ದೆಹಲಿ ಚುನಾವಣೆ | ಚೀನೀ ಸಿಸಿಟಿವಿ ಕ್ಯಾಮೆರಾ ಬಳಕೆ, ಪಂಜಾಬ್ ಆಡಳಿತ ದುರುಪಯೋಗ: ಎಎಪಿ, ಬಿಜೆಪಿ ವಾಕ್ಸಮರ

Date:

Advertisements

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇನ್ನು ಕೆಲವೇ ವಾರಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಡುವೆ ಪಂಜಾಬ್ ಎಎಪಿ ಮತ್ತು ದೆಹಲಿ ಬಿಜೆಪಿ ನಡುವೆ ವಾಕ್ಸಮರ ಶುರುವಾಗಿದೆ. ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ತಮ್ಮ ಪ್ರತಿಸ್ಪರ್ಧಿ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಎಎಪಿ ಆಡಳಿತವಿರುವ ಪಂಜಾಬ್‌ನ ಆಡಳಿತದ ದುರುಪಯೋಗ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ದೆಹಲಿಯಲ್ಲಿ ಪಂಜಾಬ್‌ನ ಉದ್ಯೋಗಿಗಳು ಚೀನೀ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದಾರೆ ಎಂದು ಕೂಡಾ ಆರೋಪಿಸಿದ್ದಾರೆ.

ಈ ಆರೋಪಕ್ಕೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡಾ ತಿರುಗೇಟು ನೀಡಿದ್ದಾರೆ. ಸದ್ಯ ಪಂಜಾಬ್ ಎಎಪಿ ಮತ್ತು ದೆಹಲಿ ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಿದೆ. ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಪಂಜಾಬ್ ಸಿಎಂ ಮಾನ್, “ವರ್ಮಾ ಪಂಜಾಬಿಗಳನ್ನು ಅವಮಾನಿಸಿದ್ದಾರೆ” ಎಂದು ಹೇಳಿದ್ದಾರೆ. ಹಾಗೆಯೇ ಈ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ವಿಧಾನಸಭೆ ಚುನಾವಣೆ | ಕಾಂಗ್ರೆಸ್ ಬದಲು ಎಎಪಿ ಬೆಂಬಲಕ್ಕೆ ನಿಂತ ‘ಇಂಡಿಯಾ’ ಮಿತ್ರಪಕ್ಷಗಳು

Advertisements

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ವರ್ಮಾ, “ಚುನಾವಣಾ ಸೋಲಿನ ಭಯದಿಂದ ಅರವಿಂದ್ ಕೇಜ್ರಿವಾಲ್ ಪಂಜಾಬ್ ಸರ್ಕಾರದ ಸಹಾಯದಿಂದ ಕೇವಲ ನೆಪ ಮಾತ್ರಕ್ಕೆ ಕ್ಷೇತ್ರದ ಕೊಳಗೇರಿಗಳಲ್ಲಿ ಚೀನೀ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದಾರೆ” ಎಂದು ಹೇಳಿಕೊಂಡಿದ್ದಾರೆ.

“ಆತುರದಿಂದ ಅಳವಡಿಸಲಾದ ಈ ಚೀನೀ ಸಿಸಿಟಿವಿ ಕ್ಯಾಮೆರಾಗಳಿಂದ ಭದ್ರತಾ ಬೆದರಿಕೆಗಳಿದೆ. ಇಷ್ಟು ಮಾತ್ರವಲ್ಲದೆ ಪಂಜಾಬ್‌ನ ಶಿಕ್ಷಕರು ಮತ್ತು ಉದ್ಯೋಗಿಗಳನ್ನು ದೆಹಲಿಯಲ್ಲಿ ಚುನಾವಣಾ ಪ್ರಚಾರಕ್ಕೆ ಎಎಪಿ ಕರೆತಂದಿದೆ. ಅವರು ಎಎಪಿ ಕಾರ್ಯಕರ್ತರಂತೆ ಶಾಲು ಮೊದಲಾದವುಗಳನ್ನು ಧರಿಸುಕೊಂಡು ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಅಮೃತಸರ ಮೂಲದ ಇಬ್ಬರು ಶಿಕ್ಷಕರನ್ನು ಇಲ್ಲಿ ಪೊಲೀಸರು ಬಂಧಿಸಿದ್ದಾರೆ” ಎಂದು ವರ್ಮಾ ಆರೋಪಿಸಿದ್ದಾರೆ.

“ಪಂಜಾಬ್ ನೋಂದಣಿಯ ಸಾವಿರಾರು ವಾಹನಗಳು ನವದೆಹಲಿಯಲ್ಲಿ ಓಡಾಡುತ್ತಿವೆ. ಪಂಜಾಬ್ ಸರ್ಕಾರಕ್ಕೆ ಸೇರಿದ ಟ್ರಕ್‌ಗಳಲ್ಲಿ ನೀರು ಸರಬರಾಜು ಯಂತ್ರಗಳು, ಕುರ್ಚಿಗಳು ಮತ್ತು ಇತರ ಸಾಮಗ್ರಿಗಳನ್ನು ದೆಹಲಿಗೆ ಸಾಗಿಸಲಾಗುತ್ತಿದೆ” ಎಂದೂ ದೂರಿದ್ದಾರೆ. ಹಾಗೆಯೇ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ (ಇಸಿ) ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ವಿಧಾನಸಭೆ ಚುನಾವಣೆ | ಎಎಪಿಯ ಅಂತಿಮ ಅಭ್ಯರ್ಥಿ ಪಟ್ಟಿ ಬಿಡುಗಡೆ

