ವಿಜಯನಗರ | ಸಾಂಸ್ಥಿಕ ಭಾಷಾಂತರಗಳು ಭಾರತೀಯ ಭಾಷೆಗಳಲ್ಲಿ ಸಾಮರಸ್ಯ ಮೂಡಿಸುತ್ತವೆ: ಸಾಹಿತಿ ಕೃಷ್ಣಮೂರ್ತಿ

Date:

Advertisements

ಸಾಂಸ್ಥಿಕ ಭಾಷಾಂತರರಗಳು ಭಾರತದ ಬಹು ಭಾಷಗಳಲ್ಲಿ ಸಾಮರಸ್ಯ ಮೂಡಿಸುವ ಕೆಲಸ ಮಾಡುತ್ತವೆ ಎಂದು ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ “ಸಾಂಸ್ಥಿಕ ಅನುವಾದಗಳ ಸವಾಲುಗಳು” ಎಂಬ ವಿಷಯದ ಕುರಿತು ಮಾತನಾಡಿದ ಅವರು, ಸಾಂಸ್ಥಿಕ ಭಾಷಾಂತರದ ವ್ಯಾಪಕತೆ ಅಪಾರವಾದದ್ದು. ಸ್ವಾಂತಂತ್ರ್ಯ ಬಂದ ನಂತರ  ಆಡಳಿತಗಾರರು ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ, ನ್ಯಾಷನಲ್ ಬುಕ್ ಟ್ರಸ್ಟ್ ಮುಂತಾದ ಸಂಸ್ಥೆಗಳನ್ನು ಸ್ಥಾಪಿಸಿದರು. ಅಲ್ಲದೇ ಇಂತಹ ಸಂಸ್ಥೆಗಳು ಅನುವಾದಕರ ಕೆಲಸ ನಿರರ್ಥಕವಾಗಿರುವ ಈಗಿನ ದಿನಮಾನಗಳಲ್ಲಿ ಅವರನ್ನು ಗುರುತಿಸುವ ಕೆಲಸ ಮಾಡುತ್ತಿವೆ ಎಂದರು.

WhatsApp Image 2025 01 21 at 1.59.02 PM

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾಷಾಂತರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಮೋಹನ್ ಕುಂಟಾರ  ಮಾತನಾಡಿ, ಭಾಷಾಂತರ ಎಂಬುದು ಸೃಜನಶೀಲ ಪ್ರಕ್ರಿಯೆ. ಸಾಂಸ್ಥಿಕ ಭಾಷಾಂತರದ ದೃಷ್ಟಿಯೇ ಭಾರತದ ಎಲ್ಲಾ ಭಾಷೆಗಳ ಸಾಹಿತ್ಯವನ್ನು ಏಕರೂಪದಲ್ಲಿ ನೋಡುವುದು. ಆ ಮೂಲಕ ಭಾವೈಕ್ಯ ಸಾಧಿಸುವುದೇ ಈ ಸಂಸ್ಥೆಗಳ ಮುಖ್ಯ ಉದ್ದೇಶ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರೆಬೆಕ್ಕಾ, ಶ್ವೇತಾ ಬಾಳಿ, ಭಾಷಾಂತರ ಅಧ್ಯಯನ ವಿಭಾಗದ ಸಂಶೋಧನಾರ್ಥಿಗಳು, ಇತರ ಅಧ್ಯಯನ ವಿಭಾಗಗಳ ಸಂಶೋಧನಾರ್ಥಿಗಳು ಹಾಗೂ ಎಂ.ಎ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ?:ವಿಜಯನಗರ | ಡಿ. ವಿರೇಶ್ ಗೆ ಪಿಹೆಚ್.ಡಿ ಪದವಿ ಘೋಷಣೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X