ಟೈರ್ ಸ್ಪೋಟಗೊಂಡ ಪರಿಣಾಮ ರಸ್ತೆಯಲ್ಲಿ ಕ್ರೂಸರ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಿಂಧನೂರು ತಾಲ್ಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ.
ಮಂಗಳವಾರ (ಜ.21) ರಾತ್ರಿ 10:30 ಗಂಟೆ ಸುಮಾರಿಗೆ ಘಟನೆ ಜರುಗಿದ್ದು, ಮಂತ್ರಾಲಯದ ಗುರು ಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹಯವದನ (18), ಸುಜಯೇಂದ್ರ (22) ಹಾಗೂ ಅಭಿಲಾಷ್ (20) ಮತ್ತು ಕ್ರೂಸರ್ ಚಾಲಕ ಕಂಸಾಲಿ ಶಿವ (24) ಮೃತರು ಎಂದು ತಿಳಿದು ಬಂದಿದೆ.
ಕ್ರೂಸರ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
