ಭದ್ರಾವತಿಯ ಬಾರಂದೂರು ಕ್ರಾಸ್ ಬಳಿ ಭೀಕರ ಅಫಘಾತ ಸಂಭವಿಸಿದ್ದು, ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ತರೀಕೆರೆ ಮೂಲದ ಕೃತಿ(21) ಮೃತ ದುರ್ದೈವಿ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಸಮೀಪದ ಅಮೃತಾಪುರದ ಕೃತಿ, ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಶಿವಮೊಗ್ಗದಿಂದ ಊರಿಗೆ ತೆರಳುತ್ತಿದ್ದ ವೇಳೆ ಭದ್ರಾವತಿ ತಾಲೂಕಿನ ಬಾರಂದೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ನಾಲ್ವರು ಗಾಯಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರ? ತುಮಕೂರು | ಪತ್ರಕರ್ತರಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲವಾಗಿದೆ : ಶಾಸಕ ಬಿ ಆರ್ ಪಾಟೀಲ್
ಉಳಿದಂತೆ ಕಾರಿನಲ್ಲಿದ್ದ ಮೂವರು ಹಾಗೂ ಟ್ರಾಕ್ಟರ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಟ್ರಾಕ್ಟರ್ ಕೂಡ ಪಲ್ಟಿಯಾಗಿದ್ದು, ಕಾರು ಜಖಂಗೊಂಡಿದೆ.
ಈ ಸಂಬಂಧ ಭದ್ರಾವತಿಯ ಕಾಗದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.