ಟೆಸ್ಟ್‌ ಕ್ರಿಕೆಟ್‌ | ನಿವೃತ್ತಿ ದಿನಾಂಕ ಘೋಷಿಸಿದ ಡೇವಿಡ್‌ ವಾರ್ನರ್‌

Date:

Advertisements

ಆಸ್ಟ್ರೇಲಿಯಾ ತಂಡದ ದಿಗ್ಗಜ ಆಟಗಾರ, ಎಡಗೈ ಬ್ಯಾಟರ್‌ ಡೇವಿಡ್‌ ವಾರ್ನರ್‌ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಮುಂಚಿತವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ನರ್, ಜನವರಿಯಲ್ಲಿ ಪಾಕಿಸ್ತಾನದ ವಿರುದ್ಧದ ಸರಣಿಯ ಮೂಲಕ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಲು ಬಯಸಿದ್ದೇನೆ ಎಂದು ತಿಳಿಸಿದ್ದಾರೆ.

2024ರ ಜನವರಿಯಲ್ಲಿ ಎರಡು ಪಂದ್ಯಗಳ ಕಿರು ಟೆಸ್ಟ್‌ ಸರಣಿಯನ್ನಾಡಲು ಪಾಕಿಸ್ತಾನ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಸರಣಿಯ ಒಂದು ಪಂದ್ಯವು ವಾರ್ನರ್‌ ತವರು ಮೈದಾನ ಸಿಡ್ನಿಯಲ್ಲಿ ನಡೆಯಲಿದೆ. ಆ ಪಂದ್ಯವು ನನ್ನ ವೃತ್ತಿ ಜೀವನದ ಕೊನೆಯ ಟೆಸ್ಟ್‌ ಪಂದ್ಯವಾಗಿರಲಿದೆ ಎಂದು ವಾರ್ನರ್‌ ಹೇಳಿದ್ಧಾರೆ.

Advertisements

ಟೆಸ್ಟ್‌ ಕ್ರಿಕೆಟ್‌ ಹೊರತುಪಡಿಸಿ, ಏಕದಿನ ಮತ್ತು ಟಿ20 ಪಂದ್ಯಗಳಲ್ಲಿ ಆಡುವುದನ್ನು ಮುಂದುವರೆಸಲಿದ್ದೇನೆ .2024ರಲ್ಲಿ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ವಿಶ್ವಾಸವಿದೆ ಎಂದು ವಾರ್ನರ್ ತಿಳಿಸಿದ್ದಾರೆ.

36 ವರ್ಷದ ಡೇವಿಡ್ ವಾರ್ನರ್, ಇದುವರೆಗೂ 102 ಟೆಸ್ಟ್ ಪಂದ್ಯಗಳನ್ನಾಡಿದ್ದು,187 ಇನಿಂಗ್ಸ್​ನಲ್ಲಿ ಒಟ್ಟು 8158 ರನ್​ ಕಲೆ ಹಾಕಿದ್ದಾರೆ. 25 ಶತಕ ಮತ್ತು 34 ಅರ್ಧಶತಕ ಗಳಿಸಿರುವ ವಾರ್ನರ್ ಆಸ್ಟ್ರೇಲಿಯಾದ ಅತ್ಯಂತ ಯಶಸ್ವಿ ಆರಂಭಿಕ ಆಟಗಾರರಲ್ಲಿ ಒಬ್ಬರಾಗಿದ್ದಾರೆ.

ಮುಂದಿನ ವಾರ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯಕ್ಕಾಗಿ ಭಾರತ- ಆಸ್ಟ್ರೇಲಿಯಾ ತಂಡಗಳು ಈಗಾಗಲೇ ಇಂಗ್ಲೆಂಡ್‌ ತಲುಪಿದ್ದು, ಕಠಿಣ ಅಭ್ಯಾಸದಲ್ಲಿ ತೊಡಗಿವೆ. ಇದಾದ ಬಳಿಕ ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಆ್ಯಶಸ್ ಟೆಸ್ಟ್‌ ಸರಣಿ ನಡೆಯಲಿದೆ. ಈ ಸರಣಿಯಲ್ಲೂ ವಾರ್ನರ್‌ ಆಸ್ಟ್ರೇಲಿಯಾ ತಂಡದ ಭಾಗವಾಗಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

Download Eedina App Android / iOS

X