ಕೆಎಎಸ್‌ ಪರೀಕ್ಷಾ ಯಡವಟ್ಟು | ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸಲಿ: ಆರ್‌ ಅಶೋಕ್‌

Date:

Advertisements

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ಮತ್ತೊಂದು ಬಾರಿ ಡಿಸೆಂಬರ್ 29ರಂದು ನಡೆದಿದೆ. ಇದರಲ್ಲಿ ಮತ್ತೊಮ್ಮೆ ಲೋಪದೋಷಗಳು ಕಂಡು ಬಂದಿದ್ದರಿಂದ ವಿಚಲಿತರಾಗಿರುವ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಮರುಪರೀಕ್ಷೆಯಲ್ಲಿ ಕಂಡು ಬಂದ ಲೋಪದೋಷಗಳ ಬಗ್ಗೆ ಅಭ್ಯರ್ಥಿಗಳು ಪದೇ ಪದೆ ಅಳಲು ತೋಡಿಕೊಂಡಿದ್ದಾರೆ” ಎಂದಿದ್ದಾರೆ.

“ಮರುಪರೀಕ್ಷೆ ನಡೆದು ಹದಿನೈದು ದಿನ ಕಳೆದರೂ ಈವರೆಗೆ ಸರ್ಕಾರವಾಗಲೀ, ಆಯೋಗವಾಗಲೀ, ಅಭ್ಯರ್ಥಿಗಳ ಆಕ್ಷೇಪಣೆಗಳಿಗೆ ಉತ್ತರ ನೀಡಿಲ್ಲ. ಲಕ್ಷಾಂತರ ಯುವ ಅಭ್ಯರ್ಥಿಗಳ ಭವಿಷ್ಯ ಡೋಲಾಯಮಾನವಾಗಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಕೆಪಿಎಸ್‌ಸಿ ಪರೀಕ್ಷೆಯಲ್ಲಾಗಿರುವ ಎಡವಟ್ಟುಗಳು, ಅದರಲ್ಲೂ ಮುಖ್ಯವಾಗಿ ಭಾಷಾಂತರದಲ್ಲಿ ಆಗಿರುವ ಲೋಪದೋಷಗಳ ದುಷ್ಪರಿಣಾಮವನ್ನು ಗ್ರಾಮೀಣ ಭಾಗದ ಯುವಕ ಯುವತಿಯರು ಎದುರಿಸಬೇಕಾಗಿದೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಕನ್ನಡ ಮಾಧ್ಯಮದಲ್ಲಿ ಶಾಲಾ, ಕಾಲೇಜು ವಿದ್ಯಾಭ್ಯಾಸ ಮಾಡಿರುವ ಸಾವಿರಾರು ಗ್ರಾಮೀಣ ಅಭ್ಯರ್ಥಿಗಳ ಕನಸು ನುಚ್ಚು ನೂರಾಗಿದೆ” ಎಂದು ದೂರಿದ್ದಾರೆ.

Advertisements

“ಸರ್ಕಾರ ಮತ್ತೊಮ್ಮೆ ದೋಷರಹಿತವಾಗಿ ಮರುಪರೀಕ್ಷೆ ನಡೆಸಬೇಕು ಅಥವಾ ಮುಖ್ಯಪರೀಕ್ಷೆಗೆ ಹಾಲಿ ಇರುವ 1:15 ಅನುಪಾತದ ಬದಲು 1:50 ಅನುಪಾತದಲ್ಲಿ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಸರ್ಕಾರ ಅಭ್ಯರ್ಥಿಗಳನ್ನು ಕರೆಸಿ ಮಾತನಾಡಬೇಕಿತ್ತು. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕಿತ್ತು. ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡುತ್ತೇವೆ, ಪ್ರಾಮಾಣಿಕ ಅಭ್ಯರ್ಥಿಗಳನ್ನು ಕೈ ಬಿಡುವುದಿಲ್ಲ ಎಂದು ಆಶ್ವಾಸನೆ ಕೊಟ್ಟು ಮನವೊಲಿಸಬೇಕಾಗಿತ್ತು. ಆದರೆ ಸರ್ಕಾರ ಇವ್ಯಾವುದನ್ನೂ ಮಾಡಿಲ್ಲ. ಎರಡೆರಡು ಬಾರಿ ಎಡವಟ್ಟು ಮಾಡಿದ್ದರೂ ತಪ್ಪೇ ನಡೆದಿಲ್ಲ ಎನ್ನುವ ಧೋರಣೆಯನ್ನು ಕಾಂಗ್ರೆಸ್ ಸರ್ಕಾರ ತೋರಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ

