ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಶಂಕಿತ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿ ಈಗ ಬಂಧನಕ್ಕೆ ಒಳಗಾಗಿದ್ದಾನೆ. ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಸೈಫ್ ಅಲಿ ಖಾನ್ ಅವರು ಹಲ್ಲೆಗೆ ಒಳಗಾಗಿರುವುದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುವ ಹಂತದಲ್ಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೂಪಾಯಿ ಮೌಲ್ಯ ಕುಸಿತವೂ, ವಿಶ್ವಗುರುವಿನತ್ತ ಮೋದಿ ಭಾರತವೂ
ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಅಲ್ಲಿ ಆತನ ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಮಾಡಿದ ಹಿಂದಿನ ಉದ್ದೇಶವೇನು? ಆತ ಸೈಫ್ ಮನೆ ತಲುಪಿದ್ದು ಹೇಗೆ? ಈ ದಾಳಿ ಹಿಂದೆ ಬೇರೆ ಯಾರ ಕೈವಾಡ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದ ವ್ಯಕ್ತಿಯ ಭಾವಚಿತ್ರವನ್ನು ಮುಂಬೈ ಪೊಲೀಸರು ಬಹಿರಗಂಪಡಿಸಿದ್ದರು. ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿ ಅಪಾರ್ಟ್ಮೆಂಟ್ಗೆ ನುಗ್ಗಿದ್ದ. ಶಂಕಿತ ವ್ಯಕ್ತಿಯು ಟಿ-ಶರ್ಟ್ ಮತ್ತು ಜೀನ್ಸ್ ಧರಿಸಿದ್ದ.
