ರಾಯಚೂರು | ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಶೀಘ್ರದಲ್ಲಿ ನಿರ್ಧಾರ: ಶರಣಪ್ರಕಾಶ ಪಾಟೀಲ್

Date:

Advertisements

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಳಷ್ಟು ವಿಳಂಬವಾಗಿದೆ. ಈ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸಲಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆೆಗಳನ್ನು ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.

ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಚುನಾವಣೆಗೆ ತಾಂತ್ರಿಕ ತೊಡಕುಗಳು ಎದುರಾಗಿ ವಿಳಂಬವಾಗಿತ್ತು. ಮಾರ್ಚ್ ತಿಂಗಳ ಬಜೆಟ್ ನಂತರ ಸ್ಥಳೀಯ ಚುನಾವಣೆಗಳನ್ನು ನಡೆಸಲು ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.

“ಮಹಾತ್ಮ ಗಾಂಧೀಜಿಯವರ ಆದರ್ಶ ಮತ್ತು ಹಾದಿಯಲ್ಲಿಯೇ ಕಾಂಗ್ರೆಸ್ ಪಕ್ಷ 100 ವರ್ಷಗಳಿಂದಲೂ ನಡೆದುಬಂದಿದೆ. ಮುಂದೆಯೂ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿಯೇ ಪಕ್ಷ ನಡೆಯುತ್ತದೆ. ಇಡೀ ದೇಶಕ್ಕೆ ಸತ್ಯ ಮತ್ತು ಅಂಹಿಸೆಯ ಸಂದೇಶವನ್ನು ಸಾರಿದ ಮಹಾತ್ಮ ಗಾಂಧೀಜಿಯವರ ತತ್ವ ಸಿದ್ದಾಂತಗಳಿಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಅವರ ತತ್ವಗಳ ತಳಹದಿಯಲ್ಲಿ ದೇಶವನ್ನು ಕಟ್ಟುವ ಕೆಲಸವನ್ನು ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಮಾಡಬೇಕಾಗಿದೆ” ಎಂದು ಕರೆ ನೀಡಿದರು.

Advertisements

“ಬೀದರ್ ದರೋಡೆ ಪ್ರಕರಣದ ಕುರಿತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಕರಣದ ಬಗ್ಗೆ ಗೃಹಸಚಿವ ಡಾ. ಪರಮೇಶ್ವರ್ ಅವರ ಬಗ್ಗೆ ಹಗುರವಾಗಿ ಮಾತನಾಡುವುದು‌‌ ಸರಿಯಲ್ಲ‌. ಅವರು ಕಳಂಕರಹಿತ ನಾಯಕ. ಈ ಹುದ್ದೆಯನ್ನು ನಿಭಾಯಿಸುವ ಶಕ್ತಿ ಅವರಿಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪತ್ರಕರ್ತರಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲವಾಗಿದೆ : ಶಾಸಕ ಬಿ ಆರ್ ಪಾಟೀಲ್

“ಕೇಂದ್ರ ಬಿಜೆಪಿ ಸರ್ಕಾರ ಇಡಿ, ಸಿಬಿಐ, ಆದಾಯ ತೆರಿಗೆ ಇಲಾಖೆಯನ್ನು ಕೈಗೊಂಬೆಯಾಗಿಸಿಕೊಂಡಿದೆ. ವಿರೋಧ ಪಕ್ಷದವರ ಮೇಲೆ ರೈಡ್ ಮಾಡಿಸಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ.‌ ಇದೊಂದು ಕೆಟ್ಟ ರಾಜಕಾರಣ” ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಸಚಿವ ಎನ್‌ ಎಸ್ ಬೋಸರಾಜ, ಶಾಸಕ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಎ ವಸಂತಕುಮಾರ, ಜಿಲ್ಲಾಧ್ಯಕ್ಷ ಬಸವರಾಜ ಪಾಟಿಲ್ ಇಟಗಿ, ಕಾಂಗ್ರೆಸ್ ಮುಖಂಡ ರಜಾಕ್ ಉಸ್ತಾದ್, ಕೆ ಶಾಂತಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಡಾ. ನಾಗವೇಣಿ ಎಸ್ ಪಾಟೀಲ್ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X