ಒಡಿಶಾ ರೈಲು ದುರಂತ : ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಬೇಡಿಕೆ ಇಟ್ಟ ಸೋನು ಸೂದ್‌

Date:

Advertisements

ಒಡಿಶಾದ ಬಾಲಾಸೋರ್‌ನಲ್ಲಿ ಶುಕ್ರವಾರ ರಾತ್ರಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳು ಮತ್ತು ಗಾಯಗೊಂಡಿರುವವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಘೋಷಿಸಿವೆ. ಆದರೆ, ಈ ತಾತ್ಕಾಲಿಕ ಪರಿಹಾರದಿಂದ ಬರುವ ಹಣ ಮೂರ್ನಾಲ್ಕು ತಿಂಗಳಿಗೆ ಖಾಲಿಯಾಗುತ್ತದೆ. ಸಂತ್ರಸ್ತ ಕುಟುಂಬಗಳು ಕೆಲವೇ ದಿನಗಳಲ್ಲಿ ಮತ್ತೆ ಅಸಹಾಯಕ ಸ್ಥಿತಿಯನ್ನು ತಲುಪುತ್ತವೆ. ಹೀಗಾಗಿ ಶಾಶ್ವತ ಪರಿಹಾರ ನೀಡುವ ಬಗ್ಗೆ ಸರ್ಕಾರಗಳು ಚಿಂತನೆ ನಡೆಸಬೇಕು ಎಂದು ನಟ, ಸಮಾಜ ಸೇವಕ ಸೋನು ಸೂದ್‌ ಅಭಿಪ್ರಾಯ ಪಟ್ಟಿದ್ದಾರೆ.

ರೈಲು ದುರಂತದ ಕುರಿತು ತಾವು ಮಾತನಾಡಿರುವ ಮೂರು ನಿಮಿಷಗಳ ವಿಡಿಯೋವನ್ನು ಸೋನು ಸೂದ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾದಿಂದಾಗಿ ಇಡೀ ದೇಶದ ತುಂಬಾ ದುಖಃದ ಛಾಯೆ ಆವರಿಸಿದೆ. ಆದರೆ, ಯಾರು ಕೂಡ ಅಪಘಾತದಲ್ಲಿ ಮೃತಪಟ್ಟ ಅಥವಾ ಗಾಯಗೊಂಡ ವ್ಯಕ್ತಿಗಳು ಮತ್ತವರ ಕುಟುಂಬದವರ ಬಗ್ಗೆ ಯೋಚಿಸುತ್ತಿಲ್ಲ. ಎಲ್ಲ ರಾಜಕೀಯ ಪಕ್ಷಗಳು ಈ ಘಟನೆಯನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳಲು ಯತ್ನಿಸುತ್ತಿವೆ. ನಾವುಗಳು ಟ್ವೀಟ್‌ ಮಾಡಿ ದುಖಃ ವ್ಯಕ್ತಪಡಿಸಿ, ನಮ್ಮ ವೈಯಕ್ತಿಕ ಬದುಕಿನಲ್ಲಿ ಬ್ಯುಸಿಯಾಗಿ ಬಿಡುತ್ತೇವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಅಪಘಾತದಲ್ಲಿ ದುಡಿಮೆ ಮಾಡುವ ಸಲುವಾಗಿ ಚೆನ್ನೈಗೆ ಹೊರಟಿದ್ದ ಕೆಲ ಬಿಹಾರದ ಕೂಲಿ ಕಾರ್ಮಿಕರು, ಕೆಲ ಕುಟುಂಬಗಳು ಹೀಗೆ ಹಲವರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ಮತ್ತು ಗಾಯಗೊಂಡವರಿಗೆ ಪರಿಹಾರ ಸಿಗತ್ತದೆ. ಆ ಪರಿಹಾರ ಮೂರ್ನಾಲ್ಕು ತಿಂಗಳುಗಳಿಗೆ ಖಾಲಿಯಾಗುತ್ತದೆ. ಮನೆಗೆ ಆಧಾರವಾಗಿದ್ದ ವ್ಯಕ್ತಿ ಶಾಶ್ವತವಾಗಿ ಗಾಯಗೊಂಡು ಹಾಸಿಗೆ ಹಿಡಿದರೆ ಅಂತಹ ಕುಟುಂಬಗಳು ಯಾವತ್ತಿಗೂ ಸುಧಾರಿಸಲು ಸಾಧ್ಯವೇ ಇಲ್ಲ. ಅಂತಹ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ಸಾಕಾಗುವುದಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಾಶ್ವತ ಪರಿಹಾರ ನೀತಿಗಳನ್ನು ರೂಪಿಸಬೇಕು. ಈ ರೀತಿಯ ದುರಂತಗಳಿಗೆ ಬಲಿಯಾದ ವ್ಯಕ್ತಿ ಅಥವಾ ಕುಟುಂಬಗಳಿಗೆ ನೆರವಾಗಲು ಪಿಂಚಣಿಯ ಮಾದರಿಯಲ್ಲಿ ಮಾಸಿಕ ಪರಿಹಾರವನ್ನು ನೀಡುವಂತಾಗಬೇಕು” ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Advertisements

“ರಾಜಕೀಯ ಪಕ್ಷದವರು ಒಬ್ಬರನ್ನೊಬರು ದೂಷಿಸುವುದನ್ನು ಬಿಟ್ಟು ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿ ಸುಮ್ಮನಾದರೆ ಸಾಲದು, ದುರಂತಕ್ಕೀಡಾದ ಎಲ್ಲ ಕುಟುಂಬಗಳಿಗೆ ನೆರವಾಗಲು ಜನರು ಒಟ್ಟಾಗಿ ಪರಿಹಾರ ನಿಧಿಯನ್ನು ಸಂಗ್ರಹಿಸೋಣ” ಎಂದು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X