ಸಿ ಟಿ ರವಿ ಅವಾಚ್ಯ ಪದ ಬಳಸಿದ್ದು ಸರ್ಕಾರಿ ಟಿ.ವಿಯಲ್ಲಿ ದಾಖಲು

Date:

Advertisements

ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ ಟಿ ರವಿ ವಿರುದ್ಧ ದಾಖಲಾಗಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹಬ್ಬಾಳ್ಕರ್‌ ಅವರನ್ನು ನಿಂದಿಸಿದ ಪ್ರಕರಣದಲ್ಲಿ ಬಹುಮುಖ್ಯವಾದ ಅಸಲಿ ಆಡಿಯೋ ಇದೀಗ ಸಿಐಡಿಗೆ ಲಭ್ಯವಾಗಿದೆ.ಈ ವಿಡಿಯೋದಲ್ಲಿ ಸಿ ಟಿ ರವಿ ಅವರು ಏಳು ಬಾರಿ ಹೆಬ್ಬಾಳ್ಕರ್‌ ಅವರಿಗೆ ನಿಂದಿಸಿರುವುದು ಕೇಳಿಬರುತ್ತದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ರವಿ ನಿಂದನೆ ಕುರಿತು ಖಾಸಗಿ ವಾಹಿನಿಗಳಲ್ಲಿ ವಿಡಿಯೋ ದಾಖಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಅದನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸಭಾಪತಿ ಹೇಳುತ್ತಿದ್ದರು. ಆದರೆ ಸದನದಲ್ಲಿನ ಸರ್ಕಾರಿ ಟಿ.ವಿಯಲ್ಲಿನ ವಿಡಿಯೋವೇ ಇದೀಗ ಸಿಕ್ಕಿದೆ. ಈ ವಿಡಿಯೋ ಸಿ.ಟಿ.ರವಿ ಅವರಿಗೆ ಕಂಟಕವಾಗಬಹುದಾದ ಸಾಧ್ಯತೆಯಿದೆ.

ಇದೇ ಕಾರಣಕ್ಕೆ ಅವರು ಧ್ವನಿ ಪರೀಕ್ಷೆಗೊಳಗಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ. ಈವರೆಗೆ ತಾನು ಸಚಿವೆಯನ್ನು ಉದ್ದೇಶಿಸಿ ‘ಪ್ರಸ್ಟೇಟ್’ ಎಂದು ಹೇಳಿದ್ದೇನೆಯೇ ಹೊರತು ನಿಂದಿಸಿಲ್ಲ ಎಂದು ವಾದಿಸಿದ್ದ ರವಿ ಅವರು, ತಾನು ನಿಂದಿಸಿದ್ದಕ್ಕೆ ಆಸಲಿ ವಿಡಿಯೋ ಇಲ್ಲ ಎಂದು ಹೇಳಿದ್ದರು.

Advertisements

ಇನ್ನೊಂದೆಡೆ ರವಿ ಅವರು ನಿಂದಿಸಿದ ಇಲ್ಲವೆಂದು ವಿಧಾನಪರಿಷತ್ ಸಭಾವತಿ ಬಸವರಾಜ ಹೊರಟ್ಟಿ ಕೂಡ ತಿಳಿಸಿದ್ದರು. ಈಗ ಅಸಲಿ ವಿಡಿಯೋ ಸಿಐಡಿಗೆ ಲಭ್ಯವಾಗಿರುವುದು ಭಾರೀ ಕುತೂಹಲ ಕರಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೂಪಾಯಿ ಮೌಲ್ಯ ಕುಸಿತವೂ, ವಿಶ್ವಗುರುವಿನತ್ತ ಮೋದಿ ಭಾರತವೂ

ಬೆಳಗಾವಿ ಅಧಿವೇಶನದ ವೇಳೆ ಮೇಲ್ಮನೆಯಲ್ಲಿ ನಡೆದಿದ್ದ ಘಟನಾವಳಿಗಳ ಕುರಿತು ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಗೆ (ಡಿಎಪಿಆರ್) ಸಿಐಡಿ ಮನವಿ ಮಾಡಿತ್ತು. ಈ ಕೋರಿಕೆಗೆ ಸಮ್ಮತಿಸಿದ ಡಿಎಪಿಆರ್, ಸಿಐಡಿಗೆ ಸದನದಲ್ಲಿ ನಿಂದನೆ ಕೃತ್ಯ ನಡೆದ ವೇಳೆ ಚಿತ್ರೀಕರಿಸಿದ್ದ 4 ಗಂಟೆ ವಿಡಿಯೋ ಸಲ್ಲಿಸಿದೆ. ಇದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಸಿಐಡಿ ರವಾನಿಸಿದ್ದು, ಆ ವಿಡಿಯೋದಲ್ಲಿ ಕೇಳಿ ಬರುವ ಧ್ವನಿ ರವಿ ಅವರದ್ದೇ, ಅಲ್ಲದೇ ಎಂದು ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆ. ಇದಕ್ಕಾಗಿ ಸಿಐಡಿ ಅಧಿಕಾರಿಗಳು ಧ್ವನಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

7 ಬಾರಿ ನಿಂದಿಸಿದ್ದ ರವಿ ಬೆಳಗಾವಿ ಅಧಿವೇಶನದ ವೇಳೆ ಡಿ.19 ರಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಅವರಿಗೆ ಅಸಂಸದೀಯ ಪದ ಬಳಸಿ ರವಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಹಿರೇ ಬಾಗೆವಾಡಿ ಠಾಣೆಯಲ್ಲಿ ಎಫ್‌ಐಆರ್‌ ಕೂಡ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಐಡಿ, ಆ ದಿನ ನಡೆದಿದ್ದ ಘಟನಾವಳಿ ಕುರಿತ ವಿಡಿಯೋ ನೀಡುವಂತೆ ಡಿಎಪಿಆರ್‌ಗೆ ಪತ್ರ ಬರೆದಿತ್ತು. ಈ ಕೋರಿಕೆ ಹಿನ್ನೆಲೆಯಲ್ಲಿ ಸಿಐಡಿಗೆ ಡಿಎಪಿಆರ್ ಇಲಾಖೆ ವಿಡಿಯೋ ಸಲ್ಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X