ಬೆಳಗಾವಿ | ಪ್ರಾಥಮಿಕ,ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

Date:

Advertisements

ನಾಳೆ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣಸೌಧದಲ್ಲಿ ಕರ್ನಾಟಕ ಸರ್ಕಾರದಿಂದ ಜ.21ರ ಬೆಳಗ್ಗೆ 10.30ಕ್ಕೆ ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ’ ಸಮಾರಂಭ ಆಯೋಜಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷಾ ದೃಷ್ಟಿಯಿಂದ ನಾಳೆ ಬೆಳಗಾವಿ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿ.ಎನ್.ಎಸ್.ಎಸ್) 2023 ಕಲಂ 163 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಬೆಳಗಾವಿ ತಾಲೂಕು ಶೈಕ್ಷಣಿಕ ವಲಯ (ನಗರ & ಗ್ರಾಮೀಣ)ದ ಎಲ್ಲಾ ಸರಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರಾಥಬೆಳಗವಿಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಜ.21ರ ಮಂಗಳವಾರ ರಜೆ ಘೋಷಿಸಿ ಆದೇಶಿಸಲಾಗಿದೆ. ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜೊತೆಗೆ, ಈ ರಜಾ ಜಿಲ್ಲಾಧಕಾರಿಅವಧಿಯನ್ನು ಮುಂದಿನ ಶೈಕ್ಷಣಿಕ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಿಲ್ಲೆಯಲ್ಲಿ ಇಂದು ತಂಪು ವಾತಾವರಣ – ಮಧ್ಯಮ ಮಳೆಯ ಮುನ್ಸೂಚನೆ

ಇಂದು ಬೆಳಗಾವಿ ಜಿಲ್ಲೆಯಾದ್ಯಂತ ಮೋಡ ಆವರಿಸಿಕೊಂಡಿದ್ದು, ಹವಾಮಾನ ಇಲಾಖೆ ಮಧ್ಯಮ ಮಳೆಯ...

ಬೆಳಗಾವಿ : ಮನೆ ಚಾವಣಿ ಕುಸಿದು ಬಿದ್ದು ವ್ಯಕ್ತಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನಿಂಗಾಪೂರ ಪೇಟೆಯಲ್ಲಿ ಬುಧವಾರ ನಸುಕಿನಲ್ಲಿ, ಮಳೆಯಿಂದಾಗಿ...

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

Download Eedina App Android / iOS

X