ರಾಜಕೀಯ ಚದುರಂಗದಾಟಕ್ಕೆ ಜಾತಿ ಜನಗಣತಿ ದಾಳವಾಗುತ್ತಿರುವುದಕ್ಕೆ ವಿರೋಧ: ಆರ್‌.ಅಶೋಕ್

Date:

Advertisements

ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯನವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ. ಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನು ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ ಅಥವಾ ವೈಯಕ್ತಿಕವಾಗಿ ನನಗಾಗಲಿ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ ‘ಅಂತ್ಯೋದಯ’ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನು ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ” ಎಂದು ತಿಳಿಸಿದ್ದಾರೆ.

ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ನವರ ‘ಆತ್ಮಸಾಕ್ಷಿ’ಗೆ ಕೆಲವು ಪ್ರಶ್ನೆಗಳು.

Advertisements

1.) ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ?

2.) ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ?

3.) ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ ಮಾನ್ಯ ಉಪಮುಖ್ಯಮಂತ್ರಿಗಳು ಹಾಗು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶ್ರೀ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದ 20 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿಯನ್ನ ಸಂಪುಟ ಸಭೆಯಲ್ಲಿ ಚರ್ಚೆಗೆ ಎತ್ತಿಕೊಳ್ಳುತ್ತಿರುವುದು ಯಾವ ಕಾರಣಕ್ಕೆ?

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯವರು ಗಳಿಸಿದ ಡಿಗ್ರಿಗಳು ಮತ್ತು ಮಾಹಿತಿ ಹಕ್ಕು ಎಂಬ ತುಕ್ಕು ಹಿಡಿದ ಹತಾರು

5.) ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನ ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?

6.) ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೂಡಾ ಹಗರಣ, ಅಬಕಾರಿ ಇಲಾಖೆ ಹಗರಣ, ಕಂಟ್ರಾಕ್ಟರ್ ಗಳ ಕಮಿಷನ್ ಆರೋಪ, ಪ್ರಮನಿಯಲ್ ಅಧಿಕಾರಿಗಳು, ಗುತ್ತಿಗೆದಾರರ ಸರಣಿ ಆತ್ಮಹತ್ಯೆ ಈ ರೀತಿ ಸಾಲು ಸಾಲು ವಿವಾದಗಳು, ಕಳಂಕಗಳ ಸುಳಿಯಲ್ಲಿ ಮುಜುಗರ ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನ ಒಂದು ದಾಳವಾಗಿ ಬಳಸಲಾಗುತ್ತಿದೆಯೇ?

7.) ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಬಳಸಿಕೊಳ್ಳಲು ಜಾತಿ ಗಣತಿ ವರದಿಯನ್ನು ಮುನ್ನೆಲೆಗೆ ತರಲಾಗುತ್ತಿದೆಯೇ?

8.) ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ?

9.) ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ?

“ಜನವರಿ 16ರಂದು ನಡೆಯುವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿಗಳು ‘ಆತ್ಮಸಾಕ್ಷಿ’ ಆತ್ಮಾವಲೋಕನ ಮಾಡಿಕೊಂಡು ಕರ್ನಾಟಕದ ಜನತೆಗೆ ಉತ್ತರ ನೀಡುತ್ತಾರೆ ಎಂದು ನಿರೀಕ್ಷಿಸುತ್ತೇನೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X