ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ ಪ್ರಮಾಣ ವಚನ ಸ್ವೀಕಾರ

Date:

Advertisements

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಾಧ್ಯಕ್ಷರಾಗಿ ಜೆ ಡಿ ವ್ಯಾನ್ಸ್ ಪ್ರಮಾಣ ವಚನ ಸ್ವೀಕರಿಸಿದರು.

ಡೊನಾಲ್ಡ್ ಟ್ರಂಪ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಪ್ರಮಾಣ ವಚನ ಬೋಧಿಸಿದ್ದಾರೆ. ಭಾರತೀಯ ಕಾಲಮಾನ ರಾತ್ರಿ 10:30ಕ್ಕೆ ಸರಿಯಾಗಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷ ಪದವಿಗೆ ಏರಿದರು.

ನಾಲ್ಕು ವರ್ಷದ ಹಿಂದೆ ಅಧಿಕಾರ ಹಸ್ತಾಂತರ ಸಂದರ್ಭದಲ್ಲಿ ಟ್ರಂಪ್ ಬೆಂಬಲಿಗರು ಹಂಗಾಮಾ ಸೃಷ್ಟಿಸಿದ್ದ ಕ್ಯಾಪಿಟಲ್ ಭವನದಲ್ಲೇ ಟ್ರಂಪ್ ಪದಗ್ರಹಣ ಸಮಾರಂಭ ನಡೆಯಿತು. ಭಾರೀ ಚಳಿಯ ಕಾರಣ, 1985ರ ಬಳಿಕ ಇದೇ ಮೊದಲ ಬಾರಿಗೆ ಕ್ಯಾಪಿಟಲ್ ಭವನದ ಒಳಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Advertisements

ಟ್ರಂಪ್‌ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಜೋ ಬೈಡನ್‌, ಮಾಜಿ ಅಧ್ಯಕ್ಷರಾದ ಬರಾಕ್‌ ಒಬಾಮಾ, ಜಾರ್ಜ್‌ ಬುಶ್‌ ಸೇರಿದಂತೆ ಹಲವು ಪ್ರಮುಖ ರಾಜಕೀಯ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಶೇಷ ರಾಯಭಾರಿಯಾಗಿ ವಿದೇಶಾಂಗ ಸಚಿವ ಎಸ್ ಜೈಂಕರ್‌ ಅವರು ಡೊನಾಲ್ಡ್‌ ಟ್ರಂಪ್‌ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು. 

ಪ್ರಮಾಣವಚನ ಸ್ವೀಕರಿಸಿದ ಬಳಿಕ ಭಾಷಣ ಮಾಡಿದ ಡೊನಾಲ್ಡ್‌ ಟ್ರಂಪ್‌, ಅಮೆರಿಕದ ‘ಸುವರ್ಣಯುಗಕ್ಕೆ ಎಲ್ಲರಿಗೂ ಸ್ವಾಗತ. ‘ಅಮೆರಿಕ ಫಸ್ಟ್’‌ ನೀತಿ ತಮ್ಮ ಸರ್ಕಾರದ ಪ್ರಾಥಮಿಕ ಆದ್ಯತೆಯಾಗಿದ್ದು, ಈ ನೀತಿಗೆ ಪೂರಕವಾಗಿ ನಾವು ಆಡಳಿತ ನಡೆಸುತ್ತೇವೆ ಎಂದು ಭರವಸೆ ನೀಡಿದರು.

ಅಮೆರಿಕದ ಪ್ರಸ್ತುತ ವಲಸೆ ನೀತಿಯು ದೇಶದ ಭದ್ರತಾ ವ್ಯವಸ್ಥೆ ಮೇಲೆ ಭಾರೀ ಪರಿಣಾಮ ಬೀರಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಠಿಣ ವಲಸೆ ನೀತಿ ಜಾರಿಗೆ ಬರಲಿದ್ದು, ಅಮೆರಿಕದ ಅತಿಕ್ರಮಣವನ್ನು ನಾವು ಸಹಿಸುವುದಿಲ್ಲ ಎಂದು ಡೊನಾಲ್ಡ್‌ ಟ್ರಂಪ್‌ ಇದೇ ವೇಳೆ ಸ್ಪಷ್ಟವವಾಗಿ ನುಡಿದರು. ಇದೇ ವೇಳೆ ಅಕ್ರಮ ವಲಸೆ ತಡೆಯಲು ಅಮೆರಿಕದ ದಕ್ಷಿಣದ ಗಡಿಯಲ್ಲಿ ರಾಷ್ಟ್ರೀಯ ತುರ್ತುಪರಿಸ್ಥಿತಿ ಘೋಷಿಸುವುದಾಗಿ ಟ್ರಂಪ್‌ ಇದೇ ವೇಳೆ ಘೋಷಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X