ಯುವತಿಯ ಖಾಸಗಿ ಕ್ಷಣಗಳ ವಿಡಿಯೋ ಮತ್ತು ಫೋಟೋಗಳನ್ನು ಇಟ್ಟುಕೊಂಡು ಆಕೆಯ ಸೋದರ ಮಾವನೇ ಬ್ಲಾಕ್‌ಮೇಲ್ ಮಾಡುತ್ತಿದ್ದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆದರೆ, ಆತನ ಬ್ಲಾಕ್‌ಮೇಲ್‌ಗೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ಸುಹಾಸಿ ಸಿಂಗ್ ಆತ್ಮಹತ್ಯೆಗೆ ಶರಣಾದ ಯುವತಿ. ಆಕೆ ಎಚ್‌ಎಎಲ್ ಬಳಿಕ ಹೋಟೆಲ್‌ನಲ್ಲಿ ಆರೋಪಿ ಸೋದರ ಮಾವನ ಎದುರೇ ಪೆಟ್ರೋಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡಿದ್ದಾರೆ. ಗಂಭೀರ ಸುಟ್ಟು ಗಾಯಗಳಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಸುಹಾಸಿ ಅವರ ಖಾಸಗಿ ಕ್ಷಣಗಳ ದೃಶ್ಯಗಳನ್ನಿಟ್ಟುಕೊಂಡು ಬ್ಲಾಕ್‌ಮೇಲೆ ಮಾಡಿದ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆಕೆಯ ಸೋದರಮಾವ ಆರ್. ಪ್ರವೀಣ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ. ಆತನ್ನು ಪೊಲೀಸರು ಬಂಧಿಸಿದ್ದಾರೆ.
ಸುಹಾಸಿ ಮತ್ತು ಆರೋಪಿ ಪ್ರವೀಣ್ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಉತ್ತಮ ಒಡನಾಟವಿತ್ತು. ಆಕೆಯ ಒಡನಾಟವನ್ನೇ ದುರ್ಬಳಕೆ ಮಾಡಿಕೊಂಡಿದ್ದ ಪ್ರವೀಣ್, ಆಕೆಗೆ ತಿಳಿಯದಂತೆ ಆಕೆಯ ಖಾಸಗಿ ಕ್ಷಣಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದ. ಈ ನಡುವೆ ಇಬ್ಬರ ನಡುವೆ ಮನಸ್ಥಾಪ ಉಂಟಾಗಿ, ಪ್ರವೀಣ್‌ನಿಂದ ಸುಹಾಸಿ ಅಂತರ ಕಾಯ್ಡುಕೊಂಡಿದ್ದರು.
ಇದರಿಂದ, ಕುಪಿತಗೊಂಡ ಪ್ರವೀಣ್, ಆಕೆಯ ಖಾಸಗಿ ದೃಶ್ಯಗಳನ್ನು ತೋರಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ. ಜ.12ರಂದು ತಾನು ಬುಕ್ ಮಾಡಿದ್ದ ಹೋಟೆಲ್ ರೂಮ್‌ಗೆ ಬರುವಂತೆ ಒತ್ತಡ ಹೇರಿದ್ದ. ಆತನ ಬೆದರಿಕೆ, ಬ್ಲಾಕ್‌ಮೇಲ್‌ಗಳಿಂದ ಬೇಸತ್ತ ಯುವತಿ, ಹೋಟೆಲ್‌ಗೆ ಬಂದ ಯುವತಿ ಆತನ ಎದುರೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
