ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲಿ ಮಾತನಾಡಿದ ಚಂದ್ರ ಆರ್ಯ

Date:

Advertisements

ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ರಾಜೀನಾಮೆ ಹಿನ್ನೆಲೆಯಲ್ಲಿ ಮುಂದಿನ ಪ್ರಧಾನಿ ಹುದ್ದೆಗೆ ಕರ್ನಾಟಕ ಮೂಲದ ಚಂದ್ರ ಆರ್ಯ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಅವರು ಕನ್ನಡದಲ್ಲಿ ಮಾತನಾಡಿದರು.

ತುಮಕೂರು ಜಿಲ್ಲೆ ಸಿರಾ ತಾಲೂಕಿನ ದ್ವಾರಾಳು ಗ್ರಾಮದ ಮೂಲದವರಾಗಿರುವ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದರು. “ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ, ಸಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು, ಸುಮಾರು ಐದು ಕೋಟಿ ಕನ್ನಡಿಗರಿಗೆ ಹಮ್ಮೆಯ ವಿಚಾರ. ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು” ಎಂದು ಹೇಳಿದರು

ರಾಷ್ಟ್ರಕವಿ ಕುವೆಂಪು ಬರೆದಿರುವ ಹಾಗೂ ನಟಸಾರ್ವಭೌಮ ಡಾ. ರಾಜ್​ಕುಮಾರ್ ಹಾಡಿರುವ ಭಾವಗೀತೆ “ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೂಪಾಯಿ ಮೌಲ್ಯ ಕುಸಿತವೂ, ವಿಶ್ವಗುರುವಿನತ್ತ ಮೋದಿ ಭಾರತವೂ

ದೇಶವನ್ನು ಸಾರ್ವಭೌಮ ಗಣರಾಜ್ಯವನ್ನಾಗಿ ಮಾಡುವ, ನಿವೃತ್ತಿ ವಯಸ್ಸನ್ನು ಹೆಚ್ಚಿಸುವ, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವ ಮತ್ತು ಪ್ಯಾಲಿಸ್ತೀನ್ ದೇಶವನ್ನು ಗುರುತಿಸುವ ಭರವಸೆ ನೀಡುವ ಅಭಿಯಾನದೊಂದಿಗೆ ಲಿಬರಲ್ ನಾಯಕತ್ವಕ್ಕಾಗಿ ಸ್ಪರ್ಧಿಸುವುದಾಗಿ ಈ ಮೊದಲೇ ಹೇಳಿದ್ದರು.

2040 ರಲ್ಲಿ ನಿವೃತ್ತಿ ವಯಸ್ಸನ್ನು ಎರಡು ವರ್ಷಗಳವರೆಗೆ ಹೆಚ್ಚಿಸುವುದು, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವುದು ಮತ್ತು ಪ್ಯಾಲಿಸ್ತೀನ್ ಅನ್ನು ಒಂದು ರಾಷ್ಟ್ರವಾಗಿ ಗುರುತಿಸುವುದು ಚಂದ್ರ ಆರ್ಯ ಅವರು ನೀಡಿರುವ ಭರವಸೆಗಳಾಗಿವೆ.

ನಮ್ಮ ರಾಷ್ಟ್ರವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗೆ ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಸಣ್ಣ, ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು 2015 ರಲ್ಲಿ ನೇಪಿಯನ್‌ನ ಉಪನಗರ ರೈಡಿಂಗ್‌ನಲ್ಲಿ ಮೊದಲ ಬಾರಿಗೆ ಆಯ್ಕೆಯಾದ ಆರ್ಯ ಹೇಳಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ಕ್ಷಾಮ ಉಲ್ಬಣ: ಸುತ್ತಲಿನ ಪ್ರದೇಶಗಳಿಗೂ ಬರ ಪರಿಸ್ಥಿತಿ ಸಾಧ್ಯತೆ

ಗಾಝಾದಲ್ಲಿನ ಕ್ಷಾಮ ಪರಿಸ್ಥಿತಿ ಮತ್ತಷ್ಟು ಹೆಚ್ಚಳವಾಗಿದೆ ಮತ್ತು ಅದು ಸುತ್ತಮುತ್ತಲಿನ ಪ್ರದೇಶಗಳಿಗೂ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X