“ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಖುಷಿ ನಿನ್ನೆ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಸರಿಯಾದ ಕಾರಣ ಗೊತ್ತಾಗಿಲ್ಲ’ ಎಂದು ವರದಿಯಾಗಿದೆ. ಸರಿಯಾಗಿ ನಿಷ್ಪಕ್ಷಪಾತ ತನಿಖೆ ಮಾಡಿ ನ್ಯಾಯ ಒದಗಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು” ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್ ಒತ್ತಾಯಿಸಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ವಿದ್ಯಾರ್ಥಿನಿ ಸಂಶಯಾಸ್ಪದ ಸಾವು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಎಸ್ ಎಫ್ ಐ ತಾಲೂಕು ಶಿರಸ್ತೇದಾರ್ ಪಿ ಬಿ ಶಿಂಗ್ರೀ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.
“ಈ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರು ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಇದಕ್ಕೆ ಯಾವುದೇ ಜಾತಿ ಧರ್ಮದ ಬಣ್ಣ ಹಚ್ಚದೆ ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವ ಕೆಲಸ ಮಾಡಬೇಕೆಂದು” ಎಸ್ ಎಫ್ ಐ ತಾಲ್ಲೂಕು ಸಮಿತಿಯು ಒತ್ತಾಯಿಸುತ್ತದೆ” ಎಂದು ಹೇಳಿದರು.
ಎಸ್ ಎಫ್ ಐ ರಾಜ್ಯ ಉಪಾಧ್ಯಕ್ಷ ಗಣೇಶ್ ರಾಠೋಡ್ ಮಾತನಾಡಿ, “ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ಧ, ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು. ವರ್ಮಾ ಸಮಿತಿಯ ಶಿಪಾರಸ್ಸಿನಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ರಚಿಸಿ. ದೂರು ಪೆಟ್ಟಿಗೆಗಳನ್ನು ಅಳವಡಿಸಬೇಕು. ದೂರು ನಿರ್ವಹಣಾ ಸಮಿತಿಯನ್ನು ರಚಿಸಿ, ಬಂದ ದೂರುಗಳನ್ನು 15 ದಿನ, ತಿಂಗಳಿಗೊಮ್ಮೆ ತಗೆದು ದೂರುಗಳನ್ನು ನಿವಾರಿಸುವ ಕೆಲಸವನ್ನು ಮಾಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗವಿಸಿದ್ಧೇಶ್ವರ ಜಾತ್ರೆ; ಈ ಬಾರಿ ಅನ್ನದಾಸೋಹದಲ್ಲಿ ಜಿಲೇಬಿ ಸಿಹಿ!
ಮನವಿ ಸಂದರ್ಭದಲ್ಲಿ ಡಿ ವೈ ಎಫ್ ಐ ಮುಖಂಡರು ಶಿವಾಜಿ ಜಿ, ಕನಕಪ್ಪ ಹಾದಿಮನಿ, ತಾಲ್ಲೂಕು ಎಸ್ ಎಫ್ ಐ ಮುಖಂಡರು ಹನುಮಂತ ಎಂ, ರಮೇಶ್ ಕೆ, ಕೃಷ್ಣ ಅನೇಕರು ಉಪಸ್ಥಿತರಿದ್ದರು.