ಹಾವೇರಿ | ಕರಿಯಪ್ಪ ಹಾಗೂ ವೀರಮ್ಮ ಅವರ ಹೋರಾಟದ ಚರಿತ್ರೆ ಎಲ್ಲರೂ ಅರಿಯಬೇಕು: ಡಾ. ಎಫ್.ಟಿ ಹಳ್ಳಿಕೇರಿ

Date:

Advertisements

“ದೇಶದ ಸ್ವಾತಂತ್ರ್ಯಕ್ಕಾಗಿ ವಿರೋಚಿತವಾಗಿ ಹೋರಾಡಿದವರಲ್ಲಿ ಕರಿಯಪ್ಪ ಯರೇಶೀಮಿ ಹಾಗೂ ವೀರಮ್ಮ ಯರೇಶೀಮಿ ಅತ್ಯಂತ ಪ್ರಮುಖರು. ಅವರ ಹೋರಾಟದ ಚರಿತ್ರೆ ಎಲ್ಲರೂ ಅರಿಯಬೇಕು” ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಡೀನ್ ಡಾ. ಎಫ್.ಟಿ ಹಳ್ಳಿಕೇರಿ ಅಭಿಪ್ರಾಯಪಟ್ಟರು.

ಹಾವೇರಿ ಪಟ್ಟಣದ ಡಾ. ಮಹದೇವ ಬಣಕಾರ ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾ ಭವನದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೂರು ಕರಿಯಪ್ಪ ಸ್ಮಾರಕ ಟ್ರಸ್ಟ್ ಆಯೋಜಿಸಿದ್ದ, “ಸ್ವಾತಂತ್ರ್ಯ ಸಿಂಹ ಕರಿಯಪ್ಪ ಯರೇಶೀಮಿ” ಹಾಗೂ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಪ್ರಕಟಿಸಿದ ‘ಸ್ವಾತಂತ್ರ್ಯ ಹೋರಾಟಗಾರ ಸಂಗೂರು ಕರಿಯಪ್ಪ’ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಮಹಾತ್ಮ ಗಾಂಧೀಜಿ ಅವರ ಅನುಯಾಯಿ ಆಗಿದ್ದುಕೊಂಡು ಕರಿಯಪ್ಪನವರು ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಸ್ವಾತಂತ್ರ್ಯ ಸಮರದಲ್ಲಿ ನಾಡಬಾಂಬ್ ತಯಾರಿಸುವಾಗ ಸ್ಪೋಟಗೊಂಡು ಬಲಗೈ ಮುಂಗೈ ಕಳೆದುಕೊಂಡರೂ ಆಂಗ್ಲರ ವಿರುದ್ಧ ಜೀವಮಾನವಿಡೀ ಹೋರಾಡಿದ ಕರಿಯಪ್ಪನವರು ನಮ್ಮ ನಾಡಿನ ಮಹಾನ್ ಚೇತನ” ಎಂದು ಬಣ್ಣಿಸಿದರು.

Advertisements

ಲೇಖಕ ಲಿಂಗದಹಳ್ಳಿ ಹಾಲಪ್ಪ ಮಾತನಾಡಿ, “ಕರಿಯಪ್ಪ ಯರೇಶೀಮಿ ಅವರು ಅತ್ಯಂತ ಬಡತನದಲ್ಲಿಯೇ ಬಾಲ್ಯವನ್ನು ಕಳೆದರು. ಸಹೋದರರ ಸಹಕಾರದೊಂದಿಗೆ ಹಾಗೂ ಗಾಂಧೀಜಿಯವರ ಮಾರ್ಗದರ್ಶನದಲ್ಲಿ ಸ್ವಾತಂತ್ರ್ಯ ಚಳುವಳಿಗೆ ಧುಮಕಿ, ಭಾರತ ದೇಶ ಎಂದಿಗೂ ಮರೆಯದ ಮಹಾನ್ ಸ್ವಾತಂತ್ರ್ಯ ಸೇನಾನಿಯಾದರು” ಎಂದರು.

