ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ, ಇದೊಂದು ಅರ್ಥಪೂರ್ಣ ಕಾರ್ಯಕ್ರಮ: ಸಿದ್ದರಾಮಯ್ಯ

Date:

Advertisements

ಜನರಲ್ಲಿ ಮಹಾತ್ಮಾ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “1924 ರ ಇಸವಿಯಲ್ಲಿ ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ಕಾಂಗ್ರೆಸ್ ಅಧಿವೇಶನ ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು. ಗಾಂಧೀಜಿಯವರು ಡಿಸೆಂಬರ್ 26, 1924 ರಲ್ಲಿ ಕಾಂಗ್ರೆಸ್ ಬೆಳಗಾವಿಯಲ್ಲಿಯೇ ಕಾಂಗ್ರೆಸ್ ಅಧ್ಯಕ್ಷರಾದರು. ಅಧಿವೇಶನ ನಡೆದು ಒಂದು ಶತಮಾನವಾಗಿರುವ ಹಿನ್ನೆಲೆಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದರು.

“ಈ ಸಂಬಂಧ ಎಲ್ಲಾ ಸಿದ್ಧತೆಗಳು ನಡೆದಿದ್ದು, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರೊಂದಿಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕಳೆದ ನಾಲ್ಕೈದು ದಿನಗಳಿಂದ ಇಲ್ಲೇ ಇದ್ದು ಅಚ್ಚುಕಟ್ಟಾಗಿ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನಾಳೆಯೂ ಸಮಾವೇಶ ಯಶಸ್ವಿಯಾಗಿ ನಡೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಇಲ್ಲಿ ಸೇರಲಿದ್ದಾರೆ. ಬೆಳಗಾವಿಯಲ್ಲಿ ಇದು ಐತಿಹಾಸಿಕ ಸಮಾವೇಶವಾಗಲಿದೆ” ಎಂದು ಹೇಳಿದರು.

Advertisements

ಶತಮಾನೋತ್ಸವದ ಸ್ಮರಣಾರ್ಥ ಸಮಾವೇಶ

“ಬೆಳಗಾವಿಗೆ ಕೊಡುಗೆ ಘೋಷಣೆ ಮಾಡುವ ಸಮಾವೇಶ ಅಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಇದು ನೂರು ವರ್ಷಗಳ ಹಿಂದೆ ನಡೆದಿದ್ದ ಅಧಿವೇಶನದ ಜ್ಞಾಪಕಾರ್ಥವಾಗಿ ನಡೆಯುತ್ತಿರುವ ಕಾರ್ಯಕ್ರಮ. ಬೆಳಗಾವಿಯಲ್ಲಿ ನಾಳೆ ಒಂದು ಗಂಟೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯಲಿದ್ದು, ಈ ಸಮಾವೇಶ ಕಳೆದ ಡಿಸೆಂಬರ್ 27 ರಂದು ನಡೆಯಬೇಕಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು” ಎಂದು ವಿವರಿಸಿದರು.

ಪ್ರಲ್ಹಾದ್ ಜೋಶಿಗೆ ಇತಿಹಾಸದ ಬಗ್ಗೆ ತಿಳಿದಿಲ್ಲ

ಕಾಂಗ್ರೆಸ್ ನವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದು, ಅಧಿವೇಶನ ನಡೆಸಲು ಹಕ್ಕಿಲ್ಲ ಎಂಬ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಪ್ರಲ್ಹಾದ್‌ ಜೋಶಿ ಅವರಿಗೆ ಇತಿಹಾಸ ಗೊತ್ತಿಲ್ಲ. ಗೋಲ್ವಾಲ್ಕರ್, ಹಾಗೂ ಸಾವರ್ಕರ್ ಸಂವಿಧಾನ ಜಾರಿಯಾದಾಗ ಏನು ಮಾತನಾಡಿದ್ದರು ಎಂದು ತಿಳಿದಿದೆಯೇ ಅವರಿಗೆ” ಎಂದು ಪ್ರಶ್ನಿಸಿದರು.

ಪಕ್ಷದ ವತಿಯಿಂದ ಸಮಾವೇಶ

“ಸಮಾವೇಶವನ್ನು ಪಕ್ಷದ ವತಿಯಿಂದ ಕೈಗೊಂಡಿದ್ದು, ಪ್ರತಿಮೆ ಅನಾವರಣವನ್ನು ಸರ್ಕಾರ ಮಾಡುತ್ತಿದೆ” ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಯತ್ನಾಳ್ ಇತಿಹಾಸ ಓದಿಕೊಂಡಿಲ್ಲ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗೋಡ್ಸೆ ಹತ್ಯೆಯಲ್ಲಿ ನೆಹರೂ ಅವರ ಪಾತ್ರವಿದೆ ಎಂದಿರುವ ಬಗ್ಗೆ ಮಾತನಾಡಿ, “ಅವರಿಗೆ ಇತಿಹಾಸ ತಿಳಿದಿಲ್ಲ ಹಾಗೂ ಅದನ್ನು ಓದಿಯೂ ಇಲ್ಲ ಎಂದರು. ಅದಕ್ಕಾಗಿಯೇ ಅಂಬೇಡ್ಕರ್ ಅವರು ಇತಿಹಾಸ ಗೊತ್ತಿಲ್ಲದವರು ಭವಿಷ್ಯವನ್ನು ಸೃಷ್ಟಿಸಲಾರರು ಎಂದು ಹೇಳಿದ್ದರು. ಮಹಾತ್ಮಾ ಗಾಂಧಿ ಅವರನ್ನು ಗೋಡ್ಸೆ ಕೊಂದಿದ್ದು, ಆತನ ಜೊತೆ ಸಾವರ್ಕರ್ ಕೂಡ ಶಾಮೀಲಾಗಿರುವ ಬಗ್ಗೆ ಪ್ರಕರಣವಿತ್ತು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X