ಬಸ್ ಮತ್ತು ಲಾರಿಯ ನಡುವೆ ನಡೆದ ಭೀಕರ ಅಪಘಾತ ನಡೆದು ಇಬ್ಬರು ಸಾವನ್ನಪ್ಪಿ, ಒಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಿಯನಗರಂ ಜಿಲ್ಲೆಯ ಮಾದುಪದ ಹೆದ್ದಾರಿ ಸಮೀಪದಲ್ಲಿ ನಡೆದಿದೆ.
ಅನಿಲ್ ನೀರುಕೊಂಡ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್‌ಗೆ ಸಂಬಂಧಿಸಿದ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಬಸ್ ಒಡಿಶಾದಿಂದ ವಾಪಸ್ ಬರುತ್ತಿದ್ದಾಗ ಈ ಅಪಘಾತ ನಡೆದಿದೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಬಿಹಾರ | ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಐವರ ದಾರುಣ ಸಾವು
ಪೊಲೀಸ್ ಅಧಿಕಾರಿಗಳ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಸ್ಥಿತಿ ಗಂಭೀರವಾಗಿದ್ದಾರೆ ಎಂದು ಹೇಳಲಾಗಿದೆ. ಇನ್ನು ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಐದು 108 ಆ್ಯಂಬುಲೆನ್ಸ್ ಆಗಮಿಸಿದ್ದು ಬಸ್‌ನಲ್ಲಿ ಸಿಲುಕಿರುವ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಲಾಗಿದೆ.
