ನಗರದ ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಹೊಂದಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭದ್ರತಾ ಸಂಸ್ಥೆ ಸಿಬ್ಬಂದಿ ಮೇಲೆ ದರೋಡೆಕೋರರು ಕಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬರು ತೀರ್ವವಾಗಿ ಗಾಯಗೊಂಡಿದ್ದಾರೆ. ದರೋಡೆಕೋರರು 93 ಲಕ್ಷ ರೂಪಾಯಿ ದೋಚಿರುವ ಮಾಹಿತಿ ಇದೆ. ಘಟನೆಯ ಭೀಕರ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಮೃತ ವ್ಯಕ್ತಿಯನ್ನು ಗಿರೀಶ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ವಿವರ ಇನ್ನಷ್ಟೇ ತಿಳಿಯಬೇಕಿದೆ. ಬ್ಯಾಂಕಿನ ಕಚೇರಿ ಎದುರು ರಕ್ತಸಿಕ್ತ ಸ್ಥಿತಿಯಲ್ಲಿ ಅವರ ದೇಹ ಬಿದ್ದಿದೆ. ಘಟನೆಯ ವಿಷಯ ತಿಳಿದು ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ್ದ ನೂರಾರು ಜನ ಅಲ್ಲಿ ಜಮಾಯಿಸಿದರು. ಇಡೀ ಪ್ರದೇಶದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಜನರನ್ನು ಚದುರಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯವರು ಗಳಿಸಿದ ಡಿಗ್ರಿಗಳು ಮತ್ತು ಮಾಹಿತಿ ಹಕ್ಕು ಎಂಬ ತುಕ್ಕು ಹಿಡಿದ ಹತಾರು
ಸಂಸ್ಥೆಯ ಸಿಬ್ಬಂದಿ ಎಂದಿನಂತೆ ಅವರ ವಾಹನದಲ್ಲಿ ಹಣದ ಸಮೇತ ಬ್ಯಾಂಕಿಗೆ ಬಂದಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತರು ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಹಣ ಕೊಡದಿದ್ದಾಗ ಕಾರದ ಪುಡಿ ಎರಚಿ, ಬಳಿಕ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
