ಈ ದೇಶದ ನಿರ್ಮಾತೃಗಳು ರಾಜಕಾರಣಿಗಳಲ್ಲ, ಉದ್ಯಮಿಗಳು: ನಾರಾಯಣ ಮೂರ್ತಿ

Date:

Advertisements


ರಾಜಕಾರಣಿಗಳು, ಅಧಿಕಾರಿಗಳು ಈ ದೇಶದ ನಿರ್ಮಾತೃಗಳಲ್ಲ. ಉದ್ಯಮಿಗಳು ನಿಜವಾದ ನಿರ್ಮಾತೃಗಳು. ಬಡ ರೈ ತ, ಕಾರ್ಮಿಕರಿಗೆ ಶಕ್ತಿ ತುಂಬುವ ಸಾಮರ್ಥ್ಯ ಇರುವುದು ಅವರಿಗೆ ಮಾತ್ರ’ ಎಂದು ಇನ್ಫೊಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.

ಬೇರುಂಢ ಫೌಂಡೇಶನ್ ವತಿಯಿಂದ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶುಕ್ರವಾರ ಮೈಸೂರು ಉದ್ಯಮಗಳ ವೇದಿಕೆ ಉದ್ಘಾಟಿಸಿ ಅವರು ಮಾತನಾಡಿದರು.

“ಸರ್ಕಾರಗಳು ನೇರವಾಗಿ ಉದ್ಯೋಗ ನೀಡುವುದಲ್ಲ, ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು. ಆರ್ಥಿಕತೆ ನಿರ್ಮಾಣದಲ್ಲಿ ಸರ್ಕಾರದ ಪಾಲ್ಗೊಳ್ಳುವಿಕೆ ಕಡಿಮೆ ಇದ್ದಷ್ಟು ಫಲಿತಾಂಶ ಉತ್ತಮವಾಗಿರುತ್ತದೆ. ಸರ್ಕಾರಗಳು ಉದ್ಯೋಗ ಹಾಗೂ ಸಂಪತ್ತಿನ ಸೃಷ್ಟಿಗೆ ಪೂರಕವಾದ ನಿಯಮಗಳನ್ನು ರೂಪಿಸಬೇಕು. ಅದರಿಂದ ಸಂಗ್ರಹವಾಗುವ ತೆರಿಗೆಯನ್ನು ದೇಶದ ಅಭಿವೃದ್ಧಿಗೆ ವಿನಿಯೋಗಿಸಬೇಕು’ ಎಂದು ಸಲಹೆ ನೀಡಿದರು.

Advertisements

‘ಗರಿಬಿ ಹಠಾವೋ ಅಂತಹ ಘೋಷಣೆಗಳು ಕೇವಲ ಹೇಳಿಕೆಗಳಿಗೆ ಸೀಮಿತವಷ್ಟೇ . ಉದ್ಯೋಗ ನೀಡುವುದರಿಂದ ಅಭಿವೃದ್ಧಿ ಆಗುತ್ತದೆಯೇ ಹೊರತು ಉಚಿತವಾಗಿ ಹಣ ಹಂಚುವುದರಿಂದ ಅಲ್ಲ. ಉದ್ಯಮಗಳು ಬೆಳೆದು ಹೆಚ್ಚೆಚ್ಚು ಉದ್ಯೋಗ ಸೃಷ್ಟಿಯಾದಾಗ ಮಾತ್ರ ಬಡತನ ನಿರ್ಮೂಲನೆ ಸಾಧ್ಯ. ರಾಜಕಾರಣಿಗಳು, ಅಧಿಕಾರಿಗಳು ಈ ದೇಶದ ನಿರ್ಮಾತೃಗಳಲ್ಲ. ಉದ್ಯಮಿಗಳು ನಿಜವಾದ ನಿರ್ಮಾತೃಗಳು. ಬಡ ರೈ ತ, ಕಾರ್ಮಿಕರಿಗೆ ಶಕ್ತಿ ತುಂಬುವ ಸಾಮರ್ಥ್ಯ ಇರುವುದು ಅವರಿಗೆ ಮಾತ್ರ’ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೂಪಾಯಿ ಮೌಲ್ಯ ಕುಸಿತವೂ, ವಿಶ್ವಗುರುವಿನತ್ತ ಮೋದಿ ಭಾರತವೂ

‘ಇಂದಿಗೂ 80 ಕೋಟಿ ಜನರಿಗೆ ಉಚಿತ ಪಡಿತರ ನೀಡುತ್ತಿರುವ ಭಾರತದಂತಹ ಒಂದೇ ಆರ್ಥಿಕತೆಯನ್ನು ನೆಚ್ಚಿ ಕೂರಬೇಡಿ. ಜಾಗತಿಕ ಮಾರುಕಟ್ಟೆಗೆ ತಕ್ಕಂತೆ ನಿಮ್ಮ ಯೋಜನೆಗಳನ್ನು ರೂಪಿಸಿ. ಸುಸ್ಥಿರ, ಜಾಗತಿಕ ದರ್ಜೆಯ ಗುಣಮಟ್ಟದ ಉದ್ಯಮ ನಿಮ್ಮ ಆದ್ಯತೆಯಾಗಲಿ’ ಎಂದು ಉದ್ಯಮಿಗಳಿಗೆ ಕಿವಿಮಾತು ಹೇಳಿದರು.

ಸಮಾಜದಲ್ಲಿನ ಬಡತನ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಅಸಮಾನತೆ ತೊಡೆದುಹಾಕಲು ಶ್ರಮಿಸುವುದು ಉದ್ಯಮಿಗಳ ಕರ್ತವ್ಯ. ಕಟ್ಟಕಡೆಯ ಹಳ್ಳಿಯ ಬಡ ಮಗುವಿನ ಜೀವನಮಟ್ಟ ಸುಧಾರಣೆ ನಮ್ಮ ಹೊಣೆ’ ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜವಂಶಸ್ಥೆ ತ್ರಿಷಿಕಾ ಒಡೆಯರ್ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X