ಮುಂಬರುವ ಜ. 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಜೈಬಾಪು, ಜೈಭೀಮ, ಜೈ ಸಂವಿಧಾನ ಘೋಷಣೆಯಡಿ ‘ಗಾಂಧಿ ಭಾರತ’ ಕಾರ್ಯಕ್ರಮ ಯಶಸ್ವಿ ಮಾಡುವ ಸಲುವಾಗಿ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ ಅಧ್ಯಕ್ಷತೆಯಲ್ಲಿ ಕಿತ್ತೂರಿನ ನಿರೀಕ್ಷಣ ಮಂದಿರದಲ್ಲಿ (ಐಬಿ) ಪೂರ್ವಭಾವಿ ಸಭೆ ಹಮ್ಮಿಕೊಂಡಿದ್ದರು.
ಸಭೆಯನ್ನು ಉದ್ದೇಸಿಸಿ ಶಾಸಕ ವಿನಯ ಕುಲಕರ್ಣಿ ಮಾತನಾಡಿ, ಮಹಾತ್ಮಾ ಗಾಂಧೀಜಿಯವರು 1924 ರಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಥಮ ಕಾಂಗ್ರೆಸ್ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸುವದು ನಮ್ಮೆಲ್ಲರ ಪುಣ್ಯವಾಗಿದ್ದು, ಅಧಿವೇಶನ ನಮ್ಮ ಗಡಿಭಾಗದಲ್ಲಿ ಇರುವದರಿಂದ ನಮ್ಮ ಜವಾಬ್ದಾರಿ ಹೆಚ್ಚಿದೆ. ಎಲ್ಲರೂ ಮುತವರ್ಜಿ ವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಹಾಗೂ ಸಾರ್ವಜನಿಕರು ಭಾಗವಯಿಸುವಂತೆ ಪ್ರಯತ್ನಿಸಬೇಕು. ಎಲ್ಲಾ ರಾಷ್ಟ್ರೀಯ ನಾಯಕರು ಆ ಕಾರ್ಯಕ್ರಮಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಮೋದಿ ಸರ್ಕಾರಕ್ಕೆ ಬೆಳಗಾವಿ ಸಮಾವೇಶದ ಬಗ್ಗೆ ಭಯ ಶುರುವಾಗಿದೆ: ಸುರ್ಜೇವಾಲ
ಈ ಸಂಧರ್ಭದಲ್ಲಿ ಶಿವಲೀಲಾ ಕುಲಕರ್ಣಿ, ಹಾಗೂ ವೈಶಾಲಿ ಕುಲಕರ್ಣಿ ಭಾಗವಹಿಸಿದ್ದರು. ಅರವಿಂದ ಏಗನಗೌಡರ ಪ್ರಸ್ತಾವಿಕ ಮಾತನಾಡಿದರು. ಈ ಸಂಧರ್ಭದಲ್ಲಿ, ಈಶ್ವರ ಶಿವಳ್ಳಿ, ಚನಬಸಪ್ಪ ಮಟ್ಟಿ, ಪಾರಿಸ್ ಪತ್ರಾವಳಿ, ಮಂಜು ಮಸೂತಿ, ಮೈನುದ್ದೆನ ಚೌದರಿ, ಶಿವು ಮೆಣಸಿನಕಾಯಿ, ದೀಪಾ ನೀರಳಕಟ್ಟಿ, ಪರಮೇಶ್ವರ್ ಕಟ್ಟಿಮನಿ, ಮಹಾನಗರ ಪಾಲಿಕೆ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು, ಕಾರ್ಯಕರ್ತರು ಭಾಗವಹಿಸಿದ್ದರು.