ಇಂದಿನಿಂದ ಭಾರತ VS ಇಂಗ್ಲೆಂಡ್‌ ಟಿ20 ಸರಣಿ ಆರಂಭ

Date:

Advertisements

ಇಂದಿನಿಂದ (ಜ.22) ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಬಳಿಕ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.

ಪ್ರಸಕ್ತ ವರ್ಷದಲ್ಲಿ ಭಾರತ ತಂಡಕ್ಕೆ ಇದು ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿಯಾಗಿದ್ದು, ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಟೀಂ ಇಂಡಿಯಾ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದೆ.

ಜ.22ರಿಂದ ಫೆಬ್ರವರಿ 2ರ ವರೆಗೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಬಳಿಕ ಫೆಬ್ರವರಿ 6 ರಿಂದ 12ರ ವರೆಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ20 ಸರಣಿಗೆ ಮಿಸ್ಟರ್-360 ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡವನ್ನು ಪ್ರಕಟಿಸಿರುವ ಬಿಸಿಸಿಐ, ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನ ಪ್ರಕಟಿಸಿದೆ.

Advertisements

ಭಾರತ ಮತ್ತು ಇಂಗ್ಲೆಂಡ್‌ ಈವರೆಗೆ 24 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 13 ಪಂದ್ಯಗಳಲ್ಲಿ ಭಾರತ ಹಾಗೂ 11 ಪಂದ್ಯಗಳಲ್ಲಿ ಇಂಗ್ಲೆಂಡ್‌ ಗೆಲುವು ಸಾಧಿಸಿದೆ.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025ರ ಆರಂಭಕ್ಕೆ ಡೇಟ್‌ ಫಿಕ್ಸ್‌: ಮಾರ್ಚ್ 21ರಂದು ಉದ್ಘಾಟನಾ ಪಂದ್ಯ

2019ರಿಂದ ಈವರೆಗೆ ತವರಿನಲ್ಲಿ 16 ಸರಣಿಗಳನ್ನಾಡಿರುವ ಟೀಂ ಇಂಡಿಯಾ 14 ಸರಣಿಗಳಲ್ಲಿ ಗೆಲುವು ಸಾಧಿಸಿದ್ದು, 2 ಸರಣಿಗಳನ್ನು ಡ್ರಾ ಮಾಡಿಕೊಂಡಿದೆ. 2019ರಲ್ಲಿ ಕೊನೆಯಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಭಾರತ ಸರಣಿ ಸೋತಿತ್ತು.

2023ರ ವರ್ಷದಲ್ಲಿ ಟಿ20 ಕ್ರಿಕೆಟ್‌ನಲ್ಲಿ ನಂ.1 ಪಟ್ಟಕ್ಕೇರಿದ ಭಾರತ, ದೀರ್ಘಕಾಲದಿಂದಲೂ ಅಗ್ರಸ್ಥಾನವನ್ನು ತನ್ನಲ್ಲೇ ಉಳಿಸಿಕೊಂಡಿದೆ. ಕಳೆದ 1 ವರ್ಷದಲ್ಲಿ 70 ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ 18,747 ಅಂಕಗಳು ಹಾಗೂ 268 ರೇಟಿಂಗ್ಸ್‌ನೊಂದಿಗೆ ಅಗ್ರಸ್ಥಾನದಲ್ಲಿದೆ.

ಇನ್ನುಳಿದಂತೆ ಆಸ್ಟ್ರೇಲಿಯಾ (259 ರೇಟಿಂಗ್ಸ್), ಇಂಗ್ಲೆಂಡ್ (255 ರೇಟಿಂಗ್ಸ್), ವೆಸ್ಟ್ ಇಂಡೀಸ್ (247 ರೇಟಿಂಗ್ಸ್), ನ್ಯೂಜಿಲೆಂಡ್ (247 ರೇಟಿಂಗ್ಸ್) ಕ್ರಮವಾಗಿ 2, 3, 4, 5ನೇ ಸ್ಥಾನಗಳಲ್ಲಿವೆ.

ಜ.22 – ಮೊದಲ ಪಂದ್ಯ – ಕೋಲ್ಕತ್ತಾ (ಈಡನ್ ಗಾರ್ಡನ್)
ಜ.25 – 2ನೇ ಪಂದ್ಯ – ಚೆನ್ನೈ (ಚೆಪಾಕ್)
ಜ.28 – 3ನೇ ಪಂದ್ಯ – ರಾಜ್‌ಕೋಟ್ (ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್)
ಜ.31 – 4ನೇ ಪಂದ್ಯ – ಪುಣೆ (ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್)
ಫೆ.02 – 5ನೇ ಪಂದ್ಯ – ಮುಂಬೈ (ವಾಂಖೆಡೆ)

ಪ್ರತಿ ಪಂದ್ಯ ಸಂಜೆ 7:00 ಗಂಟೆಗೆ ಶುರುವಾಗಲಿದೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X