“ಮಹಾತ್ಮ ಗಾಂಧೀಜಿಯವರ ಅಣತಿಯಂತೆ ಗಾಂಧೀಜಿ-ಕಸ್ತೂರಬಾ ಅವರ ಸಾಕು ಮಗಳಾದ ದಲಿತ ಸಮುದಾಯದ ವೀರಮ್ಮ ಅವರನ್ನು ಅಂತರ್ಜಾತಿ ವಿವಾಹವಾದರು. ಬಹುದೊಡ್ಡ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರೂ ಅಂತರ್ಜಾತಿ ವಿವಾಹವಾದ ಪರಿಣಾಮವಾಗಿ ಜಿಡ್ಡುಗಟ್ಟಿದ ಜಾತಿ ವ್ಯವಸ್ಥೆಯಲ್ಲಿ ಮೇಲ್ಜಾತಿಯವರಿಂದ ಸಾಕಷ್ಟು ನೋವು ಅವಮಾನಗಳನ್ನು ಅನುಭವಿಸಿದರು” ಎಂದು ಲಿಂಗದಹಳ್ಳಿ ಹಾಲಪ್ಪ ಹೇಳಿದರು.

ಮುಖ್ಯ ಅತಿಥಿ ಶಾಸಕ ಬಸವರಾಜ ಎನ್ ಶಿವಣ್ಣನವರ ಮಾತನಾಡಿ, “ಸಂಗೂರು ಕರಿಯಪ್ಪ ಅವರ ಹೆಸರನ್ನು ಚಿರಸ್ಥಾಯಿಗೊಳಿಸುವ ನಿಟ್ಟಿನಲ್ಲಿ ಸ್ಮಾರಕ ಟ್ರಸ್ಟ್ ಪುಸ್ತಕ ಪ್ರಕಟಣೆ ಮೂಲಕ ಮಾಡುತ್ತಿದೆ. ಹಾವೇರಿ ನಗರದಲ್ಲಿರುವ ಜಿಲ್ಲಾ ಕೆಂದ್ರ ಬಸ್ ನಿಲ್ದಾಣಕ್ಕೆ ಸಂಗೂರು ಕರಿಯಪ್ಪ ವೀರಮ್ಮ ದಂಪತಿಗಳ ಹೆಸರಿನಲ್ಲಿ ನಾಮಕರಣ ಮಾಡಲು ಸರಕಾರದ ಮಟ್ಟದಲ್ಲಿ ಈಗಾಗಲೇ ಪ್ರಯತ್ನಗಳು ನಡೆದಿದ್ದು ಶೀಘ್ರದಲ್ಲಿಯೇ ಈ ಪ್ರಕ್ರೀಯೆಯನ್ನು ಪೂರ್ಣಗೊಳಿಸಲಾಗುವುದು”ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಡಾ. ಎಫ್.ಟಿ ಹಳ್ಳಿಕೇರಿ, ಡಾ. ಲಿಂಗದಹಳ್ಳಿ ಹಾಲಪ್ಪ, ಯಶೋಧಮ್ಮ ಯರೇಶೀಮಿ (ಅಮೇರಿಕಾ), ಶ್ರೀಮತಿ ನಿಶಾ (ಅಮೇರಿಕಾ), ವತ್ಸಲ್ (ಅಮೇರಿಕಾ), ಹೇಮಲತಾ ಕೂರಗುಂದ, ಮೃತ್ಯಂಜಯ ಫ ಕುಲಕರ್ಣಿ, ಕುಮಾರ್ ಎನ್.ಜಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಟ್ರಸ್ಟ್ ಅಧ್ಯಕ್ಷ ಎಸ್ಎಫ್ಎನ್ ಗಾಜಿಗೌಡರ ವಹಿಸಿದ್ದರು. ಪ್ರಾಸ್ತಾವಿಕವಾಗಿ ಟ್ರಸ್ಟ್ ಸದಸ್ಯ ಬಸವರಾಜ ಪೂಜಾರ ಮಾತನಾಡಿದರು. ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಸಾಹಿತಿ ಸತೀಶ ಕುಲಕರ್ಣಿ, ಸಂಕಮ್ಮ ಸಂಕಣ್ಣನವರ, ಡಾ. ಮೋಹನ್ ಹಂಡೆ, ಅಶೋಕ ನಡಕಟ್ಟಿನ, ಅಬ್ದುಲ್ ಹುಬ್ಬಳ್ಳಿ ಮುಖ್ಯ ಅತಿಥಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಮಂಜುನಾಥ ಚ. ಗಾಜಿ ನಿರ್ವಹಿಸಿದರು. ಶಶಿಕಲಾ ಜಿ. ಕಣಿವೇರ ಸ್ವಾಗತಿಸಿದರು. ಶ್ರೀನಿವಾಸ ಯರೇಶೀಮಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X