ದೆಹಲಿ ಬಿಜೆಪಿ ಮುಖಂಡನ ಈ ಆರೋಪಕ್ಕೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ದೆಹಲಿ ಸಿಎಂ ಮಾನ್, “ದೆಹಲಿ ದೇಶದ ರಾಜಧಾನಿಯಾಗಿದೆ. ವಿವಿಧ ರಾಜ್ಯಗಳಲ್ಲಿ ನೋಂದಾಯಿಸಲಾದ ವಾಹನಗಳು ರಾಜಧಾನಿಯಲ್ಲಿ ಸಂಚರಿಸುತ್ತದೆ. ಯಾವುದೇ ರಾಜ್ಯದಲ್ಲಿ ನೋಂದಾಯಿಸಲಾದ ವಾಹನ ದೇಶದ ಎಲ್ಲಿ ಬೇಕಾದರೂ ಸಂಚರಿಸಬಹುದು. ಅದಕ್ಕೆ ಯಾವುದೇ ನಿರ್ಬಂಧವಿಲ್ಲ” ಎಂದು ಹೇಳಿದರು.

“ವರ್ಮಾ ಹೇಳಿಕೆಯು ತುಂಬಾ ಅಪಾಯಕಾರಿ, ಆತಂಕಕಾರಿ ಮತ್ತು ಪಂಜಾಬಿಗಳಿಗೆ ಅವಮಾನಕರವಾಗಿದೆ. ಅವರು ಪಂಜಾಬ್ ನೋಂದಣಿ ಸಂಖ್ಯೆಗಳನ್ನು ಹೊಂದಿರುವ ವಾಹನಗಳನ್ನು ಗುರುತಿಸುತ್ತಿದ್ದಾರೆ ಮತ್ತು ಪಂಜಾಬ್‌ನ ವಾಹನಗಳು ದೆಹಲಿಯಲ್ಲಿ ಏಕೆ ಸಂಚರಿಸುತ್ತಿವೆ ಎಂದು ಪ್ರಶ್ನಿಸುತ್ತಿದ್ದಾರೆ. ವರ್ಮಾ ಅವರ ಹೇಳಿಕೆಯು ಪಂಜಾಬಿಗಳು ದೇಶದ ಭದ್ರತೆಗೆ ಬೆದರಿಕೆ ಎಂಬಂತ ಅರ್ಥವನ್ನು ನೀಡುತ್ತದೆ. ಅದಕ್ಕಾಗಿ ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಅಮಿತ್ ಶಾ ಅವರೇ ನಿಮಗೆ ಗಡಿಯನ್ನು ಸುರಕ್ಷಿತವಾಗಿಡಲೂ ಸಾಧ್ಯವಾಗುತ್ತಿಲ್ಲ ಅಥವಾ ದೆಹಲಿಯನ್ನು ಕೂಡಾ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಾವಿರಾರು ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳು ದೇಶಕ್ಕೆ ಬರುತ್ತಿದ್ದಾರೆ. ನಿಮಗೆ ಅವರಿಂದ ಸಮಸ್ಯೆಯಿಲ್ಲವೇ? ಆದರೆ ನೀವು ಪಂಜಾಬ್‌ನಿಂದ ದೆಹಲಿಗೆ ಬರುವ ಪಂಜಾಬಿಗಳು ದೇಶಕ್ಕೆ ಬೆದರಿಕೆ ಎಂದು ಕರೆಯುತ್ತಿದ್ದೀರಿ. ನೀವು ಪಂಜಾಬಿಗಳಿಗೆ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಇದರಿಂದಾಗಿ ಪ್ರತಿಯೊಬ್ಬ ಪಂಜಾಬಿ ತೀವ್ರ ನೋವು ಮತ್ತು ಅವಮಾನವನ್ನು ಅನುಭವಿಸುತ್ತಿದ್ದಾರೆ. ನಿಮ್ಮ ಕೊಳಕು ರಾಜಕೀಯಕ್ಕಾಗಿ ಪಂಜಾಬಿಗಳ ದೇಶಭಕ್ತಿಯನ್ನು ಈ ರೀತಿ ಪ್ರಶ್ನಿಸುವುದು ಸರಿಯಲ್ಲ” ಎಂದು ಹೇಳಿದ್ದಾರೆ. ಜೊತೆಗೆ ವರ್ಮಾ ಅವರ ಪತ್ರಿಕಾಗೋಷ್ಠಿಯ 17 ಸೆಕೆಂಡುಗಳ ವಿಡಿಯೋವನ್ನೂ ಪೋಸ್ಟ್ ಮಾಡಿದ್ದಾರೆ.

70 ಸದಸ್ಯರ ದೆಹಲಿ ವಿಧಾನಸಭೆಯ ಚುನಾವಣೆಯು ಫೆಬ್ರವರಿ 5ರಂದು ನಡೆಯಲಿದ್ದು, ಫೆಬ್ರವರಿ 8ರಂದು ಫಲಿತಾಂಶ ಹೊರಬೀಳಲಿದೆ. ಚುನಾವಣೆಗಾಗಿ ಈಗಾಗಲೇ ಕಾಂಗ್ರೆಸ್, ಬಿಜೆಪಿ, ಎಎಪಿ ಸಿದ್ಧತೆಯನ್ನು ನಡೆಸುತ್ತಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಭಾಗವಾಗಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಎಎಪಿ, ಕಾಂಗ್ರೆಸ್ ವಿಧಾನಸಭೆ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X