“ಒಂದು ಕಡೆ ಅಭ್ಯರ್ಥಿಗಳ ಭವಿಷ್ಯದ ಪ್ರಶ್ನೆಯಾದರೆ ಮತ್ತೊಂದು ಹೊಣೆಗಾರಿಕೆಯ ಪ್ರಶ್ನೆ. ಎರಡೆರಡು ಬಾರಿ ಪರೀಕ್ಷೆ ನಡೆಸಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ 25 ಕೋಟಿ ರೂಪಾಯಿಗೂ ಹೆಚ್ಚು ಹಣ ವೆಚ್ಚವಾಗಿದೆ. ಆದರೂ ಪರೀಕ್ಷೆ ದೋಷಮುಕ್ತವಾಗಿಲ್ಲವೆಂದರೆ ಇದಕ್ಕೆ ಯಾರು ಹೊಣೆ? ಇದಕ್ಕೆ ಹೊಣೆಯಾದವರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸಬೇಕಿತ್ತಲ್ಲವೇ? ಇದಕ್ಕೆ ಪ್ರಮುಖ ಕಾರಣರಾದ ಪರೀಕ್ಷಾ ನಿಯಂತ್ರಕರನ್ನು ಮುಂದುವರಿಸಲಾಗಿದೆ. ಮೊದಲ ಬಾರಿ ಎಡವಟ್ಟಾದ ನಂತರ ಅಕ್ಟೋಬರ್‌ 23 ರಂದು ಅವರಿಗಿಂತ ಹಿರಿಯರಾದ ಅಧಿಕಾರಿಯನ್ನು ಜಂಟಿ ಪರೀಕ್ಷಾ ನಿಯಂತ್ರಕ ಹುದ್ದೆಗೆ ನೇಮಿಸಲಾಗಿತ್ತು. ಅವರು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲಿಲ್ಲ. ನಿನ್ನೆ ಮತ್ತೊಬ್ಬ ಅಧಿಕಾರಿಯನ್ನು ನೇಮಿಸಲಾಗಿದೆ. ಇದು ಸರ್ಕಾರಕ್ಕೆ ಕೆಪಿಎಸ್ಸಿ ನೇಮಕಾತಿ ಬಗ್ಗೆ ಇರುವ ಕಾಳಜಿ” ಎಂದು ಆರ್‌.ಅಶೋಕ ಕಿಡಿಕಾರಿದ್ದಾರೆ.

“ಒಟ್ಟು 384 ಹುದ್ದೆಗಳ ಪೈಕಿ 40 ಎಸಿ ಹುದ್ದೆ ಇದೆ. ಇದು ಇದುವರೆಗಿನ ಅತಿ ಹೆಚ್ಚು ಎಂಬ ದಾಖಲೆಯಿದೆ. ಆಡಳಿತದ ಆಯಕಟ್ಟಿನ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಪ್ರಕ್ರಿಯೆಯಲ್ಲಿ ಇರಬೇಕಾದ ಗಂಭೀರತೆಯಾಗಲೀ, ಜವಾಬ್ದಾರಿಯಾಗಲೀ, ಈ ಸರ್ಕಾರಕ್ಕೆ ಇದ್ದಂತೆ ಕಾಣುತ್ತಿಲ್ಲ. ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯ ಒಟ್ಟಾರೆ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರಬೇಕು, ನ್ಯಾಯ ಸಮ್ಮತವಾಗಿರಬೇಕು ಮತ್ತು ಅರ್ಹರಿಗೆ ಮಾತ್ರ ಅವಕಾಶ ಸಿಗುವಂತಿರಬೇಕು ಎನ್ನುವುದು ನಮ್ಮ ಆಗ್ರಹ. ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಿ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X