ಹರಿಯಾಣ ಬಿಜೆಪಿ ಅಧ್ಯಕ್ಷರಾದ ಬಿಜೆಪಿ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಬೆದರಿಕೆಯ ಪ್ರಕರಣ ದಾಖಲಿಸಿದ್ದಾರೆ. ಅತ್ಯಾಚಾರ ಆರೋಪಿಯಾಗಿರುವ ಬಡೋಲಿ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದೆ.
ಗಾಯಕ ಜೈ ಭಗವಾನ್ ಅಲಿಯಾಸ್ ರಾಕಿ ಮಿತ್ತಲ್ ಜೊತೆಗೆ ಸೇರಿ ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪ ಹರಿಯಾಣ ಬಿಜೆಪಿ ಅಧ್ಯಕ್ಷರ ಮೇಲಿದೆ. ಬಡೋಲಿ ಮತ್ತೊಂದು ಅವಧಿಗೆ ಬಿಜೆಪಿ ಅಧ್ಯಕ್ಷನಾಗುವ ನಿರೀಕ್ಷೆಯನ್ನು ಹೊಂದಿದ್ದರು. ಈ ನಡುವೆ ಸಾಮೂಹಿಕ ಅತ್ಯಾಚಾರದ ಪ್ರಕರಣ ದಾಖಲಾಗಿದೆ. ಇದಾದ ಬೆನ್ನಲ್ಲೇ ಯಾವುದೇ ಬಿಜೆಪಿ ನಾಯಕರು ಬಡೋಲಿ ಪರವಾಗಿ ನಿಂತಿಲ್ಲ.
ಇದನ್ನು ಓದಿದ್ದೀರಾ? ಹರಿಯಾಣ ಬಿಜೆಪಿ ಅಧ್ಯಕ್ಷ ಬಡೋಲಿ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು
ಇನ್ನು ರೋಹ್ಟಕ್‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಪಂಡಿತ್ ಶ್ರೀರಾಮ್ ಶರ್ಮಾ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ಸಮಾರಂಭದಲ್ಲಿಯೂ ಬಡೋಲಿ ಹಾಜರಿರಲಿಲ್ಲ. ಈ ವಿಚಾರದಲ್ಲಿ ಈವರೆಗೆ ಸಿಎಂ ನಯಾಬ್ ಸಿಂಗ್ ಸೈನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾಗೆಯೇ ಬಿಜೆಪಿ ಹೈಕಮಾಂಡ್ ಕೂಡಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಸೈನಿ ಸಂಪುಟದ ಹಿರಿಯ ಸಚಿವ ಅನಿಲ್ ವಿಜ್ ಈ ಆರೋಪಗಳನ್ನು ‘ತುಂಬಾ ಗಂಭೀರ’ ಎಂದು ಕರೆದಿದ್ದಾರೆ. ಹಾಗೆಯೇ ಈ ವಿಷಯವನ್ನು ಗಮನದಲ್ಲಿಟ್ಟುಕೊಳ್ಳುವಂತೆ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.
ಇದನ್ನು ಓದಿದ್ದೀರಾ? ಹುಟ್ಟುಹಬ್ಬ ಆಚರಣೆ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ; ದೂರು ದಾಖಲು
ಇನ್ನು ಬಡೋಲಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದೆ. ಹರಿಯಾಣ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನ್ ಮತ್ತು ರೋಹ್ಟಕ್‌ನ ಸಂಸತ್ ಸದಸ್ಯ ದೀಪೇಂದರ್ ಹೂಡಾ, “ಬಡೋಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಹುದ್ದೆಗೆ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.
ಕಳೆದ ವರ್ಷ ಜುಲೈನಲ್ಲಿ ತನ್ನ ಮೇಲೆ ರಾಜ್ಯ ಪ್ರವಾಸೋದ್ಯಮ ನಿಗಮ ನಡೆಸುತ್ತಿದ್ದ ಹೋಟೆಲ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು, ಬಡೋಲಿ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
