ಪ್ರತಿ ಕ್ವಿಂಟಾಲ್‌ ತೊಗರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 450 ರೂ. ಘೋಷಣೆ

Date:

Advertisements

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಾಲ್‌ಗೆ ಹೆಚ್ಚುವರಿ 450 ರೂ.ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕೆ 140 ಕೋಟಿ ರೂ. ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು.

ವಿಜಯಪುರ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸಚಿವರು, ಒಟ್ಟು ಪ್ರತಿ ಕ್ರಿಂಟಾಲ್‌ಗೆ ಎಂಟು ಸಾವಿರ ರೂ. ಬೆಂಬಲ ಬೆಲೆ ನೀಡಲಾಗುವುದು ಎಂದು ತಿಳಿಸಿದರು.

“ಕೇಂದ್ರ ಸರ್ಕಾರದ ನಫೆಡ್‌ ಖರೀದಿ ಏಜನ್ಸಿಯಾಗಿದ್ದು, ದಾಖಲೆಗಳನ್ನು ಸಕಾಲಕ್ಕೆ ಒದಗಿಸದ ಕಾರಣ ಖರೀದಿ ಪ್ರಕ್ರಿಯೆ ವಿಳಂಬವಾಗಿದೆ. ರಾಜ್ಯಾದ್ಯಂತ 400ಕ್ಕೂ ಅಧಿಕ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ತೊಗರಿ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ” ಎಂದು ಹೇಳಿದರು.

Advertisements

“ಇದೇ ಮೊದಲ ಬಾರಿಗೆ 8,000 ರೂ. ಧಾರಣಿಯಲ್ಲಿ ತೊಗರಿ ಖರೀದಿ ಮಾಡಲಾಗುತ್ತಿದೆ. ಇದುವರೆಗೆ 5,800 ರೂ. ಧಾರಣಿಯಲ್ಲಿ ಖರೀದಿ ಮಾಡಲಾಗುತ್ತಿತ್ತು. ಬೀದರ್‌ ಜಿಲ್ಲೆಯಿಂದ ಚಿತ್ರದುರ್ಗ ಜಿಲ್ಲೆಯವರೆಗೆ ತೊಗರಿ ಬೆಳೆಯಲಾಗುತ್ತಿದ್ದು, ರೈತರು ಬೆಂಬಲ ಬೆಲೆ ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿ ಕ್ವಿಂಟಾಲ್‌ಗೆ 450 ರೂ. ಹೆಚ್ಚುವರಿ ಕೊಡುವ ನಿರ್ಧಾರ ಕೈಗೊಂಡಿದೆ” ಎಂದು ವಿವರಿಸಿದರು.

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲೇ ಈ ದಿನ.ಕಾಮ್‌ ತೊಗರಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ವಿವರವಾದ ಎರಡು ಸ್ಟೋರಿಗಳನ್ನು ಪ್ರಕಟಿಸಿತ್ತು. ಜೊತೆಗೆ ಕೇಂದ್ರ ಸರ್ಕಾರದ ಜೊತೆ ಗುದ್ದಾಟ ಬಿಟ್ಟು ಪ್ರೋತ್ಸಾಹಧನ ಘೋಷಿಸುವುದು ಒಂದೇ ದಾರಿ ಎಂದು ಆಗ್ರಹಿಸಿತ್ತು. ಆ ವರದಿಯ ಲಿಂಕ್‌ ಇಲ್ಲಿದೆ. 
ತೊಗರಿ ಬೆಳೆ ನಾಶ | ಕೇಂದ್ರ- ರಾಜ್ಯ ಕಾದಾಟದಲ್ಲಿ ರೈತ ಹೈರಾಣು, ಪ್ರೋತ್ಸಾಹಧನ ಘೋಷಣೆಯೇ ದಾರಿ

ಆಂಧ್ರದ ಜೋಳಕ್ಕೆ ತಡೆ

“ಆಂಧ್ರಪ್ರದೇಶದ ಹೈಬ್ರಿಡ್‌ ಜೋಳವನ್ನು ರಾಜ್ಯದ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿರುವುದು ಗಮನಕ್ಕೆ ಬಂದಿದ್ದು, ಆಂಧ್ರದ ಜೋಳಕ್ಕೆ ಕಡಿವಾಣ ಹಾಕಲಾಗುವುದು” ಎಂದು ಸಚಿವರು ಹೇಳಿದರು.

“ಹೈಬ್ರಿಡ್‌ ಜೋಳಕ್ಕೆ 3,370 ರೂ ಹಾಗೂ ಮಾಲದಂಡಿ ಜೋಳಕ್ಕೆ 3,400 ರೂ. ಬೆಂಬಲ ಬೆಲೆ ಘೋಷಣೆ ಮಾಡಲಾಗಿದ್ದು, ಒಟ್ಟು ಐದು ಲಕ್ಷ ಕ್ವಿಂಟಾಲ್‌ ಖರೀದಿ ಮಾಡಲಾಗುವುದು. ಇದುವರೆಗೆ ಕೆಲವೇ ಕೆಲವು ಜಿಲ್ಲೆಗಳ ರೈತರು ಮಾತ್ರ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುತ್ತಿದ್ದರು. ಈ ಬಾರಿ ಜೋಳ ಬೆಳೆಯುವ ಎಲ್ಲ ಜಿಲ್ಲೆಗಳಿಗೂ ಖರೀದಿ ಪ್ರಮಾಣವನ್ನು ಹಂಚಿಕೆ ಮಾಡಲಾಗುವುದು” ಎಂದು ವಿವರಿಸಿದರು.

“ಕಳಪೆ ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟದ ದೂರುಗಳು ಹೆಚ್ಚಾಗಿದ್ದು, ಅಂತಹವರಿಗೆ ಶಿಕ್ಷೆ ಕೊಡಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ದೂರನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕೃಷಿ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X