ವಿಜಯಪುರ | ಎಸ್‌ಡಿಪಿಐ ನೂತನ ಜಿಲ್ಲಾಧ್ಯಕ್ಷರಾಗಿ ಅತಾವುಲ್ಲಾ ದ್ರಾಕ್ಷಿ ಆಯ್ಕೆ

Date:

Advertisements

ವಿಜಯಪುರ ಜಿಲ್ಲೆಯ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ 2024-27ರ ಅವಧಿಗೆ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಅತಾವುಲ್ಲಾ ದ್ರಾಕ್ಷಿ ಅವರು ಆಯ್ಕೆಯಾದರು.

ಇನ್ನು ಎಸ್‌ಡಿಪಿಐ ಉಪಾಧ್ಯಕ್ಷರಾಗಿ ಸಮೀರ್ ಹುಣಸಗಿ ಮತ್ತು ನಾಜಿಯಾ ಮುಲ್ಲಾ , ಜಿಲ್ಲಾ ಪ್ರಧಾನ  ಕಾರ್ಯದರ್ಶಿಗಳಾಗಿ ನಿಸಾರ್ ಅಹ್ಮದ್ ಮನಿಯಾರ್ ಮತ್ತು ಮೆಹಬೂಬ್ ಕೋಲಾರ್ , ಕಾರ್ಯದರ್ಶಿಯಾಗಿ ಅಡ್ವೋಕೇಟ್ ಸಮೀಉಲ್ಲಾ ಬಡೇಘರ್ , ಕೋಶಾಧಿಕಾರಿಯಾಗಿ ಇಸಾಕ್  ಸಯ್ಯದ್ ಹಾಗೂ ಸಮಿತಿ ಸದಸ್ಯರುಗಳಾಗಿ ಅಡ್ವೋಕೇಟ್ ಗೌಸ್ ಜಕಾತಿ, ಎಜಾಜ್ ಮನಿಯಾರ್, ಮುನಾಫ್ ಪಠಾಣ, ಸೈಫನ್ ಮುಲ್ಲಾ, ಉಮರಖಾನ್ ಪಠಾಣ್ , ಯಾಸಿರ್ ಇನಾಮದಾರ್, ನಾಮನಿರ್ದೇಶಿತ ಸದಸ್ಯರಾಗಿ ಉಮರ್ ಪುಣೇಕರ್ ರವರು ಆಯ್ಕೆಯಾದರು.

ಪಕ್ಷದ ವಿಜಯಪುರ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಆಫ್ಸರ್ ಕೊಡ್ಲಿಪೇಟೆ, ಬಾಗಲಕೋಟೆಯ ಜಮಖಂಡಿಯಲ್ಲಿ ನಡೆದಿದ್ದ ಬಂದೂಕು ತರಬೇತಿಗೆ ಸಂಬಂಧಿಸಿದಂತೆ ಕೇವಲ 27 ಜನರ ವಿರುದ್ಧ FIR ದಾಖಲಿಸಿ ಕೈ ತೊಳೆದುಕೊಂಡಿರುವ ಸರ್ಕಾರ ಯಾಕೆ ಈ ಪ್ರಕರಣವನ್ನು NIA ತನಿಖೆ ವಹಿಸಿಲ್ಲ? ಬಂದೂಕು ತರಬೇತಿಯಂತಹ ಶಿಬಿರದ ಮೂಲಕ ಭಯವನ್ನು ಹುಟ್ಟಿಸುವ ಕೆಲಸ ನಡೆಯುತ್ತಿದ್ದರೂ ಗೃಹ ಇಲಾಖೆ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.

Advertisements

ಸನಾತನ ಸಂಸ್ಥೆಯ ಕಾರ್ಯಕರ್ತರು 2017ರ ಸೆಪ್ಟೆಂಬರ್ 5 ರಂದು ದಿಟ್ಟ ಪತ್ರಕರ್ತೆಯಾಗಿದ್ದ ಗೌರಿ ಲಂಕೇಶರನ್ನು ಗುಂಡಿಕ್ಕಿ ಹತ್ಯೆಗೈದಿದ್ದ ಪ್ರಕರಣದ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆಗೆ ಇದೇ ರೀತಿಯ ಬಂದೂಕು ತರಬೇತಿ ನೀಡಲಾಗಿತ್ತು ಎಂದು SIT ತನಿಖೆಯಿಂದ ತಿಳಿದುಬಂದಿದೆ. ಈತ ವಿಚಾರವಾದಿ ನರೇಂದ್ರ ದಾಬೋಲ್ಕರ್ ರನ್ನು ಗುಂಡಿಕ್ಕಿ ಕೊಂದ ಪ್ರಮುಖ ಆರೋಪಿ ಕೂಡ ಆಗಿದ್ದಾನೆ. ಇವನಿಗೂ ಈಗ ಬಂದೂಕು ತರಬೇತಿ ನೀಡುತ್ತಿರುವವರಿಗೂ ಸಂಬಂಧವಿದೆಯೇ ಎಂಬ ಬಗ್ಗೆ ಪೊಲೀಸ್‌ ಇಲಾಖೆ ಉನ್ನತ ಮಟ್ಟದ ತನಿಖೆ ಮಾಡಬೇಕು. ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿಗಳಿಗೆ  ಜಾಮೀನು ಮಂಜೂರುಗೊಳಿಸಿರುವುದು ಸ್ವೀಕಾರಾರ್ಹವಲ್ಲ. ಜನಪರ ಹೋರಾಟಗಾರರ ಸಾಲು ಸಾಲು ಜಾಮೀನು ಅರ್ಜಿಗಳು ಧೂಳು ಮುಕ್ಕುತ್ತಿವೆ. ಆದರೆ ಗೌರಿಹತ್ಯೆ ಆರೋಪಿಗಳಿಗೆ ಸುಲಭದಲ್ಲಿ ಜಾಮೀನು ದೊರಕುತ್ತಿರುವುದು ವಿಷಾದನೀಯ. ಗೌರಿಹತ್ಯೆ ಆರೋಪಿಗಳಿಗೆ ನೀಡಿರುವ ಜಾಮೀನು ಇವರಲ್ಲಿ ಇನ್ನಷ್ಟು ಕೊಲೆಗಳನ್ನು ನಡೆಸಲು ಧೈರ್ಯ ನೀಡಿದಂತಾಗುತ್ತದೆ ಹಾಗಾಗಿ ಜಾಮೀನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ತೋಟಗಾರಿಕಾ ಬೆಳೆಗಳ ತ್ವರಿತ ಸಾಗಣೆಗೆ ರೈಲುಸೇವೆ ಒದಗಿಸಲು ಸಚಿವ ವಿ. ಸೋಮಣ್ಣಗೆ ಮನವಿ

ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಅತಾವುಲ್ಲಾ ದ್ರಾಕ್ಷಿ ಸಮೀರ್ ಹುಣಸಗಿ, ನಾಜಿಯಾ ಮುಲ್ಲಾ, ಇಸಾಕ್  ಸಯ್ಯದ್, ಇತರ ಪಕ್ಷದ ಮುಖಂಡರು ಸೇರಿದಂತೆ ಹಲವು ಕಾರ್ಯಕರ್ತರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X