ರಾಯಚೂರು | ಕಾರ್ಮಿಕರ ಬಗ್ಗೆ ಮಾಹಿತಿಯಿಲ್ಲದೆ ಸಭೆಗೆ ಬಿಸ್ಕೆಟ್‌ ತಿನ್ನಲು ಬರುತ್ತೀರಾ: ಸಂತೋಷ್ ಲಾಡ್ ತರಾಟೆ

Date:

Advertisements

ಗುತ್ತಿಗೆ ಕಾರ್ಮಿಕ ಇಲಾಖೆಯಲ್ಲಿ ಎಷ್ಟು ಕಾರ್ಮಿಕರಿದ್ದಾರೆಂದು ಸರಿಯಾದ ಮಾಹಿತಿ ಇಲ್ಲದಿದ್ದರೆ ಸಭೆಗೆ ಬಿಸ್ಕೆಟ್‌ ತಿನ್ನಲು ಬಂದಿದ್ದೀರಾ. ಕಚೇರಿಗೆ ಬಂದರೆ ಹೋದರೆ ಅಷ್ಟೆ ಕೆಲಸವೇ? ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳನ್ನು ಸಚಿವ ಸಂತೋಷ್ ಲಾಡ್ ತರಾಟೆಗೆ ತೆಗೆದುಕೊಂಡರು.

ರಾಯಚೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಕಲಬುರಗಿ ಕಂದಾಯ ವಿಭಾಗದ ಎಲ್ಲ ಜಿಲ್ಲೆಗಳ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ರಾಯಚೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರೂ ಕಾಯಂಗೊಳಿಸಿಲ್ಲ. ಎಲ್ಲ ಕಾರ್ಖಾನೆಗಳಲ್ಲಿ ಎಷ್ಟು ಕಾರ್ಮಿಕರಿದ್ದಾರೆ, ಫ್ಯಾಕ್ಟರಿಗಳನ್ನು ಕ್ಯಾಟಗರಿ ವೈಸ್ ಮಾಡಿದೀರಾ” ಎಂದು ಪ್ರಶ್ನೆ ಮಾಡಿದ್ದಾರೆ.

Advertisements

ಸಚಿವರ ಪ್ರಶ್ನೆಗೆ ಉತ್ತರಿಸಲು ತಡವರಿಸಿದ ಅಧಿಕಾರಿಗಳ ವಿರುದ್ಧ ಗರಂ‌ ಆದ‌ ಸಚಿವರು, “ಕಾರ್ಮಿಕರ ಕಾಯ್ದೆಗಳ ಬಗ್ಗೆ, ಕಾರ್ಮಿಕರ ಕಾಯ್ದೆಗಳನ್ನು ಉಲ್ಲಂಘಿಸಿದ ಕಾರ್ಖಾನೆಗಳ ಬಗ್ಗೆ ಸರಿಯಾದ ಮಾಹಿತಿ ಇರದಿದ್ದರೆ ಸಭೆಗೆ ಚಿಪ್ಸ್ ತಿನ್ನಲು ಬರುತ್ತೀರಾ?” ಎಂದು ಕಿಡಿಕಾರಿದರು.

ತಾಲೂಕುವಾರು ಕಾರ್ಮಿಕರ‌ ನೋಂದಣಿ ಬಗ್ಗೆ ಮಾಹಿತಿ‌ ಕೇಳಿದ ಸಚಿವ ಸಂತೋಷ್ ಲಾಡ್, “ಬಹುತೇಕ ಎಲ್ಲ ಅಧಿಕಾರಿಗಳು ನೀಡುವ ಮಾಹಿತಿಯಿಂದ ಅತೃಪ್ತರಾಗಿದ್ದು, ಒಂದು ತಾಲೂಕಿನಲ್ಲಿನ‌ ಕಾರ್ಮಿಕರ ನೋಂದಣೆ ಸರಿಯಾಗಿ‌ ಸಂಗ್ರಹಿಸದಿದ್ದರೆ ಏನು ಕೆಲಸ ಮಾಡುತ್ತೀರಿ, ನಿಮ್ಮ ಬೇಜವಾಬ್ದಾರಿಯಿಂದ ಸರ್ಕಾರಕ್ಕೆ ಕೆಟ್ಟಹೆಸರು ಬರುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಅನೇಕ ವರ್ಷಗಳಿಂದ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕೆಂಬ ನಿಯಮವಿದೆ. ಈ‌ ಬಗ್ಗೆ ಪರಿಶೀಲಿಸಬೇಕು. ಕಾರ್ಖಾನೆಗಳಿಗೆ ಹಾಗೂ ಕೆಲಸಕ್ಕೆ ನೇಮಕ ಮಾಡಿಕೊಳ್ಳುವ ಗುತ್ತಿಗೆ ಸಂಸ್ಥೆಗಳ ಬಗ್ಗೆ ಮಾಹಿತಿ ಸಂಗ್ರಹ ಮಾಡಿಕೊಳ್ಳಬೇಕು. ಕಾರ್ಖಾನೆಗಳನ್ನು‌ ಎಬಿಸಿಡಿ ಕ್ಯಾಟಗರಿ ಮಾಡಬೇಕು.‌ ಕಾರ್ಖಾನೆಗಳಲ್ಲಿ ಗುತ್ತಿಗೆ ಕಾರ್ಮಿಕರ ಸಂಖ್ಯೆ, ಮಹಿಳೆಯರು, ಪುರುಷರ ಸಂಖ್ಯೆ, ಎಷ್ಟು ವರ್ಷ ಅನುಭವವಿದೆ ಎಂಬುವುದರ ಬಗ್ಗೆ ಮಾಹಿತಿ ಪಡೆಯಬೇಕು.‌ಕಾರ್ಮಿಕ ಕಾಯ್ದೆಗಳನ್ನು ಉಲ್ಲಂಘಿಸಿದ ಕಾರ್ಖಾನೆಗಳ ಮಾಲೀಕರ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕು” ಎಂದು ಸೂಚನೆ ನೀಡಿದರು.

ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಾತನಾಡಿ, “ರಾಯಚೂರು ತಾಲೂಕು ವ್ಯಾಪ್ತಿಯ ಯರಮರಸ್‌ನಲ್ಲಿರುವ‌ ವೈಟಿಪಿಎಸ್ ಶಾಖೋತ್ಪನ್ನ ಕೇಂದ್ರದಲ್ಲಿ ಪವರ್ ಮೆಕ್ ಕಂಪನಿ ನಿರ್ವಹಣೆ ಮಾಡುತ್ತಿದ್ದು, 800 ಮಂದಿ ಕಾರ್ಮಿಕರಿದ್ದಾರೆ. 1500 ಕಾರ್ಮಿಕ ಕಾರ್ಡ್ ಹಂಚಿಕೆ ಮಾಡಿದ್ದಾರೆ. ಬೋಗಸ್ ಕಾರ್ಡ್ ಹಂಚಿಕೆಯಾದ ಬಗ್ಗೆ ಕಾರ್ಮಿಕ ಸಂಘಟನೆಗಳಿಂದ ದೂರು ನೀಡಿದರೂ ಪರಿಶೀಲನೆ ಮಾಡಿಲ್ಲ” ಎಂದು ಸಚಿವರ ಮುಂದೆ ದೂರಿದರು.

ಸಚಿವ ಲಾಡ್ ಪ್ರತಿಕ್ರಿಯಿಸಿ, “ಯಾವುದೇ ಕಾರ್ಖಾನೆಗಳಲ್ಲಿ ‌ಕಾರ್ಮಿಕರು, ಮಾಲೀಕರ ಮಧ್ಯೆ ವಿವಾದ ಅಥವಾ ಕಾರ್ಮಿಕರ ಸಮಸ್ಯೆಗಳಿದ್ದರೆ ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು. ಸ್ಥಳೀಯ ಶಾಸಕರು ಯಾವುದಾದರೂ ದೂರು ನೀಡಿದ್ದಲ್ಲಿ ಕೂಡಲೇ ಸ್ಪಂದಿಸಬೇಕು ಹಾಗೂ ಅವರ ವ್ಯಾಪ್ತಿಯ ಕಾರ್ಖಾನೆಗಳ ಸಮಸ್ಯೆ ಬಗೆಹರಿಸುವಾಗ ಶಾಸಕರಿಗೆ ಮಾಹಿತಿ ನೀಡಿ‌ ಸಹಕಾರ ಪಡೆಯಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ತಡೆಯಾಜ್ಞೆ‌ ಜಾಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಮುಂದಾದ ಅಧಿಕಾರಿಗಳು; ರೈತರ ಆಕ್ರೋಶ

ಕಾರ್ಖಾನೆಗಳಿಗೆ ವಿಸಿಟ್ ಮಾಡಿ: “ಕಾರ್ಮಿಕ ಇಲಾಖೆ ಅಧಿಕಾರಿಗಳು ಕಾರ್ಖಾನೆಗಳಿಗೆ ಅಗಾಗ ಭೇಟಿ ನೀಡಿ ಬಾಲಕಾರ್ಮಿಕರಿದ್ದರೆ ಕಾರ್ಖಾನೆ ಮಾಲೀಕರ ವಿರುದ್ದ ದೂರು ದಾಖಲಿಸಬೇಕು. ಕೇವಲ ಕಚೇರಿಯಲ್ಲಿ ಕಾಲ ಕಳೆಯದೇ ಫೀಲ್ಡ್ ವಿಸಿಟ್ ಮಾಡಬೇಕು. ಕಾರ್ಮಿಕರ ಇಲಾಖೆಯ ದೂರುಗಳಿಗೆ ಸಂಬಂಧಿಸಿದಂತೆ‌‌ ಟೋಲ್ ಫ್ರೀ‌ ನಂಬರ್ ತೆರೆಯಬೇಕು.‌ ಜಿಲ್ಲಾಧಿಕಾರಿ, ಎಸ್‌ಪಿ ಹಾಗೂ ಸಾರ್ವಜನಿಕರಿಗೆ ತಿಳಿಯುವಂತೆ ಅಗತ್ಯ ಪ್ರಚಾರ ಮಾಡಬೇಕು” ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಮಾನ್ವಿ ಶಾಸಕ ಹಂಪಯ್ಯ ನಾಯಕ ಸಾಹುಕಾರ್, ದೇವದುರ್ಗ ಶಾಸಕಿ ಕರೆಮ್ಮ ನಾಯಕ, ಜಿಲ್ಲಾಧಿಕಾರಿ ನಿತಿಶ್ ಕೆ, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್‌ತುಕಾರಾಂ‌ ಪಾಂಡ್ವೆ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X