2022ರಲ್ಲಿ ನಡೆದ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬಾಕಿ ಇರುವ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆಯನ್ನು ಮತ್ತೆ ಮುದೂಡಲಾಗದು. ಅಂತಿಮ ವಿಚಾರಣೆಯನ್ನು ಫೆಬ್ರವರಿ 13ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು (ಜನವರಿ 16) ಹೇಳಿದೆ.
ನ್ಯಾಯಾಧೀಶರಾದ ಜೆ.ಕೆ. ಮಹೇಶ್ವರಿ ಮತ್ತು ಅರವಿಂದ್ ಕುಮಾರ್ ಅವರ ಪೀಠವು ಈ ವಿಷಯದ ವಿಚಾರಣೆಯನ್ನು ಮುಂದೂಡಬೇಕು ಎಂದು ಕೋರುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಾವು 5-6 ಬಾರಿ ವಿಚಾರಣೆಯನ್ನು ಮುಂದೂಡಿದ್ದೇವೆ. ಕಳೆದ ಒಂದು ವರ್ಷದಿಂದ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗುತ್ತಿದೆ” ಎಂದು ಹೇಳಿದರು.
ಇದನ್ನು ಓದಿದ್ದೀರಾ? ನೆನಪು | ರಾಜೀವ್ ತಾರಾನಾಥ್ ಮತ್ತು ಗೋಧ್ರಾ
2002ರ ಫೆಬ್ರವರಿ 27ರಂದು ಗುಜರಾತ್‌ನ ಗೋಧ್ರಾದಲ್ಲಿ ಸಬರಮತಿ ಎಕ್ಸ್‌ಪ್ರೆಸ್‌ನ ಎಸ್-6 ಬೋಗಿಗೆ ಬೆಂಕಿ ಹಚ್ಚಲಾಗಿದ್ದು, 59 ಮಂದಿ ಸಾವನ್ನಪ್ಪಿದ್ದಾರೆ. ಇದಾದ ಬಳಿಕ ರಾಜ್ಯದಲ್ಲಿ ಕೋಮು ಗಲಭೆ ಉಂಟಾಗಿದೆ.
ಹಲವು ಅಪರಾಧಿಗಳಿಗೆ ಶಿಕ್ಷೆಯನ್ನು ಎತ್ತಿಹಿಡಿದ ಮತ್ತು 11 ಮಂದಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿದ ಗುಜರಾತ್ ಹೈಕೋರ್ಟ್‌ನ ಅಕ್ಟೋಬರ್ 2017ರ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ.
ಆರೋಪಿಗಳಿಗೆ ಮತ್ತೆ ಮರಣದಂಡನೆಯನ್ನು ವಿಧಿಸಬೇಕೆಂದು ಮನವಿ ಸಲ್ಲಿಸುವುದಾಗು ಗುಜರಾತ್ ಸರ್ಕಾರವೂ ಕೂಡಾ 2023ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.
ಗುರುವಾರ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಅಪರಾಧಿಯೋರ್ವನ ಪರವಾಗಿ ಹಾಜರಾದ ವಕೀಲರು ಯಾವುದೇ ಪುರಾವೆಗಳನ್ನು ದಾಖಲಿಸಲಾಗಿಲ್ಲ ಎಂದು ವಾದಿಸಿದರು. ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡಿದರು.
ಇದನ್ನು ಓದಿದ್ದೀರಾ? ಬಿಲ್ಕಿಸ್ ಬಾನೊ ಪ್ರಕರಣ: ಗೋಧ್ರಾ ಜೈಲಿನ ಅಧಿಕಾರಿಗಳಿಗೆ ಶರಣಾದ ಎಲ್ಲ 11 ಅಪರಾಧಿಗಳು
ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಮಹೇಶ್ವರಿ, “ನಾವು ಮೊದಲೇ ಸ್ಪಷ್ಟಪಡಿಸಿದ್ದೇವೆ. ನಾವು ಈ ಪ್ರಕರಣವನ್ನು ಮುಂದೂಡುವುದಿಲ್ಲ. ಕನಿಷ್ಠ ಐದು ಬಾರಿ ಈ ಪ್ರಕರಣವನ್ನು ಮುಂದೂಡಲಾಗಿದೆ” ಎಂದು ತಿಳಿಸಿದರು.
