ಮುಡಾ ಹಗರಣ | ಭಂಡತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ಬಿ ವೈ ವಿಜಯೇಂದ್ರ ಆಗ್ರಹ

Date:

Advertisements

ಮೈಸೂರು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿಗಳು ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಮುಂಚಿತವಾಗಿ ಸಿಬಿಐ ತನಿಖೆಗೆ ಪ್ರಕರಣವನ್ನು ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಮುಡಾ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸ್ನೇಹಮಯಿ ಕೃಷ್ಣ ಅವರು ಬಯಲಿಗೆ ಎಳೆದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಇದರ ವಿರುದ್ಧ ಸದನದ ಒಳಗಡೆ ಹಾಗೂ ಸದನದ ಹೊರಗಡೆ ಹೋರಾಟ ಮಾಡುತ್ತ ಬಂದಿದ್ದೇವೆ. ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ್ದೆವು” ಎಂದು ವಿವರಿಸಿದರು.

“ಮುಡಾ ಹಗರಣವು ನಿನ್ನೆ ಮಹತ್ವದ ತಿರುವು ಪಡೆದುಕೊಂಡಿದೆ. ಜಾರಿ ನಿರ್ದೇಶನಾಲಯವು (ಇಡಿ) 300 ಕೋಟಿಗೂ ಹೆಚ್ಚು ಬೆಲೆಬಾಳುವ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳು ತಮ್ಮ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಹಗರಣದಿಂದ ಮುಡಾಕ್ಕೆ ಕೋಟಿಗಟ್ಟಲೆ ನಷ್ಟವಾಗಿದೆ” ಎಂದು ಆರೋಪಿಸಿದರು.

Advertisements

“ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಬಡವರಿಗೆ ಮಂಜೂರಾಗಬೇಕಿದ್ದ ನಿವೇಶನಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು, ದಲ್ಲಾಳಿಗಳಿಗೆ ನೀಡಿದ್ದು ಸ್ಪಷ್ಟವಾಗಿದೆ. ಇದರಿಂದ ಸರಕಾರ ಮತ್ತು ಮುಡಾಕ್ಕೆ ಸಾವಿರಾರು ಕೋಟಿ ನಷ್ಟವಾದುದು ಮತ್ತೊಮ್ಮೆ ಋಜುವಾತಾಗಿದೆ. ಪ್ರಕರಣವನ್ನು ಬಯಲಿಗೆ ಎಳೆದ ಸ್ನೇಹಮಯಿ ಕೃಷ್ಣ ಅವರ ಧ್ವನಿ ಹತ್ತಿಕ್ಕುವ ಕೆಲಸವನ್ನು ರಾಜ್ಯ ಸರಕಾರ ಮಾಡಿತ್ತು” ಎಂದು ಆಕ್ಷೇಪಿಸಿದರು.

ಈ ಸುದ್ದಿ ಓದಿದ್ದೀರಾ? ಗದ್ದುಗೆ ಗುದ್ದಾಟ | ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಉಳಿಯುತ್ತಾ?

“ಸ್ನೇಹಮಯಿ ಕೃಷ್ಣ ಅವರ ಮೇಲೆ ಆರೋಪ ಹೊರಿಸಿ ಅವರನ್ನು ಬಂಧಿಸುವ ಹಂತಕ್ಕೂ ರಾಜ್ಯ ಸರಕಾರ ಹೋಗಿತ್ತು. ಇ.ಡಿ. ಕೈಗೊಂಡ ಕ್ರಮಗಳಿಂದ ಸಿದ್ದರಾಮಯ್ಯನವರು ಮತ್ತೊಮ್ಮೆ ಅಪರಾಧಿ ಸ್ಥಾನದಲ್ಲಿ ನಿಂತಿದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಟ್ಟ ರಾಜ್ಯಪಾಲರ ಮೇಲೂ ಅಪವಾದ ಹೊರಿಸುವ ಕೆಲಸವನ್ನು ಸಿದ್ದರಾಮಯ್ಯನವರ ನೇತೃತ್ವದ ಸರಕಾರದ ಸಚಿವರು ಮಾಡಿದ್ದರು. ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಟ್ಟದ್ದೇ ಅಪರಾಧ ಎಂಬಂತೆ ಬಿಂಬಿಸಲು ಯತ್ನಿಸಿದ್ದರು. ನಂತರ ರಾಜ್ಯ ಹೈಕೋರ್ಟ್, ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಟ್ಟದ್ದು ಸರಿಯಾಗಿದೆ. ಮೇಲ್ನೋಟಕ್ಕೆ ಮುಡಾ ಹಗರಣದಲ್ಲಿ ತಪ್ಪು, ಅವ್ಯವಹಾರ ನಡೆದಿದೆ ಎಂದಿತ್ತು. ಅಲ್ಲದೆ, ಸಿಎಂ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶನ ಕೊಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೇ ಋಜುವಾತಾದಾದುದನ್ನು ಹೈಕೋರ್ಟ್ ಮತ್ತೊಮ್ಮೆ ಹೇಳಿತ್ತು” ಎಂದು ವಿವರಿಸಿದರು.

“ನಮಗೆ ಸಿದ್ದರಾಮಯ್ಯನವರ ಬಗ್ಗೆ ದ್ವೇಷ ಇಲ್ಲ; ಆದರೆ, ಅಪರಾಧ ಆದ ಸಂದರ್ಭದಲ್ಲಿ, ತಪ್ಪಾಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಈಗಾಗಲೇ ರಾಜೀನಾಮೆ ಕೊಡಬೇಕಾಗಿತ್ತು. ಮುಖ್ಯಮಂತ್ರಿಗಳು ಸ್ವಯಂಪ್ರೇರಿತರಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕಿತ್ತು. ಸಿದ್ದರಾಮಯ್ಯನವರು ಹಗರಣವನ್ನು ದೀರ್ಘ ಕಾಲ ಎಳೆದುಕೊಂಡು ಬಂದಿದ್ದಾರೆ” ಎಂದು ಆಕ್ಷೇಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X