ಅಮೆರಿಕ | ಟಿಕ್‌ಟಾಕ್‌ ಮೇಲಿನ ನಿಷೇಧ ಹಿಂಪಡೆಯುವುದಾಗಿ ಹೇಳಿದ ಡೊನಾಲ್ಡ್ ಟ್ರಂಪ್

Date:

Advertisements

ಕಿರು ವಿಡಿಯೊ ಆ್ಯಪ್ ಟಿಕ್‌ಟಾಕ್ ಮೇಲೆ ಹೇರಿದ್ದ ನಿಷೇಧವನ್ನು ಹಿಂಪಡೆಯುವುದಾಗಿ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದು, ಅಮೆರಿಕದಲ್ಲಿ ಟಿಕ್‌ಟಾಕ್ ಕಾರ್ಯ ಪುನರಾರಂಭಗೊಂಡಿದೆ.

ಇಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಟ್ರಂಪ್, ಅಧಿಕಾರ ವಹಿಸಿಕೊಂಡ ಬಳಿಕ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ಅಮೆರಿಕದಲ್ಲಿ ಸುಮಾರು 17 ಕೋಟಿ ಮಂದಿ ಟಿಕ್‌ಟಾಕ್‌ ಬಳಕೆ ಮಾಡುತ್ತಿದ್ದಾರೆ.

‘ಟಿಕ್‌ಟಾಕ್ ಮತ್ತೆ ಬಂದಿದೆ. ನಿಮಗೆ ಗೊತ್ತಿರಬಹುದು, ನಾನೂ ಟಿಕ್‌ಟಾಕ್‌ನಲ್ಲಿ ಕೆಲವು ವಿಡಿಯೊಗಳನ್ನು ಮಾಡಿದ್ದೇನೆ. ಟಿಕ್‌ಟಾಕ್‌ ನಮಗೆ ಮತಗಳನ್ನು ತಂದುಕೊಟ್ಟಿದೆ. ನನಗೆ ಟಿಕ್‌ಟಾಕ್ ಇಷ್ಟ’ ಎಂದು ಟ್ರಂಪ್ ಹೇಳಿದ್ದಾರೆ.

Advertisements

‘ನಾವು ಹಲವು ಮಂದಿಯ ಉದ್ಯೋಗ ಉಳಿಸಬೇಕಿದೆ. ನಮ್ಮ ಉದ್ಯಮವನ್ನು ಚೀನಾಗೆ ಬಿಟ್ಟುಕೊಡಲು ನಾವು ಸಿದ್ಧರಿಲ್ಲ. ನಮ್ಮ ಉದ್ಯಮವನ್ನು ಬೇರೆಯವರಿಗೆ ಬಿಟ್ಟು ಕೊಡಲೂ ನಾವು ಇಚ್ಛಿಸುವುದಿಲ್ಲ’ ಎಂದು ಟ್ರಂಪ್ ತಿಳಿಸಿದ್ದಾರೆ.

‘ಜಂಟಿ ಉದ್ಯಮವೇ ಟಿಕ್ ಟಾಕ್ ಸಮಸ್ಯೆಗೆ ಪರಿಹಾರ. ಶೇ 50ರಷ್ಟು ಅಮೆರಿಕದ ಪಾಲು ಇರಬೇಕು ಎನ್ನುವ ನನ್ನ ಮಾತಿಗೆ ಒಪ್ಪಿಕೊಂಡರು. ನಾನು ನಿಷೇಧ ಹಿಂಪಡೆವ ಭರವಸೆ ನೀಡಿದೆ’ ಎಂದು ಟ್ರಂಪ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

‘ನಾವು ಯಾವುದೇ ಬಂಡವಾಳ ಹೂಡುತ್ತಿಲ್ಲ. ನಾವು ಕೆಲವೊಂದು ಒಪ್ಪಿಗೆಗಳನ್ನು ನೋಡುತ್ತಿದ್ದೇವೆ. ಅದು ಇಲ್ಲದೇ ಇದ್ದರೆ (ಒಪ್ಪಿಗೆ) ಅವರು ಏನೂ ಮಾಡಲು ಆಗುವುದಿಲ್ಲ’ ಎಂದು ಹೇಳಿದ್ದಾರೆ.

ಟ್ರಂಪ್ ಅವರ ನಿರ್ಧಾರಕ್ಕೆ ಟಿಕ್ ಟಾಕ್ ಧನ್ಯವಾದ ಸಲ್ಲಿಸಿದೆ. ಆ್ಯಪ್ ಸೇವೆಗಳು ಪುನರಾರಂಭಿಸಲು ಸ್ಪಷ್ಟತೆ ಮತ್ತು ಭರವಸೆ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸಿದೆ.

ಚೀನಾ ಮೂಲದ ಬೈಟೆ ಡ್ಯಾನ್ಸ್ ಮಾಲೀಕತ್ವದ ಟಿಕ್ ಟಾಕ್ ಅನ್ನು ಜನವರಿ 19 ರಿಂದ ಅನ್ವಯವಾಗುವಂತೆ ನಿಷೇಧಿಸುವ ನಿರ್ಧಾರಕ್ಕೆ ಅಧ್ಯಕ್ಷ ಜೋ ಬೈಡನ್ ಅವರು ಕಳೆದ ವರ್ಷದ ಏಪ್ರಿಲ್‌ನಲ್ಲಿ ಸಹಿ ಹಾಕಿದ್ದರು. ರಾಷ್ಟ್ರೀಯ ಭದ್ರತೆಗೆ ಧಕ್ಕೆ ಆರೋಪದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X