ಅನ್ನಭಾಗ್ಯ, ಯುವ ನಿಧಿ ಗ್ಯಾರಂಟಿ ಯೋಜನಗಳ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

Date:

Advertisements
  • ಅನ್ನಭಾಗ್ಯ ಯೋಜನೆಯಡಿ ಕುಟುಂಬದ ಪ್ರತಿ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿ
  • ಯುವನಿಧಿ ಯೋಜನೆಯಡಿ ತಿಂಗಳಿಗೆ ರೂ. 3,000 ಮತ್ತು ‍1,500 ರೂ. ನಿರುದ್ಯೋಗ ಭತ್ಯೆ

ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯಲ್ಲಿನ ಐದು ಗ್ಯಾರಂಟಿಗಳ ಪೈಕಿ, ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಮತ್ತು ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್) ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗಳು ಎರಡೂ ಯೋಜನೆಗಳ ಅನುಷ್ಠಾನಕ್ಕೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಿವೆ. ಶುಕ್ರವಾರ ನಡೆದ ಸಂಪುಟ ಸಭೆಯ ನಿರ್ಣಯದಂತೆ ಈ ಆದೇಶಗಳನ್ನು ಹೊರಡಿಸಲಾಗಿದೆ.

ಪದವಿ ಮತ್ತು ಡಿಪ್ಲೊಮಾ ಕೋರ್ಸ್‌ಗಳನ್ನು 2023ರಲ್ಲಿ ಪೂರೈಸುವವರಿಗೆ ಯುವ ನಿಧಿ ಯೋಜನೆಯಡಿ ಕ್ರಮವಾಗಿ ತಿಂಗಳಿಗೆ ರೂ. 3,000 ಮತ್ತು ‍1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.

Advertisements

ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಎಲ್ಲ ಸದಸ್ಯರಿಗೆ ಜುಲೈ ತಿಂಗಳಿನಿಂದ ತಲಾ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ.

ಅನ್ನ ಭಾಗ್ಯ ಯೋಜನೆ ಮಾರ್ಗಸೂಚಿಗಳು

  • ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಪ್ರತಿ ಕುಟುಂಬಕ್ಕೆ ಕೇಂದ್ರ ಸರ್ಕಾರ ತಿಂಗಳಿಗೆ 35 ಕೆ.ಜಿ. ಆಹಾರಧಾನ್ಯ ಉಚಿತವಾಗಿ ಒದಗಿಸುತ್ತಿದೆ.
  • ಇನ್ನು ಮುಂದೆ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬಗಳಲ್ಲಿ ಮೂವರು ಸದಸ್ಯರಿದ್ದರೆ ತಿಂಗಳಿಗೆ 35 ಕೆ.ಜಿ. ಆಹಾರ ಧಾನ್ಯ ಉಚಿತವಾಗಿ ದೊರೆಯಲಿದೆ.
  • ಈ ಕುಟುಂಬಗಳಲ್ಲಿ ನಾಲ್ಕು ಜನರಿದ್ದರೆ ತಲಾ 10 ಕೆ.ಜಿ.ಯಂತೆ ಒಟ್ಟು 40 ಕೆ.ಜಿ., ಐವರು ಇದ್ದರೆ ಒಟ್ಟು 50 ಕೆ.ಜಿ. ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಪ್ರತಿ ವ್ಯಕ್ತಿಗೆ ಹತ್ತು ಕೆ.ಜಿ.ಯಂತೆ ಉಚಿತ ಅಕ್ಕಿ ಸಿಗಲಿದೆ.
  • ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಲ್ಲಿ ಪ್ರತಿ ಸದಸ್ಯರಿಗೆ ಹತ್ತು ಕೆ.ಜಿ.ಯಂತೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗುತ್ತದೆ.
  • ಅಂತ್ಯೋದಯ ಪಡಿತರ ಚೀಟಿ ಹೊಂದಿದ ಕುಟುಂಬಗಳಿಗೆ ತಲಾ 35 ಕೆ.ಜಿ. ಮತ್ತು ಬಿಪಿಎಲ್‌ ಕುಟುಂಬಗಳ ಪ್ರತಿ ಸದಸ್ಯರಿಗೆ ತಲಾ ಐದು ಕೆ.ಜಿ. ಆಹಾರ ಧಾನ್ಯವನ್ನು ಕೇಂದ್ರ ಸರ್ಕಾರವು ಆಹಾರ ಭದ್ರತಾ ಕಾಯ್ದೆಯಡಿ ಉಚಿತವಾಗಿ ಒದಗಿಸುತ್ತಿದೆ. ಹೆಚ್ಚುವರಿ ಅಹಾರ ಧಾನ್ಯದ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

ಈ ಸುದ್ದಿ ಓದಿದ್ದೀರಾ? ಜನರ ನಿರೀಕ್ಷೆಗೆ ತಕ್ಕಂತೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ; ಲಕ್ಷ್ಮೀ ಹೆಬ್ಬಾಳ್ಕರ್‌


ಯುವ ನಿಧಿ ಮಾರ್ಗಸೂಚಿಗಳು:

  • ಉತ್ತೀರ್ಣರಾದ ನಂತರ ಆರು ತಿಂಗಳವರೆಗೂ ಯಾವುದೇ ಉದ್ಯೋಗ ದೊರಕದ ಕನ್ನಡಿಗರಿಗೆ ಯೋಜನೆ ಅನ್ವಯವಾಗುತ್ತದೆ.
  • ಎರಡು ವರ್ಷಗಳವರೆಗೆ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಬಹುದು. ಎರಡು ವರ್ಷಕ್ಕೂ ಮೊದಲೇ ಉದ್ಯೋಗ ದೊರೆತರೆ ಭತ್ಯೆ ಪಾವತಿ ಸ್ಥಗಿತಗೊಳಿಸಲಾಗುತ್ತದೆ.
  • ನಿರುದ್ಯೋಗ ಸ್ಥಿತಿಯ ಕುರಿತು ಸ್ವತಂತ್ರ ಪರಿಶೀಲನೆ ನಡೆಸಲಾಗುತ್ತದೆ. ಉದ್ಯೋಗ ದೊರಕಿದ ಕುರಿತು ತಪ್ಪು ಮಾಹಿತಿ ನೀಡಿದರೆ ಅಥವಾ ಘೋಷಣೆ ಮಾಡದಿದ್ದರೆ ದಂಡ ವಿಧಿಸಲಾಗುತ್ತದೆ.
  • ನೇರ ನಗದು ಪಾವತಿ ವ್ಯವಸ್ಥೆ ಮೂಲಕ ನಿರುದ್ಯೋಗ ಭತ್ಯೆ ಪಾವತಿ ಮಾಡಲಾಗುತ್ತದೆ. ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ.

ಯೋಜನೆಗೆ ಅರ್ಹರಾಗದೆ ಇರುವವರು

  • ಪದವಿ ಅಥವಾ ಡಿಪ್ಲೊಮಾ ನಂತರ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆದಿರುವವರು.
  • ಶಿಶಿಕ್ಷು (ಅಪ್ರೆಂಟಿಸ್‌ಶಿಪ್) ವೇತನ ಪಡೆಯುತ್ತಿರುವವರು.
  • ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.
  • ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X