ಬೆಳಗಾವಿ | ಗಾಂಧಿ ಭಾರತ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ, ಖರ್ಗೆ ಆಗಮನ: ಸತೀಶ್ ಜಾರಕಿಹೊಳಿ

Date:

Advertisements

ಗಾಂಧಿ ಭಾರತ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವುದು ಖಾತ್ರಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “‌ಗಾಂಧಿ ಭಾರತ ಕಾರ್ಯಕ್ರಮದ ಪ್ರಯುಕ್ತ ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಶೀರ್ಷಿಕೆಯಡಿ ಬೆಳಗಾವಿ ನಗರದಲ್ಲಿ ಜನವರಿ 21ರಂದು ನಡೆಯುವ ಕಾಂಗ್ರೆಸ್ ಅಧಿವೇಶನದಲ್ಲಿ 2 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವರು” ಎಂದು ತಿಳಿಸಿದರು.

“ಈ ಕಾರ್ಯುಕ್ರಮ ಮೊದಲೇ ನಿಗದಿಯಾಗಿತ್ತು. ಆದರೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಕಾರಣ ಮುಂದೂಡಲಾಗಿತ್ತು. ಅಂದು ಬೆಳಿಗ್ಗೆ ಸುವರ್ಣ ಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸುತ್ತೇವೆ. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷಾತೀತವಾಗಿ ಎಲ್ಲ ನಾಯಕರೂ ಭಾಗವಹಿಸುವರು” ಎಂದು ಸತೀಶ್ ಜಾರಕಿಹೊಳಿ ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ಎಸ್‌ಸಿ, ಎಸ್‌ಟಿ ಕಾಲೋನಿಗಳಿಗೆ ಸರಳ ಖಾತಾ ಆಂದೋಲನ ಸಭೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಸಭೆ ಬಹಿಷ್ಕಾರ

“ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ ಸಿಂಗ್‌ ಸುರ್ಜೇವಾಲ, ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಸಭೆ ನಡೆಸುವರು. ಗಾಂಧಿ ಭಾರತ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸುವರು. ಶನಿವಾರ ಬೇರೆ ಜಿಲ್ಲೆಗಳಿಗೆ ತೆರಳುವರು” ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X