ಬೀದರ್‌ | ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣ : 5 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Date:

Advertisements

ಬೀದರ್‌ನ ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾದ ರಾಜು ಕಪನೂರ್‌ ಸೇರಿ ಐದು ಆರೋಪಿಗಳನ್ನು ನಗರದ ಜೆಎಂಎಫ್‌ಸಿ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಶನಿವಾರ ಆದೇಶಿಸಿತು.

ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ಕಲಬುರಗಿಯ ಮಾಜಿ ಕಾರ್ಪೊರೇಟರ್ ರಾಜು ಕಪನೂರ್, ನಂದಕುಮಾರ್ ನಾಗಭುಜಂಗೆ, ಗೋರಖನಾಥ್, ರಾಮನಗೌಡ ಪಾಟೀಲ್ ಹಾಗೂ ಸತೀಶ್ ಅವರು ವಿಚಾರಣೆಗೆ ಬಂದ ವೇಳೆ ಸಿಐಡಿ ಪೊಲೀಸರು ಜ.10ರಂದು ಬಂಧಿಸಿದ್ದರು. ಬಳಿಕ ನ್ಯಾಯಾಲವರು ಐದು ದಿನಗಳವರೆಗೆ ಸಿಐಡಿ ಕಸ್ಟಡಿಗೆ ಒಪ್ಪಿಸಿತ್ತು. ನ್ಯಾಯಾಲವು ಜನವರಿ 15 ರಂದು ಪುನಃ ಮೂರು ದಿನಗಳವರೆಗೆ ಸಿಐಡಿ ಕಸ್ಟಡಿ ಅವಧಿ ವಿಸ್ತರಿಸಿತ್ತು. ಸಿಐಡಿ ಕಸ್ಟಡಿ ಅವಧಿ ಮುಗಿದ ಕಾರಣ ಶನಿವಾರ (ಜ.18) ರಂದು ಐದು ಜನ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ನ್ಯಾಯಾಧೀಶ ರಾಮಮೂರ್ತಿ ಅವರು ಸಿಐಡಿ ಹಾಗೂ ಆರೋಪಿಗಳ ಪರ ವಕೀಲರ ವಾದ-ವಿವಾದ ಆಲಿಸಿ ನಂತರ ಹೆಚ್ಚಿನ ವಿಚಾರಣೆಗಾಗಿ ಐವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಶು ಮೇಳ: ಬೆರಗುಗೊಳಿಸಿದ 90 ಕೆಜಿ ತೂಕದ ಮೇಕೆ, ₹9 ಲಕ್ಷದ ಗಿರ್‌ ತಳಿ ಎತ್ತು

ಕೊಲೆ ಬೆದರಿಕೆ ಇದೆ ಎಂದು ಆರೋಪಿಸಿ ಸಚಿನ್ ಪಾಂಚಾಳ್ ಡಿ.26 ರಂದು ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ಸೇರಿದಂತೆ ಎಂಟು ಜನರು ಹೆಸರು ಉಲ್ಲೇಖಿಸಿದ ಮರಣಪತ್ರ ಬರೆದಿಟ್ಟು ಬೀದರ್-‌ ಹೈದರಾಬಾದ್ ಮಾರ್ಗದ ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಆರೋಪಿಗಳ ವಿರುದ್ಧ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X