ರಾಯಚೂರು | ರಸ್ತೆ ನಿರ್ಮಿಸುವಂತೆ ಮೀರಾಪೂರ ಶಾಲೆ ಮಕ್ಕಳ ಮನವಿ

Date:

Advertisements

ರಾಯಚೂರು ತಾಲೂಕಿನ ಜೇಗರ್‌ಕಲ್, ಮೀರಾಪೂರ ಗ್ರಾಮಕ್ಕೆ ಹೋಗುವ ರಸ್ತೆ ತೀರಾ ಹದೆಗಟ್ಟಿದ್ದು, ಇದರಿಂದ ಈ ಮಾರ್ಗಕ್ಕೆ ಬಸ್‌ಗಳು ಸರಿಯಾಗಿ ಬಾರದೆ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮೀರಾಪೂರ ಶಾಲೆ ಮಕ್ಕಳು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರಿಗೆ ಮನವಿ ಸಲ್ಲಿಸಿದರು.

“ಮೀರಾಪುರ ಗ್ರಾಮದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದರಿಂದ ಗ್ರಾಮಕ್ಕೆ ಸರಿಯಾಗಿ ಬಸ್ ಬರುತ್ತಿಲ್ಲ. ಈ ಬಗ್ಗೆ ಈಗಾಗಲೇ ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಲಾಗಿದ್ದು, ಈವರೆಗೂ ರಸ್ತೆ ದುರಸ್ತಿ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಮಕ್ಕಳು ಹಾಗೂ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

“ಗ್ರಾಮದ ರಸ್ತೆ ಹದಗೆಟ್ಟಿರುವ ಕಾರಣ ನಿತ್ಯವೂ ಒಂದಲ್ಲ ಒಂದು ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಇತ್ತೀಚೆಗೆ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ತೆರಳುವ ಸಂದರ್ಭದಲ್ಲಿ ಪೂರ್ತಿ ಹದೆಗೆಟ್ಟ ರಸ್ತೆಯಿಂದ ಮಗು ಗರ್ಭದಲ್ಲಿಯೇ ಸಾವನಪ್ಪಿರುವ ಘಟನೆ ನಡೆದಿದೆ. ಟ್ರಾಕ್ಟರ್‌ಗಳು ಜಮೀನುಗಳಿಗೆ ಉರುಳಿ ಬೀಳುತ್ತಿವೆ. ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಗ್ರಾಮದ ರಸ್ತೆಯನ್ನು ದುರಸ್ತಿಗೊಳಿಸುವಂತೆ ಸೂಚನೆ ನೀಡಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ₹6 ಕೋಟಿ ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದಲ್ಲಿ ಹುಳು ಪತ್ತೆ; ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆ

“ಗ್ರಾಮಕ್ಕೆ ಶನಿವಾರ ಮತ್ತು ಭಾನುವಾರ ಬಸ್ ಬರುತ್ತಿಲ್ಲ. ಇದರಿಂದ ಶಾಲೆಗೆ ಹೋಗಲು ಸಾಕಷ್ಟು ತೊಂದರೆಯಾಗುತ್ತಿದ್ದು, ಬಸ್ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಿಕೊಡುವಂತೆ ಸೂಚಿಸಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಕಾಶಪ್ಪ, ನಾಗರಾಜ್, ಭರತ್, ನಿರ್ಮಲಾ, ಮಹಾದೇವಮ್ಮ, ಮಹೇಶ, ಮೇಘನಾ, ಮಹಾಲಕ್ಷ್ಮೀ ಭವಾನಿ, ಅನಿಷಾ, ಅನಿತಾ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X