತದೆ. ಅದಕ್ಕೆ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಹಾಗೂ ಅಧಿಕಾರಿಗಳೇ ಹೊಣೆ” ಎಂದು ಕರ್ನಾಟಕ ರಾಜ್ಯ ವಿದ್ಯುನ್ಮಾನ ನಿಗಮ ನಿಯಮಿತದ (ಕಿಯೋನಿಕ್ಸ್) ವೆಂಡರ್‌ಗಳು ರಾಷ್ಟ್ರಪತಿಯವರಿಗೆ ಪತ್ರ ಬರೆದಿದ್ದು, ಈ ಹಿನ್ನೆಲೆಯಲ್ಲಿ ಸಚಿವರು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ಭ್ರಷ್ಟಾಚಾರದೆಡೆಗಿನ ನಮ್ಮ ಸರ್ಕಾರದ ಕಠಿಣ ನಿಲುವಿಗೆ ಹಾಗೂ ಜನರ ತೆರೆಗೆ ಹಣದ ದುರ್ಬಳಕೆಯನ್ನು ತಡೆಯುವ ನಮ್ಮ ಪ್ರಯತ್ನಕ್ಕೆ ಬಿಜೆಪಿಯವರು “ಕಿರುಕುಳ“ ಎಂದು ಹೆಸರು ಕೊಡುವುದು ಎಷ್ಟು ಸರಿ? ಪಾರದರ್ಶಕತೆಯು ಭ್ರಷ್ಟರಿಗೆ ಕಿರುಕುಳದಂತೆ ಭಾಸವಾಗುವುದು ಸಹಜವೇ! ಇಂದು ಕಿಯೋನಿಕ್ಸ್ ಸರಬರಾಜುದಾರರ ಬಿಲ್ ಬಾಕಿ ಉಳಿದಿದೆ ಎಂದರೆ ಅದಕ್ಕೆ ಹಿಂದಿನ ಭ್ರಷ್ಟ ಬಿಜೆಪಿ ಸರ್ಕಾರ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು, ಬೊಮ್ಮಯಿಯವರು ಹಾಗೂ ಮಾಜಿ ಸಚಿವ ಅಶ್ವತ್ಥ ನಾರಾಯಣ ಅವರೇ ನೇರ ಕಾರಣ” ಎಂದು ಆರೋಪಿಸಿದ್ದಾರೆ.

Advertisements

“ಜನಸಾಮಾನ್ಯರ ಬೆವರಿನ ನೂರಾರು ಕೋಟಿ ತೆರಿಗೆ ಹಣದ ಪ್ರತಿ ರೂಪಾಯಿಗೂ ಸಮರ್ಪಕ ಲೆಕ್ಕ ಇಡುವುದು ನಮ್ಮ ಹೊಣೆ ಮತ್ತು ಅತ್ಯಗತ್ಯದ ಕರ್ತವ್ಯ. ಆ ಕರ್ತವ್ಯವನ್ನು ನಮ್ಮ ಸರ್ಕಾರ ಮಾಡುತ್ತಿದೆ. 2018-2023ರ ನಡುವೆ ನಡೆದ ವಹಿವಾಟುಗಳು ಮತ್ತು ಸಂಗ್ರಹಣೆಗಳಿಗೆ ಸಂಬಂಧಿಸಿದಂತೆ ಅಕೌಂಟೆಂಟ್ ಜನರಲ್ ಕಚೇರಿಯು ನಡೆಸಿದ ಟೆಸ್ಟ್ ಆಡಿಟ್ ತಪಾಸಣೆ ವರದಿಯಲ್ಲೇ ಭಾರಿ ಮೌಲ್ಯದ ಉಲ್ಲಂಘನೆಗಳು ಬೆಳಕಿಗೆ ಬಂದಿವೆ” ಎಂದಿದ್ದಾರೆ.

455 ಕೋಟಿ ರೂ. ಮೌಲ್ಯದ ಉಲ್ಲಂಘನೆ

“ಕಿಯೋನಿಕ್ಸ್‌ ಸಂಸ್ಥೆಯಲ್ಲಿ 2018-2023ರ ನಡುವೆ ನಡೆದ ವಹಿವಾಟುಗಳು ಮತ್ತು ಸಂಗ್ರಹಣೆಗಳಿಗೆ ಸಂಬಂಧಿಸಿದಂತೆ ಅಕೌಂಟೆಂಟ್ ಜನರಲ್ ಕಚೇರಿಯು ನಡೆಸಿದ ವಿವರವಾದ ಆಡಿಟ್ ತಪಾಸಣೆ ವರದಿಯಂತೆ ಭಾರಿ ಮೌಲ್ಯದ ಉಲ್ಲಂಘನೆಗಳು ಬೆಳಕಿಗೆ ಬಂದಿವೆ.

“ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಿಯೋನಿಕ್ಸ್‌ ಸಂಸ್ಥೆ ಆದೇಶ ನೀಡಿದ್ದ 1544 ಕೋಟಿ ರೂ. ಗಳಿಗೆ ಸಂಬಂಧಿಸಿದಂತೆ ಸುಮಾರು 1200 ಸಂಗ್ರಹಣೆಗಳಲ್ಲಿ ಅಕೌಂಟೆಂಟ್ ಜನರಲ್ ಕಚೇರಿಯು 45 ಸಂಗ್ರಹಣೆಗಳನ್ನು ಪ್ರಾಯೋಗಿಕವಾಗಿ ಆಡಿಟ್‌ ತಪಾಸಣೆಗೆ ಒಳಪಡಿಸಿದ್ದು, 455 ಕೋಟಿ ರೂ. ಮೌಲ್ಯದ ಉಲ್ಲಂಘನೆಗಳು ಕಂಡು ಬಂದಿವೆ, 2018-2023ರ ನಡುವೆ ನಡೆದ ವಹಿವಾಟುಗಳನ್ನು ಸಮಗ್ರ ತನಿಖೆಗೆ ಒಳಪಡಿಸುವ ಸಲುವಾಗಿ ಬೆಂಗಳೂರು ಮೆಟ್ರೋ ರೈಲ್‌ ಕಾರ್ಪೋರೇಷನ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರರಾವ್‌ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ” ಎಂದು ವಿವರಿಸಿದ್ದಾರೆ.

“ಕಿಯೋನಿಕ್ಸ್‌ (KEONICS) ಸಂಸ್ಥೆಗೆ ಸಂಬಂಧಿಸಿದ ಸರಬರಾಜುದಾರರು ಹಾಗೂ ಪಾಲುದಾರರು ತಮಗೆ ಪಾವತಿಯಾಗಬೇಕಾದ ಹಣಕ್ಕೆ ಸಂಬಂಧಿಸಿದಂತೆ ತಮ್ಮ ಮನವಿಯನ್ನು ಸಲ್ಲಿಸಿದ್ದಾರೆ. ಅವರು ಮನವಿಗಳನ್ನು ಆದ್ಯತೆಯ ಮೇಲೆ ಮತ್ತು ಲೆಕ್ಕಪರಿಶೋಧನೆಯ ಅವಲೋಕನಗಳ ಹಿನ್ನೆಲೆಯಲ್ಲಿ ಪರಿಶೀಲಿಸಲಾಗುತ್ತಿದೆ. ಹಣಕಾಸು ಇಲಾಖೆಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಸರಣೆ ಮಾಡುವ ಹಿನ್ನೆಲೆಯಲ್ಲಿ ವಿವಿಧ ಕ್ರಮಗಳನ್ನು ಪ್ರಾರಂಭಿಸಲಾಗಿದೆ. ಸರ್ಕಾರದ ಬೊಕ್ಕಸಕ್ಕೆ ಯಾವುದೇ ನಷ್ಟವಾಗದಂತೆ ನೋಡಿಕೊಳ್ಳುವುದು ಪ್ರಾಥಮಿಕ ಗುರಿಯಾಗಿದೆ. ಈ ಉದ್ದೇಶವನ್ನು ಸಾಧಿಸಲು, ಹಣಕಾಸಿನ ಸ್ವಾಮ್ಯದ ನಿಯಮಗಳಿಗೆ ಬದ್ಧವಾಗಿರಲು, ಸಾರ್ವಜನಿಕರ ನಂಬಿಕೆಯನ್ನು ಕಾಪಾಡಿಕೊಳ್ಳಲು, ಅತ್ಯುನ್ನತ ಆರ್ಥಿಕ ಮಾನದಂಡಗಳಂತೆ ನಡೆಯಲು ಇಂತಹ ಕ್ರಮಗಳು ನಿರ್ಣಾಯಕವಾಗಿದೆ” ಎಂದು ಸಚಿವರು ತಿಳಿಸಿದ್ದಾರೆ.