ಈ ಪ್ರಕರಣವನ್ನು ಮತ್ತೆ ಮುಂದೂಡಲು ನಿರಾಕರಿಸಿದ ಪೀಠ, “ಕ್ರಿಮಿನಲ್ ಮೇಲ್ಮನವಿ ಮತ್ತು ವಿನಾಯಿತಿ ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆ ಮಾಡುವ ಅಗತ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯಿಂದ ನಮಗೆ ಸೂಚನೆಗಳಿವೆ” ಎಂದು ಹೇಳಿದರು.
ಇನ್ನು ಅಪರಾಧಿಗಳಲ್ಲಿ ಒಬ್ಬರ ಪರ ಹಾಜರಿದ್ದ ಹಿರಿಯ ವಕೀಲ ಸಂಜಯ್ ಹೆಗ್ಡೆ, ಮರಣದಂಡನೆಯನ್ನು ಜೀವಾವಧಿಗೆ ಇಳಿಸುವುದರ ವಿರುದ್ಧ ಗುಜರಾತ್ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಮೊದಲು ವಿಚಾರಣೆ ನಡೆಸಬೇಕು ಎಂದರು.
ವಿಚಾರಣಾ ನ್ಯಾಯಾಲಯವು 11 ಅಪರಾಧಿಗಳಿಗೆ ಮರಣದಂಡನೆ ವಿಧಿಸಿದರೆ, ಇತರ 20 ಜನರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಬಳಿಕ ಪ್ರಕರಣದಲ್ಲಿನ 31 ಅಪರಾಧಿಗಳಿಗೆ ಹೈಕೋರ್ಟ್ ಶಿಕ್ಷೆಯನ್ನು ಎತ್ತಿಹಿಡಿದಿದ್ದು, 11 ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿದೆ.
ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಗೋಧ್ರಾ ರೀತಿ ದುರಂತ ಸಂಭವಿಸಬಹುದು: ಬಿ ಕೆ ಹರಿಪ್ರಸಾದ್ ಎಚ್ಚರಿಕೆ
11 ಅಪರಾಧಿಗಳಿಗೆ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸುವುದರ ವಿರುದ್ಧವಾಗಿ ಗುಜರಾತ್ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದರೂ, ಹಲವು ಅಪರಾಧಿಗಳು ಪ್ರಕರಣದಲ್ಲಿ ತಮ್ಮ ಶಿಕ್ಷೆಯನ್ನು ಎತ್ತಿಹಿಡಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದಾರೆ.
2002ರ ಫೆಬ್ರವರಿ 27ರಂದು ಸಾಬರಮತಿ ಎಕ್ಸ್‌ಪ್ರೆಸ್‌ನ ಎಸ್-6 ಬೋಗಿಗೆ ಗೋಧ್ರಾ ನಿಲ್ದಾಣದಲ್ಲಿ ಬೆಂಕಿ ಹಚ್ಚಲಾಗಿದ್ದು 59 ಮಂದಿ ಸಾವನ್ನಪ್ಪಿದ್ದರು. ಇದಾದ ಬಳಿಕ ಗುಜರಾತ್‌ನಾದ್ಯಂತ ಕೋಮು ಗಲಭೆ ನಡೆದಿದ್ದು, ಸುಮಾರು 1,200 ಮಂದಿ ಬಲಿಯಾಗಿದ್ದಾರೆ. ಈ ಪೈಕಿ ಅಧಿಕ ಮಂದಿ ಮುಸ್ಲಿಮರು ಆಗಿದ್ದಾರೆ.
