ಹದಿನಾರು ವರ್ಷದ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಅತ್ಯಾಚಾರ ನಡೆಸಿ ಬಲವಂತವಾಗಿ ಗರ್ಭಪಾತ ಮಾಡಿಸಿರುವ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ. ಈ ಸಂಬಂಧ ಜಸ್ವಂತ್ (37), ಆತನ ಸ್ನೇಹಿತ ಸುಲ್ತಾನ್ ಮತ್ತು ಸಂತ್ರಸ್ತೆಯ ನೆರೆಹೊರಯವನಾದ ಸಿಕಂದರ್ (55) ಎಂಬ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫರಿದಾಬಾದ್‌ನ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ಸಹಾಯವಾಣಿಗೆ ಪ್ರದೀಪ್ ಕುಮಾರ್ ಎಂಬವರು ದೂರು ನೀಡಿದ್ದಾರೆ. 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ನಂತರ ಗರ್ಭಪಾತ ಮಾಡಿಸಿಕೊಂಡಿದ್ದಾರೆ ಎಂದು ದೂರು ನೀಡಲಾಗಿದೆ.
ಇದನ್ನು ಓದಿದ್ದೀರಾ? ಬಳ್ಳಾರಿ | ತೋರಣಗಲ್ಲು ಅಪ್ರಾಪ್ತೆಯ ಅತ್ಯಾಚಾರ ಖಂಡನೆ; ಅರೋಪಿಗಳ ಬಂಧನಕ್ಕೆ ಎಸ್‌ಎಫ್‌ಐ ಒತ್ತಾಯ
ಈ ಘಟನೆಗೆ ಸಂಬಂಧಿಸಿದಂತೆ ಎರಡು ಎನ್‌ಜಿಒಗಳಾದ ಶಕ್ತಿ ವಾಹಿನಿ ಮತ್ತು ನೊಸೃಷ್ಟಿ ಸಂಸ್ಥೆಯಿಂದ ಕರೆ ಬಂದಿದೆ ಎಂದು ಪ್ರದೀಪ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಬಳಿಕ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ.
ಸಂತ್ರಸ್ತೆಯು ತನ್ನ ಮದ್ಯವ್ಯಸನಿ ತಂದೆ ಮತ್ತು ಕಿರಿಯ ಸಹೋದರನನ್ನು ನೋಡಿಕೊಳ್ಳಲು ಭಿಕ್ಷಾಟನೆ ಮಾಡುತ್ತಿದ್ದಳು. ಸುಮಾರು ಮೂರು ತಿಂಗಳ ಹಿಂದೆ ಆಕೆಯ ಸಹೋದರ ನಾಪತ್ತೆಯಾಗಿದ್ದು, ಆಕೆಗೆ ಆಹಾರ ನೀಡುತ್ತಿದ್ದ ಆಟೋ ಚಾಲಕ ಜಸ್ವಂತ್ ಸಹೋದರನನ್ನು ಹುಡುಕಲು ಸಹಾಯ ಮಾಡುವುದಾಗಿ ಆಟೋದಲ್ಲಿ ಕರೆದೊಯ್ದಿದ್ದಾನೆ.
“ಜಸ್ವಂತ್ ಆಕೆಯನ್ನು ತನ್ನ ಕೋಣೆಗೆ ಕರೆದೊಯ್ದಿದ್ದು, ಆತನ ಸ್ನೇಹಿತ ಸುಲ್ತಾನ್ ಜೊತೆ ಹಲವು ಬಾರಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯಾರಿಗಾದರು ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದರು ಎಂದು ಸಂತ್ರಸ್ತೆ ತಿಳಿಸಿದ್ದಾಳೆ” ಎಂದು ಕುಮಾರ್ ಪೊಲೀಸರಿಗೆ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಸಂತ್ರಸ್ತೆ ಜೊತೆ ಮದುವೆ ಷರತ್ತು; ಅತ್ಯಾಚಾರ ಆರೋಪಿಗೆ ಜಾಮೀನು
ಇನ್ನು ಸಂತ್ರಸ್ತೆಯ ನೆರೆಮನೆಯ ಸಿಕಂದರ್ ಎಂಬಾತನು ಆಕೆಗೆ ಆಹಾರ ಮತ್ತು ಚಹಾ ನೀಡಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ಮೂವರು ಆರೋಪಿಗಳನ್ನು ಕೂಡಾ ಪೊಲೀಸರು ಬಂಧಿಸಿದ್ದಾರೆ. ಪೋಕ್ಸೊ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎನ್‌ಜಿಒ ಸಿಆರ್‌ವೈ ವರದಿಯ ಪ್ರಕಾರ ದೇಶದಲ್ಲಿ 2016ರಿಂದ 2022ರ ನಡುವೆ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಸುಮಾರು ಶೇಕಡ 96ರಷ್ಟು ಏರಿಕೆಯಾಗಿದೆ. ಇನ್ನೂ ಹಲವು ಪ್ರಕರಣಗಳು ವರದಿಯೇ ಆಗಿಲ್ಲ.
