‌ಮುಡಾ | ಸಿಎಂ ಮತ್ತು ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಮುಡಾ ಪ್ರಕರಣದ ತನಿಖೆ ಸುದೀರ್ಘ ಪ್ರಕ್ರಿಯೆ ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂದು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು, ನೀವು ನಾನು ವಿಚಾರಣೆ ಮಾಡುವಂತಹದಲ್ಲ. ನಾನು ಇ.ಡಿ ತನಿಖೆ ನೋಡಿದ್ದೇನೆ. ಈ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನು ಹೇಳುವುದಿಲ್ಲ. ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ ಎಂದು ಡಿಸಿಎಂ ಡಿ‌ ಕೆ ಶಿವಕುಮಾರ್ ಅಭಿಪ್ರಾಯಪಟ್ಟರು.

ಬೆಳಗಾವಿಯ ಸುವರ್ಣಸೌಧ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಶಿವಕುಮಾರ್ ಅವರು ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ. ಈ ವಿಚಾರ ಬಿಟ್ಟು ರಾಜ್ಯದ ವಿಚಾರದ ಬಗ್ಗೆ ಗಮನಹರಿಸಿ” ಎಂದರು.

“ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಘನ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯ ಸಭೆ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿ ಟಿ ರವಿಯನ್ನು ರಕ್ಷಿಸಲು ಹೋಗಿ ತಮ್ಮ ಘನತೆ ಕಳೆದುಕೊಂಡರೇ ಸಭಾಪತಿ ಹೊರಟ್ಟಿ?

“ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಹಾಗೂ ಪರಿಷತ್ತಿನ ಸಭಾಪತಿಗಳು ಭಾಗವಹಿಸಲಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದ ನಂತರ ನೆನಪಿಗಾಗಿ ಎಲ್ಲಾ ಶಾಸಕರ ಗುಂಪು ಫೋಟೋ ತೆಗೆಯಲಾಗುವುದು. ನಂತರ ಅತಿಥಿಗಳು ಹಾಗೂ ಆಹ್ವಾನಿತರಿಗೆ ಮುಖ್ಯಮಂತ್ರಿಗಳು ಭೋಜನಕೂಟ ಏರ್ಪಡಿಸಲಿದ್ದಾರೆ. ಶಾಸಕರ ಹೊರತಾಗಿ ಗಂಗಾಧರ ದೇಶಪಾಂಡೆ ಅವರ ಕುಟುಂಬ ಸೇರಿದಂತೆ ಪ್ರಮುಖ ಕುಟುಂಬದವರಿಗೂ ಆಹ್ವಾನ ನೀಡಲಾಗುವುದು” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X