ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಹಲವು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದೆ ಎಂದು ವರದಿಯಾಗಿದೆ.
ಟೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಕಾರಣ ತಿಳಿದುಬಂದಿಲ್ಲ. ಸುತ್ತಲೂ ಪ್ರದೇಶದಲ್ಲಿ ದಟ್ಟವಾಗಿ ಹೊಗೆ ಆವರಿಸಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಮಾಹಿತಿ ಪಡೆದ ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾ ಕುಂಭಮೇಳ ಯಾರಿಗಾಗಿ, ಯಾತಕ್ಕಾಗಿ?
#UPDATE | Prayagraj, Uttar Pradesh: The fire that broke out in #MahaKumbhMela2025 has been brought under control, say Police https://t.co/qs1FCZNupM
— ANI (@ANI) January 19, 2025
ಪೊಲೀಸ್ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳ ಜೊತೆಗೆ ಆಡಳಿತದ ಸ್ಥಳೀಯ ಅಧಿಕಾರಿಗಳು ಕೂಡಾ ಬೆಂಕಿ ನಂದಿಸುವ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎನ್ನಲಾಗಿದೆ. ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.
