ಬೀದರ್ | ನಿವೇಶನ ಇದ್ದರೂ ಕನ್ನಡ ಭವನ ನಿರ್ಮಾಣಕ್ಕೆ ಹಿಂದೇಟು: ಶಾಂತಲಿಂಗ ಮಠಪತಿ

Date:

Advertisements
  • 2006ರಲ್ಲಿ ಥೇರ ಮೈದಾನದ ರಸ್ತೆ ಬಳಿ 30/40 ಅಳತೆಯ ನಿವೇಶ ದೇಣಿಗೆ
  • ರಾಜಕೀಯ ನಾಯಕರ ಮತ್ತು ತಾಲೂಕು ಆಡಳಿತದ ಇಚ್ಛಾಶಕ್ತಿಯ ಆರೋಪ

ಬಸವಕಲ್ಯಾಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಡಿಯಲ್ಲಿ ಹಮ್ಮಿಕೊಳ್ಳುವ ಕಾರ್ಯಚಟುವಟಿಕೆಗಳಿಗೆ ಕನ್ನಡ ಭವನ ಇಲ್ಲ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ಶಾಂತಲಿಂಗ ಮಠಪತಿ ಬೇಸರ ವ್ಯಕ್ತಪಡಿಸಿದರು.

ಬಸವಕಲ್ಯಾಣ ನಗರದ ಪೂಜ್ಯ ದೊಡ್ಡಪ್ಪ ಅಪ್ಪ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ 140ನೇ ಜಯಂತಿ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಘಟಕ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ತಾಲೂಕು ಕಸಾಪ ಗೌರವ ಅಧ್ಯಕ್ಷ ಮಲ್ಲಿಕಾರ್ಜುನ ಕುರಕೋಟೆ ಅವರು ಬಸವಕಲ್ಯಾಣದಲ್ಲಿ 2006 ರಲ್ಲಿ ಅಲ್ಲಮಪ್ರಭು ವೃತ್ತದ ಹತ್ತಿರ ಥೇರ ಮೈದಾನದ ರಸ್ತೆಯಲ್ಲಿ 30/40 ಅಳತೆಯ ನಿವೇಶನವನ್ನು ಪರಿಷತ್ತಿನ ಭವನಕ್ಕಾಗಿ ದೇಣಿಗೆ ನೀಡಿದರು. ಆದರೆ, ರಾಜಕೀಯ ನಾಯಕರ ಮತ್ತು ತಾಲೂಕು ಆಡಳಿತದ ಇಚ್ಛಾಶಕ್ತಿಯ ಕೊರತೆಯಿಂದ ಭವನದ ಕನಸು ಕನಸಾಗಿಯೇ ಉಳಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.

Advertisements

ಕಾಲೇಜು ಉಪನ್ಯಾಸಕ ಬಸವರಾಜ ಸೇರಿ ಮಾತನಾಡಿ, ನಾಡು ಕಂಡ ಅಪರೂಪದ ರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ಅವರ ಆಡಳಿತಾವಧಿಯಲ್ಲಿ ಸರ್ವತೋಮುಖ ಅಭಿವೃದ್ಧಿಯ ಜೊತೆಗೆ ನಾಡು, ನುಡಿ, ನೆಲ, ಜಲ, ಸಾಹಿತ್ಯ, ಸಂಸ್ಕೃತಿ ಹೀಗೆ ಹಲವು ಸಾಮಾಜಿಕ, ಶೈಕ್ಷಣಿಕ, ವೈಜ್ಞಾನಿಕವಾಗಿ ಸಾಧನೆ ಮಾಡಿ ಕನ್ನಡ ನಾಡಿನ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಿದ್ದ ಒಬ್ಬ ಮಾದರಿ ರಾಜರಾಗಿದ್ದರು ಎಂದು ನುಡಿದರು.

ಈ ಸುದ್ದಿ ಓದಿದ್ದೀರಾ? ಮೊದಲ ಜಿಲ್ಲಾ ಪ್ರವಾಸ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಶ್ರೀ ರಾಜಿವ ಗಾಂಧಿ ಪದವಿ ಮಹಾ ವಿದ್ಯಾಲಯದ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಜಾಬಾ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ರಾಚಯ್ಯಾ ಮಠಪತಿ, ಕಸಾಪ ಗೌರವ ಕಾರ್ಯದರ್ಶಿ ರಮೇಶ ಉಮಾಪುರೆ, ಕಸಾಪ ಗೌರವಕೋಶಾಧ್ಯಕ್ಷ ಪ್ರೋ. ರುದ್ರೇಶ್ವರ ಗೋರಟಾ, ನಾಗಮ್ಮಾ ಭೂರೆ, ಕಸಾಪ ಪದಾದಿಕಾರಿಗಳಾದ ಇಂದುಮತಿ ಸ್ವಾಮಿ, ಭಾರತಿ ನಾಗೂರೆ, ಕಲಾವತಿ ಸ್ವಾಮಿ, ಪತ್ರಕರ್ತರಾದ ನಾಗಪ್ಪ ನಿಣ್ಣೆ, ಉಪನ್ಯಾಸಕಿ ಸಂಗೀತಾ ಮಠಪತಿ, ಕವಿತಾ ಮಠಪತಿ, ಉಪನ್ಯಾಸಕ ನಿಲೇಶ ಟೊಂಪೆ, ಡಾ. ರೂಪೇಶ, ಬಸವರಾಜ ಜಿ. ಕೈಲಾಸ ಬಿರಾದರ, ವಿಜಯಕುಮಾರ, ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಸಂಜುಕುಮಾರ ನಡುಕರ ಸ್ವಾಗತಿಸಿದರು, ಪ್ರೀತಿ ಬಿರಾದರ ನಿರೂಪಿಸಿದರು, ಸ್ನೇಹಾ ವಂದಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X