‘ಕಾಂತಾರ’ ತಂಡ ಷರತ್ತು ಉಲ್ಲಂಘಿಸಿದ್ದರೆ ಚಿತ್ರೀಕರಣ ನಿರ್ಬಂಧಿಸಿ, ಕ್ರಮ ಜರುಗಿಸುತ್ತೇವೆ: ಈಶ್ವರ ಖಂಡ್ರೆ

Date:

Advertisements

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರಾ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ ಚಿತ್ರೀಕರಣ ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, “ಗವಿಬೆಟ್ಟ ಮತ್ತು ಸುತ್ತಮುತ್ತಲ ಪರಿಭಾವಿತ ಅರಣ್ಯದ ಅಂಚಿನ ಗೋಮಾಳದಲ್ಲಿ 23 ದಿನ ಕಾಂತಾರಾ ಚಾಪ್ಟರ್ 1 ಚಿತ್ರೀಕರಣ ನಡೆಸಲು ಹೊಂಬಾಳೆ ಫಿಲಂಸ್ ಚಿತ್ರತಂಡ ಅನುಮತಿ ಕೋರಿತ್ತು. ಇದಕ್ಕೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ” ಎಂದರು.

“ಆದರೆ. ಕಾಂತಾರಾ ತಂಡ ಚಿತ್ರೀಕರಣದ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿರುತ್ತದೆ. ವಿಷಯ ತಿಳಿಯುತ್ತಿದ್ದಂತೆ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇಂದೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ತಿಳಿಸಿದ್ದೇನೆ. ಚಿತ್ರತಂಡದಿಂದ ಒಂದೊಮ್ಮೆ ಷರತ್ತುಗಳ ಉಲ್ಲಂಘನೆಯಾಗಿ, ವನ್ಯಜೀವಿಗಳಿಗೆ ಅಥವಾ ಸಸ್ಯ ಸಂಕುಲಕ್ಕೆ ಯಾವುದೇ ಹಾನಿ ಆಗದ್ದಲ್ಲಿ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಲು ಮತ್ತು ಕ್ರಮ ಜರುಗಿಸಲು ಸೂಚಿಸಿದ್ದೇನೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

“ಇನ್ನು ಟಾಕ್ಸಿಕ್ ಚಿತ್ರತಂಡಕ್ಕೆ, ಎಚ್.ಎಂ.ಟಿ.ಯಿಂದ ಭೂಮಿ ಖರೀದಿಸಿರುವ ಕೆನರಾ ಬ್ಯಾಂಕ್ ಗುತ್ತಿಗೆ ನೀಡಿದ್ದು, ಮೂರೂ ಸಂಸ್ಥೆ ಮೇಲೆ ಎಫ್.ಐ.ಆರ್. ಆಗಿದೆ. ಪ್ರಕರಣ ನ್ಯಾಯಾಲಯದಲ್ಲಿದೆ. ಘನ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಇದರ ತೆರವಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X