ಗೃಹಲಕ್ಷ್ಮಿ ಯೋಜನೆ | ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರತಾಪ್ ಸಿಂಹ

Date:

Advertisements

ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಟೀಕಿಸುವ ಭರದಲ್ಲಿ ಮುಸ್ಲಿಂ ಸಮುದಾಯದ ಕುರಿತು ಸಂಸದ ಪ್ರತಾಪ್‌ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಮನೆಯೊಡತಿಗೆ ಮಾಸಿಕ 2,000 ರೂ. ನೀಡುವುದಾಗಿ ಘೋಷಿಸಿದೆ. ಪ್ರತಿ ಕುಟುಂಬದಲ್ಲೂ ಮನೆಯ ಯಜಮಾನಿ ಯಾರು ಎಂಬುದನ್ನು ಗುರುತಿಸಿ, ಅವರಿಗೆ ಈ ಯೋಜನೆಯ ಫಲಾನುಭವ ನೀಡಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಈ ಯೋಜನೆಯ ಕುರಿತು ವ್ಯಂಗ್ಯವಾಡಿರುವ ಪ್ರತಾಪ್‌ ಸಿಂಹ, ಮುಸ್ಲಿಂ ಸಮುದಾಯ ಕುರಿತು ಹಗುರವಾಗಿ ಮಾತನಾಡಿದ್ದಾರೆ.

“ಗೃಹಲಕ್ಷ್ಮಿ ಯೋಜನೆಗೆ ಯಾರು ಫಲಾನುಭವಿ ಎಂದು ತೀರ್ಮಾನ ಮಾಡಬೇಕಂತೆ. ಯಾರು ತೀರ್ಮಾನ ಮಾಡ್ತಾರೆ. ಅತ್ತೆ-ಸೊಸೆ ತೀರ್ಮಾನ ಮಾಡಲು ಸಾಧ್ಯವಾ? ಸಾಬರ ಮನೆಗಳಲ್ಲಿ ಎರಡು-ಮೂರು ಹೆಂಡತಿಯರು ಇದ್ದಾರೆ. ಅವರಲ್ಲಿ ಮನೆ ಯಜಮಾನಿ ಯಾರಾಗುತ್ತಾರೆ? ಮನೆಯೊಳಗೆ ಬೆಂಕಿ ಹೊತ್ತಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

Advertisements

“ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿರುವ ಎಲ್ಲ ಭರವಸೆಗಳನ್ನು ಪೂರೈಸಲು ಕೇಂದ್ರ ಬಜೆಟ್ ಹಣ ತಂದರೂ ಸಾಕಾಗುವುದಿಲ್ಲ” ಎಂದು ಪ್ರತಾಪ್ ಸಿಂಹ ಟೀಕಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Satyavanne heliddare vengavagi yak anusutte nijavaglu satyad maatugalu Gulamarige Tappu anusuttade Congress mani vadiua kelasa madade mattyav desha uddar maaduva kelasaganna madatide , nacheke yagbeku Congress davarige free Kodtira Desh luti madtira, 1 Rupai janarige kottre 9 Jabaga hakotira yidu vand nimma janmana, thu nimma janmkittu,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X