ಒಡಿಶಾ ರೈಲು ದುರಂತ | ಅಪಘಾತ ಮಾರ್ಗದಲ್ಲಿ ಸಂಚಾರ ಆರಂಭಿಸಿದ ಪ್ಯಾಸೆಂಜರ್, ಗೂಡ್ಸ್ ರೈಲು

Date:

Advertisements
  • ಒಡಿಶಾ ರೈಲು ದುರಂತ ಬಳಿಕ ಸರಕು ಸಾಗಣೆ ರೈಲು ರೂರ್ಕೆಲಾ ಸ್ಟೀಲ್ ಪ್ಲಾಟ್‌ನತ್ತ ಸಂಚಾರ
  • ಸೋಮವಾರ ಮತ್ತೆ ಏಳು ರೈಲು ಸಂಚಾರ ಆರಂಭ ಎಂದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಒಡಿಶಾ ರೈಲು ದುರಂತ ಹಿನ್ನೆಲೆ ಹಾನಿಗೀಡಾಗಿದ್ದ ರೈಲು ಹಳಿಗಳು ದುರಸ್ತಿಗೊಂಡಿವೆ. ಈ ಹಿನ್ನೆಲೆ ಸೋಮವಾರ (ಜೂನ್ 5) ಬೆಳಗ್ಗೆ ಪ್ಯಾಸೆಂಜರ್ ರೈಲು ಸಂಚಾರ ಆರಂಭಿಸಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.

ಈ ಕುರಿತು ಸುದ್ದಿಸಂಸ್ಥೆಯೊಂದು ವಿಡಿಯೋ ಸಹಿತ ಟ್ವೀಟ್ ಮಾಡಿದೆ.

ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರಂತರ ಶ್ರಮದಿಂದ ಹಾನಿಗೊಳಗಾಗಿದ್ದ ಮಾರ್ಗವನ್ನು ಬೇಗ ದುರಸ್ತಿ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಟ್ವಿಟ್ ಮೂಲಕ ತಿಳಿಸಿದ್ದಾರೆ.

Advertisements

“ಇಂದು ರಾತ್ರಿಯ ವೇಳೆಗೆ ಇನ್ನು ಏಳು ರೈಲುಗಳು ಸಂಚಾರ ಆರಂಭಿಸಲಿವೆ. ರೈಲುಗಳ ಸಂಚಾರವನ್ನು ಸಾಮಾನ್ಯ ಸ್ಥಿತಿಗೆ ತರಲಾಗುವುದು” ಎಂದು ಅಶ್ವಿನಿ ವೈಷ್ಣವ್ ಹೇಳಿದರು.

ಅಲ್ಲದೆ ಭಾನುವಾರ (ಜೂನ್ 4) ರಾತ್ರಿ ಮೊದಲ ಸರಕು ಸಾಗಣೆ ರೈಲು ಒಡಿಶಾ ರೈಲು ದುರಂತ ಮಾರ್ಗದಲ್ಲಿ ಸಂಚಾರ ಆರಂಭಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬೆಂಗಳೂರು -ಹೌರಾ ಎಕ್ಸ್‌ಪ್ರೆಸ್‌ ರೈಲು ಅಪಘಾತಕ್ಕೀಡಾದ ಮಾರ್ಗದಲ್ಲಿಯೇ ಭಾನುವಾರ ರಾತ್ರಿ 10.40ಗಂಟೆಗೆ ವಿಶಾಖಪಟ್ಟಣದ ಬಂದರಿನಿಂದ ಕಲ್ಲಿದ್ದಲು ತುಂಬಿದ್ದ ಸರಕು ಸಾಗಣೆ ರೈಲು ರೂರ್ಕೆಲಾ ಸ್ಟೀಲ್ ಪ್ಲಾಟ್‌ನತ್ತ ಸಂಚರಿಸಿತು.

ಒಡಿಶಾದಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿದ 51 ಗಂಟೆಗಳ ಬಳಿಕ ಈ ಮಾರ್ಗದಲ್ಲಿ ಸಂಚರಿಸಿದ ಮೊದಲ ರೈಲು ಇದಾಗಿತ್ತು. ನಿಧಾನವಾಗಿ ಸಂಚರಿಸಿದ ರೈಲನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಪತ್ರಕರ್ತರು ಹಾಗೂ ರೈಲ್ವೆ ಅಧಿಕಾರಿಗಳು ವೀಕ್ಷಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯ ದ್ವೇಷ ತುಂಬಿದ ಸಿದ್ಧಾಂತವನ್ನು ಭಾರತೀಯರು ಸೋಲಿಸುತ್ತಾರೆ: ರಾಹುಲ್ ಗಾಂಧಿ

“ಒಡಿಶಾದ ರೈಲು ದುರಂತ ಬಳಿಕ ರೈಲ್ವೆ ಮಾರ್ಗದ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಈಗ ಮೊದಲ ಸಂಚಾರ ಆರಂಭಗೊಂಡಿದೆ” ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು.

ತ್ರಿವಳಿ ರೈಲು ಅಪಘಾತದಲ್ಲಿ ಒಟ್ಟು 275 ಮಂದಿ ಮೃತಪಟ್ಟಿದ್ದು 200 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಅಧಿಕಾರಿಗಳು ಡಿಎನ್ಎ ಪರೀಕ್ಷೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X