ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶರತ್ ಬಿ ಅವರನ್ನು ಕೃಷಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಮಂಜುಳಾ ಎನ್ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಪ್ರಭಾರ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಹಾಗೆಯೇ ಇ-ಆಡಳಿತ, ಆರ್‌ಡಿಪಿಆರ್ ನಿರ್ದೇಶಕಿ ಸುಭಾ ಕಲ್ಯಾಣ್ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ (ಮಧ್ಯಾಹ್ನದ ಬಿಸಿ ಊಟ) ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.