“ಹಣಕಾಸು ಇಲಾಖೆಯು 3ನೇ ಮಾರ್ಚ್ 2023ರ ಅಧಿಸೂಚನೆಯ ಮೂಲಕ ಹೊರಡಿಸಿದ 4ಜಿ ವಿನಾಯಿತಿ ಆದೇಶವನ್ನು ಪಾಲಿಸುವಲ್ಲಿ 2018-2023ರ ನಡುವೆ ನಡೆದ ವಹಿವಾಟುಗಳಲ್ಲಿ ಕಿಯೊನಿಕ್ಸ್ ಸಂಸ್ಥೆಯಲ್ಲಿ ಕೆಲವು ಲೋಪಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಲೋಪಗಳನ್ನು ಸರಿಪಡಿಸುವ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚಿನ ಸ್ಪರ್ಧೆ ಮತ್ತು ಹೆಚ್ಚಿನ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮುಕ್ತ ಟೆಂಡರ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ. ಈ ವಿಧಾನವು ಸ್ಥಾಪಿತ ಮಾರ್ಗಸೂಚಿಗಳೊಂದಿಗೆ ಪಾರದರ್ಶಕತೆ ಮತ್ತು ಅನುಸರಣೆಯನ್ನು ಖಾತ್ರಿಗೊಳಿಸುತ್ತದೆ, ಲೆಕ್ಕ ಪರಿಶೋಧನೆಯಲ್ಲಿ ಗಮನಿಸಲಾದ ನ್ಯೂನ್ಯತೆಗಳನ್ನು ಪರಿಹರಿಸಲು ಹೊಸ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತಿದೆ. ಕಿಯೊನಿಕ್ಸ್‌ ಸಂಸ್ಥೆಯನ್ನು ಪಾರದರ್ಶಕವಾಗಿ ಮುನ್ನೆಡೆಸುವಲ್ಲಿ ಆಡಳಿತ ಮಂಡಳಿ ಕಾರ್ಯತತ್ಪರವಾಗಿದೆ, ಹಣಕಾಸು ದುರುಪಯೋಗದ ಅಂಶಗಳು ಮೇಲ್ನೋಟಕ್ಕೆ ದೃಢ ಪಟ್ಟಿರುವಾಗ ಯಾವುದೇ ತನಿಖೆಗೆ ಒಳಪಡಿಸದೆ ಪಾವತಿ ಮಾಡಬೇಕೆನ್ನುವ ಬೇಡಿಕೆಯು ನಿಯಮಬಾಹಿರವಾಗುತ್ತದೆ” ಎಂದು ಹೇಳಿದ್ದಾರೆ.

ಬಿಜೆಪಿಯವರ ತಾಳಕ್ಕೆ ತಕ್ಕಂತೆ ಕುಣಿಯಲು ಆಗಲ್ಲ

“ಪ್ರತಿ ರೂಪಾಯಿಯನ್ನೂ ಪ್ರಾಮಾಣಿಕವಾಗಿ ವಿನಿಯೋಗಿಸುತ್ತೇವೆ ಎಂಬ ಭರವಸೆಯಿಂದ ನಾಡಿನ ಜನತೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆಯೇ ಹೊರತು ಬಿಜೆಪಿಯವರ ತಾಳಕ್ಕೆ ತಕ್ಕಂತೆ ಕುಣಿಯುವುದಕ್ಕಲ್ಲ,
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವ್ಯವಹಾರ ನಡೆದಿರುವುದಾಗಿ ಆಡಿಟ್ ಪರಿಶೀಲನೆಯಲ್ಲಿ ಆಕ್ಷೇಪಣೆ ಕಂಡುಬಂದಿರುವುದರಿಂದ ಸಮಗ್ರ ತನಿಖೆಯಾಗಬೇಕಿದೆ. ಕಿಯೋನಿಕ್ಸ್ ವೆಂಡರ್ ಗಳಿಗೆ ಏನಾದರೂ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿಯ ಭ್ರಷ್ಟಾಚಾರ ಕಾರಣವೇ ಹೊರತು ನಾವಲ್ಲ” ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

“ಜನರ ತೆರಿಗೆ ಹಣಕ್ಕೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯ, ಅಡಿಟರ್ ಜನರಲ್ ಅವರ ಮೇಲ್ನೋಟದ ಲೆಕ್ಕಪರಿಶೋದನೆಯಲ್ಲೇ 45 ಆಕ್ಷೇಪಣೆಗಳು ಸೇರಿದಂತೆ 455 ಕೋಟಿ ರೂಪಾಯಿ ಮೌಲ್ಯದ ಉಲ್ಲಂಘನೆಗಳನ್ನು ಉಲ್ಲೇಖಸಿದ್ದಾರೆ, ಇವುಗಳ ಸಮಗ್ರ ತನಿಖೆಯಾಗಬೇಕು, ಜನರ ಹಣವನ್ನು ಮನ ಬಂದಂತೆ ಪೋಲು ಮಾಡುವುದಕ್ಕೆ ಸಾಧ್ಯವಿಲ್ಲ” ಎಂದು ಶರತ್ ಬಚ್ಚೇಗೌಡ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X